ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮಂಡ್ಯ

ಮತದಾನದಿಂದ ಯುವಕರು ವಿಮುಖರಾಗದಿರಲಿ: ಲತಾ

Parashurama
Updated On : 25 Jan 2013, 10:19 am

ಪಾಂಡವಪುರ: ಯುವ ಜನತೆ ಚುನಾವಣೆಯಲ್ಲಿ ಮತ ಚಲಾಯಿಸುವ ವ್ಯವಸ್ಥೆ ಬೆಳೆಸಿಕೊಂಡಾಗ ಮಾತ್ರ ಸದೃಢ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದು  ಉಪವಿಭಾಗಾಧಿಕಾರಿ ಆರ್. ಲತಾ ಹೇಳಿದರು.
ಪಟ್ಟಣದ ತಹಸೀಲ್ದಾರ್ ಕಾರ್ಯಾಲಯದಲ್ಲಿ ಶುಕ್ರವಾರ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಯುವ ಜನತೆ ರಾಷ್ಟ್ರದ ಶಕ್ತಿಯಾಗಿರುವುದರಿಂದ ಪ್ರತಿಯೊಬ್ಬರೂ ಮತದಾನದಲ್ಲಿ ನಿರಾಸಕ್ತಿ ವಹಿಸದೆ ಉತ್ತಮ ವ್ಯಕ್ತಿಗೆ ಮತದಾನ ಮಾಡಿ ಪ್ರಜಾಪ್ರಭುತ್ವ ಉಳಿವಿಗೆ ಶ್ರಮಿಸಬೇಕೆಂದು ಮನವಿ ಮಾಡಿದರು.
ಪಾಂಡವಪುರ ಜೆಎಂಎಫ್‌ಸಿ(ಕಿರಿಯ) ನ್ಯಾಯಾಲಯ ನ್ಯಾಯಾಧೀಶ ಎಂ. ಶಶಿಧರ್ ಮಾತನಾಡಿ, ಹಿಂದೆ ನಡೆದು ಬಂದ ದಾರಿ ಬಗ್ಗೆ ಯುವ ಜನತೆ ಅವಲೋಕನ ಮಾಡಿಕೊಳ್ಳಬೇಕಾಗಿದೆ. ರಾಜಪ್ರಭುತ್ವ ಆಡಳಿತದಲ್ಲಿ ನಡೆಯುತ್ತಿದ್ದ ದಬ್ಬಾಳಿಕೆ ಹೋಗಲಾಡಿಸಿಲು ಸಂವಿಧಾನದ ಚೌಕಟ್ಟಿನ ವ್ಯವಸ್ಥೆಯಡಿ ಮತದಾನದ ಹಕ್ಕನ್ನು ತರಲಾಗಿದೆ. ರಾಜಪ್ರಭುತ್ವದಲ್ಲಿ ಮತದಾನಕ್ಕೆ ಬೆಲೆ ಇರಲಿಲ್ಲ. ಅದರೆ, ಪ್ರಜಾಪ್ರಭುತ್ವದಲ್ಲಿ ಮತದಾರನಿಗೆ ಚುನಾವಣೆಯಲ್ಲಿ ನಿರ್ಭೀತರಾಗಿ ಮತದಾನ ಮಾಡಲು ಹಕ್ಕಿದೆ. ಅದನ್ನು ಬಳಸಿ ರಾಷ್ಟ್ರದ ಪ್ರಗತಿಗೆ ಮುಂದಾಗಬೇಕೆಂದು ಹೇಳಿದರು.
ಕಾರ್ಯಕ್ರಮವನ್ನು ಪಾಂಡವಪುರ ಜೆಎಂಎಫ್‌ಸಿ(ಹಿರಿಯ) ನ್ಯಾಯಾಲಯ ನ್ಯಾಯಾಧೀಶ ಮಲ್ಲಣ್ಣಗೌಡ ಪಾಟೀಲ್ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ತಾಪಂ ಕಾರ್ಯನಿರ್ವಹಣಾಧಿಕಾರಿ ಬಸವರಾಜ್, ತೋಟಗಾರಿಕೆ ಇಲಾಖೆ ಅಧಿಕಾರಿ ಸುರೇಶ್, ತಹಸೀಲ್ದಾರ್ ಗ್ರೇಡ್ -2 ಪಾಪಣ್ಣ, ವಿವಿಧ ಅಧಿಕಾರಿಗಳು ಭಾಗವಹಿಸಿದ್ದರು. ಇದೇ ಸಂಧರ್ಭದಲ್ಲಿ ಮತದಾರರಾಗಿ ಹೊಸದಾಗಿ ಸೇರ್ಪಡೆಯಾದವರಿಗೆ ಗುರುತಿನ ಚೀಟಿ ವಿತರಿಸಲಾಯಿತು. ಪ್ರಬಂಧ, ಚಿತ್ರಕಲಾ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ನೀಡಿ ಗೌರವಿಸಲಾಯಿತು. ಚುನಾವಣೆಯಲ್ಲಿ ಉತ್ತಮವಾಗಿ ಕೆಲಸ ಮಾಡಿದ ಚುನಾವಣಾಧಿಕಾರಿಗಳಿಗೆ ಸನ್ಮಾನಿಸಿ, ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು. ವರುಣ್ ನಿರೂಪಿಸಿ, ವಂದಿಸಿದವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments