ಒಕ್ಕೊರಲ ಒತ್ತಾಯದ ಮೇರೆಗೆ ಜೆಡಿಎಸ್ಗೆ
ಭಾರತೀನಗರ: ಒಕ್ಕೊರಲಿನ ಅನುಮತಿ ಮೇರೆಗೆ ಜೆಡಿಎಸ್ ಸೇರ್ಪಡೆಗೊಳ್ಳುತ್ತಿದ್ದು, ಯಾವುದೇ ಭಿನ್ನಾಭಿಪ್ರಾಯ ಇಟ್ಟುಕೊಳ್ಳದೆ ಕಾರ್ಯಕರ್ತರು ಪಕ್ಷ ಸಂಘಟನೆ ಮುಂದಾಗಬೇಕು ಎಂದು ಮಾಜಿ ಶಾಸಕ ಡಿ.ಸಿ.ತಮ್ಮಣ್ಣ ತಿಳಿಸಿದ್ದಾರೆ.
ತಮ್ಮ ನಿವಾಸದ ಕಚೇರಿಯಲ್ಲಿ ಏರ್ಪಡಿಸಿದ್ದ ಕಾರ್ಯಕರ್ತರ ಸಭೆಯಲ್ಲಿ 2 ಗಂಟೆಗೂ ಹೆಚ್ಚು ಕಾಲ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿ ಮಾತನಾಡಿದ ಅವರು, ಒಂದು ತಿಂಗಳಿಂದ ಕ್ಷೇತ್ರದ ಪ್ರತಿಯೊಂದು ಗ್ರಾಮಗಳಿಗೂ ತೆರಳಿ ಜನರೊಂದಿಗೆ ಚರ್ಚೆ ನಡೆಸಿ ಜನಾಭಿಪ್ರಾಯ ಸಂಗ್ರಹಿಸಿರುವುದಾಗಿ ತಿಳಿಸಿದರು.
ಕಾರ್ಯಕರ್ತರು ಹೊಸಬರು, ಹಳಬರು ಎಂಬ ಯಾವುದೇ ಗೊಂದಲವನ್ನುಟ್ಟಿಕೊಳ್ಳದೆ ತನ್ನನ್ನು ವಿಧಾನ ಸಭಾಚುನಾವಣೆಯಲ್ಲಿ ಗೆಲ್ಲಿಸುವುದರ ಮೂಲಕ ಕುಮಾರಸ್ವಾಮಿ ಅವರ ಕೈ ಬಲಪಡಿಸಬೇಕು ಎಂದು ಮನವಿ ಮಾಡಿದರು.
ಬಿಜೆಪಿ ನಂಬಿದರೆ ಅಭಿವೃದ್ಧಿ ಸಾಧ್ಯವಿಲ್ಲವೆಂದು ಅರಿತ ಕಾರ್ಯಕರ್ತರು ಮತ್ತು ಮುಖಂಡರು ಜೆಡಿಎಸ್ಗೆ ಬರಬೇಕೆಂದು ಒತ್ತಾಯ ಬಂದ ಹಿನ್ನೆಲೆಯಲ್ಲಿ ತನ್ನ ನಿರ್ಧಾರ ಪ್ರಕಟಿಸುತ್ತಿರುವುದಾಗಿ ತಿಳಿಸಿದರು. ಮಾ.3 ರಂದು ಸಹಸ್ರಾರು ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಜೆಡಿಎಸ್ ಸೇರುತ್ತಿರುವುದಾಗಿ ಈ ಸಂದರ್ಭದಲ್ಲಿ ಡಿ.ಸಿ.ತಮ್ಮಣ್ಣ ಪ್ರಕಟಿಸಿದರು. ಜಿ.ಪಂ ಮಾಜಿ ಸದಸ್ಯ ಕುಮಾರ್ ರಾಜು ಮಾತನಾಡಿ ಮತ್ತಿತರರು ಈ ಸಂದರ್ಭದಲ್ಲಿ ಮಾತನಾಡಿದರು.
ತಾಪಂ ಸದಸ್ಯರಾದ ಲಲಿತಮ್ಮ ಸೇಟುಸಿದ್ದೇಗೌಡ, ಎನ್.ಸಿ.ಪುಟ್ಟಸ್ವಾಮಿ, ಗ್ರಾ.ಪಂ ಮಾಜಿ ಅಧ್ಯಕ್ಷ ಚಂದ್ರಶೇಖರ್, ಮುಖಂಡರಾದ ಎ.ಪಿ.ರಾಜಣ್ಣ, ಚನ್ನಶೆಟ್ಟಿ, ಕಾಡುಕೊತ್ತನಹಳ್ಳಿ ಮಹದೇವು, ಮಂಚೇಗೌಡ, ಕೆ.ಟಿ.ಸುರೇಶ್, ಬಸವೇಗೌಡ ಸೇರಿದಂತೆ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.