ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮಂಡ್ಯ

ಮಾ. 2ರಿಂದ ವಕೀಲರಿಗೆ ಮಧ್ಯಸ್ಥಿಕೆ ತರಬೇತಿ

Parashurama
Updated On : 28 Feb 2013, 12:08 pm

ಮಂಡ್ಯ:  ಬೆಂಗಳೂರು ಮಧ್ಯಸ್ಥಿಕೆ ಕೇಂದ್ರ, ಮಂಡ್ಯ ಹಾಗೂ ರಾಮನಗರ ಜಿಲ್ಲಾ ಮಧ್ಯಸ್ಥಿಕೆ ಕೇಂದ್ರ ಮತ್ತು ವಕೀಲರ ಸಂಘದ ಆಶ್ರಯದಲ್ಲಿ ಮಾ.2 ರಿಂದ 6 ರವರೆಗೆ ವಕೀಲರಿಗೆ 5 ದಿನಗಳ ಮಧ್ಯಸ್ಥಿಕೆ ತರಬೇತಿ ಆಯೋಜಿಸಲಾಗಿದೆ.
ಮಾ.2ರಂದು ಬೆಳಿಗ್ಗೆ 9.30ಕ್ಕೆ ಮಂಡ್ಯ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಮಂಡ್ಯ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ರಾಮಮೋಹನ್ ರೆಡ್ಡಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ರಾಮನಗರ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಕೆ.ಎನ್.ಕೇಶವ ನಾರಾಯಣ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಮಂಡ್ಯ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕೆ.ಆರ್.ಕೇಶವಮೂರ್ತಿ ಹಾಗೂ ರಾಮನಗರ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಟಿ.ಕೆ.ಶಾಂತಪ್ಪ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments