4 ಲಕ್ಷ ಮೌಲ್ಯದ ಕೊಪ್ಪರಿಕೆ ವಶ
ಮದ್ದೂರು: ತಾಲೂಕಿನ ಚಾಮನಹಳ್ಳಿ ಗ್ರಾಮದ ಶಿಂಷಾ ನದಿ ಪಾತ್ರದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಸುತ್ತಿದ್ದ ಕೇಂದ್ರದ ಮೇಲೆ ಶುಕ್ರವಾರ ದಾಳಿ ನಡೆಸಿದ ಕಂದಾಯ ಹಾಗೂ ಗೃಹರಕ್ಷಕದಳದ ಅಧಿಕಾರಿಗಳ ತಂಡ 4 ಲಕ್ಷ ಮೌಲ್ಯದ 20 ಕೊಪ್ಪರಿಕೆಗಳನ್ನು ವಶಪಡಿಸಿಕೊಂಡಿದ್ದಾರೆ.
ಗಣಿಗಾರಿಕೆ ಬಗ್ಗೆ ದೊರೆತ ಖಚಿತ ಮಾಹಿತಿ ಆಧಾರದ ಮೇಲೆ ಬೆಳಗಿನ ಜಾವ ದಾಳಿ ನಡೆಸಿದ ತಹಸೀಲ್ದಾರ್ ಎಂ.ಕೆ.ಸವಿತಾ ಶ್ರೀನಿವಾಸ್ ನೇತೃತ್ವದ ಅಧಿಕಾರಿಗಳ ತಂಡ ಕೊಪ್ಪರಿಕೆಗಳನ್ನು ವಶಪಡಿಸಿಕೊಂಡಿದ್ದಾರೆ. ಅಧಿಕಾರಿಗಳ ದಾಳಿ ಸಂದರ್ಭದಲ್ಲಿ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.