ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮಂಡ್ಯ

ಪಡಿತರ ವಿತರಣೆಯಲ್ಲಿ ಬಯೋವುಟ್ರಿಕ್ ಬೇಡ

Parashurama
Updated On : 28 Feb 2013, 10:35 am

ಮಂಡ್ಯ: ಬಯೋವುಟ್ರಿಕ್ ಪದ್ಧತಿ ಜಾರಿಗೆ ತಂದಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ಪದಾಧಿಕಾರಿಗಳು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದ ಸಂಘದ ಪದಾಧಿಕಾರಿಗಳು, ಸರ್ಕಾರ ಜಾರಿಗೆ ತಂದಿರುವ ಬಯೋವುಟ್ರಿಕ್ ಪದ್ಧತಿ ಅವೈಜ್ಞಾನಿಕ ಹಾಗೂ ಆತುರ ಕ್ರಮವಾಗಿದೆ. ಈ ಪದ್ಧತಿಯಲ್ಲಿ ಸಾಕಷ್ಟು ನ್ಯೂನತೆಗಳಿವೆ. ಇದರಿಂದ ಪಡಿತರ ವಿತರಣೆ ಮಾಡುವುದು ತುಂಬಾ ಕಷ್ಟವಾಗಿದೆ ಎಂದು ದೂರಿದರು.
ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ತಾಂಡವವಾಡುತ್ತಿದೆ. ಈ ಪದ್ದತಿಯಲ್ಲಿ ಗಣಕ ಯಂತ್ರದ ಅನೇಕ ತೂಕದ ಯಂತ್ರವನ್ನು ಸಹ ಅಳವಡಿಸಿರುವುದರಿಂದ ಇದನ್ನು ಅನುಷ್ಠಾನಗೊಳಿಸಲು ಸಾಧ್ಯವಾಗದೆ ಜನರಿಗೆ ಪಡಿತರ ಪದಾರ್ಥಗಳನ್ನು ಸಮಯಕ್ಕೆ ಸರಿಯಾಗಿ ವಿತರಿಸಲು ಸಾಧ್ಯವಾಗುತ್ತಿಲ್ಲ ಎಂದು ಪ್ರತಿಭಟನಾಕಾರರು ದೂರಿದರು. ಕೂಡಲೇ ಈ ಪದ್ಧತಿಯನ್ನು ತೆಗೆದು ಹಾಕಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿರುವ ಎಲ್ಲಾ ಸಗಟು ಮಳಿಗೆಗಳಿಗೆ ಮತ್ತು ಎಫ್‌ಸಿಐ ಗೋಡೌನ್‌ಗಳಿಗೆ ಬಯೋವುಟ್ರಿಕ್ ಅಳವಡಿಸಿ ನಂತರ ರಾಜ್ಯ ಪಡಿತರ ವಿತರಕರ ಪಡಿತರ ಸಂಘದವರೊಂದಿಗೆ ಚರ್ಚಿಸಿ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ಪಡಿತರ ಅಂಗಡಿ ಮಾಲೀಕರಿಗೆ ಬರಬೇಕಾದ ಕಮೀಷನ್ ಮತ್ತು ಸಾಗಾಣಿಕೆ ವೆಚ್ಚ ತುಂಬಾ ದಿನಗಳಿಂದ ಆರ್ಥಿಕ ಇಲಾಖೆಯಲ್ಲಿ ಹಣ ಪಾವತಿಯಾಗದೇ ಬಾಕಿ ಇದೆ. ಈ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ಸರ್ಕಾರದ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.ಪ್ರತಿಭಟನೆಯಲ್ಲಿ ಪಡಿತರ ವಿತರಕರ ಸಂಘದ ರಾಜ್ಯಾಧ್ಯಕ್ಷ ಕೃಷ್ಣಪ್ಪ, ಸುಬ್ಬಣ್ಣ, ಕೀಲಾರ ಚಂದ್ರು, ತ್ಯಾಗರಾಜು ಹಲವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments