ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮಂಡ್ಯ

'ಸಾವಯವ ಕೃಷಿಯಿಂದ ಉತ್ತಮ ಇಳುವರಿ'

Parashurama
Updated On : 27 Feb 2013, 11:35 am

ಭೇರ್ಯ: ಸಾವಯವ ಕೃಷಿಯಿಂದ ಜನಸಂಖ್ಯೆಗೆ ಅನುಸಾರವಾಗಿ ಆಹಾರಧಾನ್ಯ ಉತ್ಪಾದನೆ ಕಷ್ಟಸಾಧ್ಯವಾದರೂ, ಹಂತ ಹಂತವಾಗಿ ಉತ್ತಮ ಇಳುವರಿ ಪಡೆಯಬಹುದು ಎಂದು ಸಹಾಯಕ ಕೃಷಿ ಅಧಿಕಾರಿ ಪ್ರವೀಣ್ ಹೇಳಿದರು.
ಸಾಲಿಗ್ರಾಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಗಾಯನಹಳ್ಳಿಯಲ್ಲಿ ಆಯೋಜಿಸಿರುವ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರದಲ್ಲಿ ಸಾವಯವ ಕೃಷಿಯ ಪ್ರಾಮುಖ್ಯತೆ ಕುರಿತು ಮಾತನಾಡಿ, ದೇಶದಲ್ಲಿ ಕಡಿಮೆ ಮಟ್ಟದಲ್ಲಿ ರಸಗೊಬ್ಬರ ಬಳಕೆಯಾಗುತ್ತಿದ್ದರೂ ಸರಿಯಾದ ಪ್ರಮಾಣದಲ್ಲಿ ಬಳಸದಿರುವುದು ಸಮಸ್ಯೆಗೆ ಕಾರಣವಾಗಿದೆ. ರೈತರು ಲಭ್ಯವಿರುವ ನೀರಿಗೆ ಅನುಗುಣವಾಗಿ ಬೆಳೆ ಪದ್ಧತಿ ಬದಲಾಯಿಸುವುದರಿಂದ ನಷ್ಟ ತಪ್ಪುವುದರ ಜತೆಗೆ ಉತ್ತಮ ಇಳುವರಿ ಸಾಧ್ಯ ಎಂದು ತಿಳಿಸಿದರು.
ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮಾಜಿ ಅಧ್ಯಕ್ಷ ಮಧುಚಂದ್ರ, ರೈತರು ಎದುರಿಸುತ್ತಿರುವ ಸವಾಲುಗಳು, ಯುವ ಜನತೆ ಕೃಷಿ ಕ್ಷೇತ್ರದಲ್ಲಿ ತೊಡಗಬೇಕಾದ ಅನಿವಾರ್ಯತೆ ಕುರಿತು ಮಾತನಾಡಿದರು.
ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಶ್ರೀನಿವಾಸಗೌಡ, ಪ್ರಾಧ್ಯಾಪಕರಾದ ಶ್ರೀನಿವಾಸ್, ಶಿವಕುಮಾರಸ್ವಾಮಿ, ಕೃಷ್ಣೇಗೌಡ, ರಾಜೇಶ್, ಪತ್ರಕರ್ತ ಮಹದೇವ್, ಕೆ.ಟಿ. ಮೋಹನ್‌ಕುಮಾರ್, ಎನ್‌ಎಸ್‌ಎಸ್ ಘಟಕಾಧಿಕಾರಿ ಕುಮಾರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement