ಸಿಲಿಂಡರ್ ಕಳ್ಳನಿಗೆ ಧರ್ಮದೇಟು
ಮಂಡ್ಯ: ನಗರದ ನೂರಡಿ ರಸ್ತೆಯಲ್ಲಿರುವ ಮಹದೇಶ್ವರ ಗ್ಯಾಸ್ ಏಜೆನ್ಸಿ ಬಳಿ ಸಿಲಿಂಡರ್ ಖರೀದಿಗಾಗಿ ಸಾಲಿನಲ್ಲಿ ನಿಂತಿದ್ದ ಜನರನ್ನು ವಂಚಿಸುತ್ತಿದ್ದ ಕಳ್ಳನನ್ನು ಪತ್ತೆ ಹಚ್ಚಿದ ಸಾರ್ವಜನಿಕರು ಧರ್ಮದೇಟು ಹಾಕಿ ಪೊಲೀಸರಿಗೆ ಒಪ್ಪಿಸಿದ ಘಟನೆ ಶುಕ್ರವಾರ ಜರುಗಿದೆ. ಸ್ವರ್ಣಸಂದ್ರ ನಿವಾಸಿ ಸುರೇಶ್ ಎಂಬಾತನನ್ನೇ ಪೊಲೀಸರು ಬಂಧಿಸಿದ್ದಾರೆ. ಪ್ರತಿನಿತ್ಯ ಮಹದೇಶ್ವರ ಗ್ಯಾಸ್ ಏಜೆನ್ಸಿ ಬಳಿ ಕ್ಯೂನಲ್ಲಿ ನಿಂತಿದ್ದ ಗ್ರಾಹಕರು ಬಿಲ್ ಹಾಕಿಸಿಕೊಳ್ಳಲು ಸಿಲಿಂಡರ್ಅನ್ನು ಮತ್ತೊಬ್ಬರಿಗೆ ಒಪ್ಪಿಸುವ ಸಂದರ್ಭದಲ್ಲಿ ಸುರೇಶ್ ಚಾಕಚಕ್ಯತೆಯಿಂದ ಈ ಸಿಲಿಂಡರ್ ತನ್ನದೇ ಎಂದು ತೆಗೆದುಕೊಂಡು ಪರಾರಿಯಾಗುತ್ತಿದ್ದ. ಅನೇಕ ದಿನಗಳಿಂದ ಇದೇ ದಂಧೆಯಲ್ಲಿ ತೊಡಗಿದ್ದ ಸುರೇಶ್ನನ್ನು ಗ್ರಾಹಕರು ತೀವ್ರವಾಗಿ ವಿಚಾರಣೆಗೆ ಒಳಪಡಿಸಿದಾಗ ತಾನು ಸಿಲಿಂಡರ್ ಕದಿಯುತ್ತಿಲ್ಲ ಎಂದು ಹೇಳಿದನು. ಈ ಸಂದರ್ಭದಲ್ಲಿ ಮಾತಿನ ಚಕಮಕಿ ನಡೆಯಿತು. ಕೊನೆಗೆ ಸಾರ್ವಜನಿಕರು ಸೇರಿ ಆತನಿಗೆ ಧರ್ಮದೇಟು ಹಾಕಿ ಪೊಲೀಸರಿಗೆ ಒಪ್ಪಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.