ತಾಯಿ, ಮಗು ಮರಣ ಪ್ರಮಾಣ ತಗ್ಗಿಸಿ: ಜಿಲ್ಲಾಧಿಕಾರಿ ಕೃಷ್ಣಯ್ಯ
ಮಂಡ್ಯ: ತಾಯಿ ಹಾಗೂ ಶಿಶು ಮರಣ ಪ್ರಮಾಣ ಕಡಿಮೆ ಮಾಡಲು ಸರ್ಕಾರ ಎಲ್ಲಾ ಸೌಲಭ್ಯಗಳನ್ನು ಒದಗಿಸಿದ್ದರೂ ಶಿಶು ಮರಣದ ಸಂಖ್ಯೆ ಹೆಚ್ಚಾಗುತ್ತಿರುವುದು ವಿಷಾದನೀಯ. ಈ ಸಂಬಂಧ ವೈದ್ಯಾಧಿಕಾರಿಗಳು ಎಚ್ಚರಿಕೆ ವಹಿಸಿ, ಜನರಲ್ಲಿ ಅರಿವು ಮೂಡಿಸುವಂತೆ ಜಿಲ್ಲಾಧಿಕಾರಿಕೃಷ್ಣಯ್ಯ ಸಲಹೆ ಮಾಡಿದರು.
ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನ ಕಾರ್ಯಕ್ರಮದ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ, ಸರ್ಕಾರಿ ಆಸ್ಪತ್ರೆಗಳಿಗೆ ಬಡವರು ನಿರ್ಗತಿಕರು ಬರುತ್ತಾರೆ. ಇವರ ಆರೋಗ್ಯದ ದೃಷ್ಠಿಯಿಂದ ಸರ್ಕಾರ ಯೋಜನೆ ಜಾರಿಗೆ ತಂದಿದೆ ಎಂದು ತಿಳಿಸಿದರು.
ತಜ್ಞ ವೈದ್ಯಾಧಿಕಾರಿಗಳು ಆಧುನಿಕ ತಂತ್ರಜ್ಞಾನಗಳು ಇದ್ದರೂ ಶಿಶು ಮರಣ ವರದಿಯಾಗುತ್ತಿವೆ. ಇಂತಹ ಪ್ರಕರಣಗಳು ಸಂಭವಿಸಿದಾಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಹಾಗೂ ತಾಲೂಕು ಆರೋಗ್ಯಾಧಿಕಾರಿಗಳು ಖುದ್ದು ಸ್ಥಳಕ್ಕೆ ಹೋಗಿ ವಾಸ್ತವ ಸ್ಥಿತಿ ತಿಳಿಯಬೇಕು. ಮುಂದೆ ಈ ಪ್ರಕರಣ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಕಿವಿಮಾತು ಹೇಳಿದರು.
ಪ್ರೀಡಿಯಾಟ್ರಿಕ್ ವೆಂಟಿಲೇಷನ್ ಖರೀದಿಗೆ ಅನುದಾನ ಇದೆ. ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆ ನಿರ್ದೇಶಕರು ಖರೀದಿ ಪ್ರಕ್ರಿಯೆ ಆರಂಭಿಸಬೇಕು. ಮಂಡ್ಯ ಜಿಲ್ಲೆಯಲ್ಲಿ ಈ ಸೌಲಭ್ಯವೇ ತ್ವರಿತವಾಗಿ ಖರೀದಿ ಆಗಬೇಕೆಂದು ಎಂದು ವೈದ್ಯಕೀಯ ಅಧೀಕ್ಷಕರಿಗೆ ಈ ಸಂದರ್ಭದಲ್ಲಿ ಸೂಚಿಸಿದರು. ಜಿಲ್ಲೆಯಲ್ಲಿ ಕಾಲರಾ, ಮಲೇರಿಯಾ, ಡೆಂಘಿ ರೋಗಿಗಳು ದಾಖಲಾಗುತ್ತಿ ದ್ದಾರೆ. ನಗರ ಸ್ಥಳೀಯ ಸಂಸ್ಥೆಗಳಿಗೆ ನೂತನವಾಗಿ ಚುನಾಯಿತರಾಗುವ ಸದಸ್ಯರುಗಳಿಗೆ ಈ ಬಗ್ಗೆ ಅರಿವು ಮೂಡಿಸಬೇಕು ಎಂದು ಜಿಲ್ಲಾ ರೋಗವಾಹಕ ಹಾಗೂ ಆಶ್ರಿತ ರೋಗಗಳ ನಿಯಂತ್ರಕ ಅಧಿಕಾರಿಗಳಿಗೆ ತಿಳಿಸಿದರು.
ಡಿಹೆಚ್ಒ ಡಾ.ಟಿ.ಎನ್.ಮರೀಗೌಡ, ಡಾ.ರೋಚನಾ, ಡಾ.ಸೋಮಶೇಖರ್, ಡಾ.ಗಂಗಾಧರ್, ಡಾ.ವನಜಾಕ್ಷಿ ಸೇರಿದಂತೆ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.