ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮಂಡ್ಯ

ಸಚಿವರಿಂದ ಚುನಾವಣಾ ಅಕ್ರಮ

Parashurama
Updated On : 28 Feb 2013, 11:22 am

ಮೈಸೂರು: ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎ. ರಾಮದಾಸ್ ಅವರು ಸರ್ಕಾರದ ಆಡಳಿತ ಯಂತ್ರ ದುರುಪಯೋಗಪಡಿಸಿಕೊಂಡು ಚುನಾವಣೆ ಅಕ್ರಮ ಎಸಗುತ್ತಿದ್ದಾರೆ ಎಂದು ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಎಂ.ಕೆ. ಸೋಮಶೇಖರ್ ಆರೋಪಿಸಿದರು.
ಕೆ.ಆರ್. ಕ್ಷೇತ್ರದ ವ್ಯಾಪ್ತಿಯಲ್ಲಿ ರಾಮದಾಸ್ ಅವರು ಸೀರೆ, ಛತ್ರಿ, ಟಿವಿ ಸೆಟಾಪ್ ಬಾಕ್ಸ್ ಸೇರಿದಂತೆ ವಿವಿಧ ವಸ್ತುಗಳನ್ನು ವಿತರಿಸುತ್ತಿದ್ದಾರೆ. ಅಲ್ಲದೆ, ಮನೆ ಮನೆಗೆ ಆಸರೆ ಫೌಂಡೇಷನ್ ವತಿಯಿಂದ ನಾಮಫಲಕ ಹಾಕಿಸುತ್ತಿದ್ದಾರೆ. ಸಂಬಂಧಪಟ್ಟವರು ಇದನ್ನು ಕಂಡರು ಕಾಣದಂತೆ ಇದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.
ಮುಂಬರುವ ವಿಧಾನಸಭಾ ಚುನಾವಣೆಗೆ ಈಗಿನ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯೂ ಪೂರಕ ಪರೀಕ್ಷೆ ಆಗಿದೆ. ಹೀಗಾಗಿ, ರಾಮದಾಸ್ ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಈ ಸಂಬಂಧ ಚುವಾವಣಾ ಆಯೋಗದ ಅಧಿಕಾರಿಗಳಿಗೆ ದೂರು ನೀಡುವುದಾಗಿ ಹೇಳಿದರು.
ಆಶೀರ್ವದಿಸಿ: ಬಿಜೆಪಿ ಬಗ್ಗೆ ಮತದಾರರು ಬೇಸತ್ತಿದ್ದಾರೆ. ಸರ್ಕಾರದ ಭ್ರಷ್ಟಾಚಾರದಿಂದ ಜನ ಅಸಹ್ಯಪಟ್ಟುಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷದತ್ತ ಜನ ಒಲವು ತೋರಿಸುತ್ತಿದ್ದಾರೆ. ಮೈಸೂರು ನಗರಪಾಲಿಕೆಯಲ್ಲಿ 45ಕ್ಕೂ ಹೆಚ್ಚಿನ ಸೀಟು ಗೆದ್ದು, ಅಧಿಕಾರದ ಚುಕ್ಕಾಣಿ ಹಿಡಿಯುತ್ತೇವೆ. ಇದಕ್ಕಾಗಿ ಮತದಾರರು ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು ಎಂದು ಅವರು ಮನವಿ ಮಾಡಿದರು. ಪಾಲಿಕೆ ಚುನಾವಣೆಯಲ್ಲಿ ಸಾಮಾಜಿಕ ನ್ಯಾಯದಡಿ ಪ್ರತಿಯೊಂದು ಜಾತಿ, ಧರ್ಮದ ಅಭ್ಯರ್ಥಿಗಳಿಗೆ ಭಿ ಫಾರಂ ನೀಡಲಾಗಿದೆ. ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿರುವುದಾಗಿ ತಿಳಿಸಿದರು. ಕಾಂಗ್ರೆಸ್ ನಗರ ಪ್ರಧಾನ ಕಾರ್ಯದರ್ಶಿ ಹಾಗೂ ವಕ್ತಾರ ಎಚ್.ಎ. ವೆಂಕಟೇಶ್, ಪಾಲಿಕೆ ಮಾಜಿ ಸದಸ್ಯ ಎನ್.ಬಿ. ತಿವಾರಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments