ಮಂಡ್ಯ

ಅರ್ಥಪೂರ್ಣ ಗಣರಾಜ್ಯೋತ್ಸವ

ಮೇಲುಕೋಟೆ: 64ನೇ ಗಣರಾಜ್ಯೋತ್ಸವವನ್ನು ಮೇಲುಕೋಟೆಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಗ್ರಾಮ ಪಂಚಾಯಿತಿ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕರು ಮತ್ತು ಬಾಲಕಿಯರ ಶಾಲೆ, ಗುರುಶನೈಶ್ಚರ ಆಂಗ್ಲ ಮಾದ್ಯಮ ಶಾಲೆ, ಯದುಶೈಲಾ ಪ್ರೌಢಶಾಲೆ, ಮುರಾರ್ಜಿ ವಸತಿ ಶಾಲೆ, ಯದುಗಿರಿ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಗಳ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಗ್ರಾಮ ಪಂಚಾಯಿತಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜಾರೋಹಣವನ್ನು ಅಧ್ಯಕ್ಷೆ ಮಣಿಮುರುಗನ್ ನೆರವೇರಿಸಿದರು. ನಂತರ ಶಾಲಾಮಕ್ಕಳು ಮೇಲುಕೋಟೆಯ ಪ್ರಮುಖ ಬೀದಿಗಳಲ್ಲಿ ಆಕರ್ಷಕ ಮೆರವಣಿಗೆ ನಡೆಸಿದರು.
ಪುತಿನ ಕಲಾ ಮಂದಿರದಲ್ಲಿ ನಡೆದ ಸಮಾರಂಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಾರಾಯಣಸ್ವಾಮಿ, ಉಪಾಧ್ಯಕ್ಷ ಯೋಗನರಸಿಂಹೇಗೌಡ, ಸದಸ್ಯರಾದ ವಾದ್ಯಾರ್ ತಿರುಮಲೈ, ಜಯಲಕ್ಷ್ಮಿ, ಪ್ರೇಮ, ಮಮತಾ, ಅಮ್ಮಯ್ಯಮ್ಮ, ಮಂಜುನಾಥ್, ಮೊರಾರ್ಜಿ ವಸತಿ ಶಾಲೆಯ ಪ್ರಾಂಶುಪಾಲೆ ಕುಮಾರಿಶಿಲ್ಪ, ಯದುಶೈಲ ಮುಖ್ಯ ಶಿಕ್ಷಕ ಅಣ್ಣೇಗೌಡ, ಗುರುಶನೈಶ್ಚರ ಮುಖ್ಯ ಶಿಕ್ಷಕ ಮಹದೇವು, ಬಾಲಕರ ಶಾಲೆಯ ಮುಖ್ಯ ಶಿಕ್ಷಕ ಎಸ್.ಎನ್. ಸಂತಾನರಾಮನ್, ಬಾಲಕಿಯರ ಶಾಲೆ ಮುಖ್ಯ ಶಿಕ್ಷಕ ಸಣ್ಣಬೋರೇಗೌಡ, ಸ್ವಾತಂತ್ರ್ಯ ಹೋರಾಟಗಾರರಾದ ಕೆ.ಬಿ. ಗೋಪಾಲ್, ಬೆಟ್ಟಶೆಟ್ಟಿ ಮತ್ತಿತರರು ಭಾಗವಹಿಸಿದ್ದರು. ರಾಜ್ಯ ಪ್ರಶಸ್ತಿಗೆ ಭಾಜನರಾದ ನಿವೃತ್ತ ಮುಖ್ಯ ಶಿಕ್ಷಕ ವಿ.ವೆಂಕಟರಾಮೇಗೌಡ ಗಣರಾಜ್ಯದ ಮಹತ್ವ ಕುರಿತು ಮಾತನಾಡಿದರು.
ಗ್ರಾಮ ಪಂಚಾಯಿತಿ ವತಿಯಿಂದ ವಿವಿಧ ಶಾಲೆಗಳಲ್ಲಿ ನಡೆಸಿದ ಕ್ರೀಡಾಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಮಾಡಿದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸ್ಟಿಂಗ್‌ ಆಪರೇಷನ್‌ ಪ್ರಕರಣ: ಮುಂದಿನ ನಿರ್ಧಾರ ಸಿಎಂ ಡಿ.ಕೆ ಶಿವಕುಮಾರ್`ಗೆ ಬಿಟ್ಟ ಸಂಪುಟ; ಸಾಕ್ಷ್ಯಾಧಾರ ಮೇಲೆ ಮುಂದಿನ ಕ್ರಮ!

15 ವರ್ಷದ ಹಳೆ ವಿಡಿಯೋ ಅದಂತೆ, ರಾಜಕೀಯ ತೆವಲಿಗೆ ಮಾಡುತ್ತಿದ್ದಾರೆ: ಬಿಕೆ ಹರಿಪ್ರಸಾದ್ ಗರಂ

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

'ಕುಟುಂಬದ ಕನಸು ನನಸು': 'ಜೈಲರ್ 2' ಬಿಡುಗಡೆ ಬೆನ್ನಲ್ಲೇ ನಟಿ ಮೇಘನಾ ರಾಜ್ ಮಾತು!

ನೀಲಿ ಡ್ರಮ್‌ ಪ್ರಕರಣ: ಮರಣದಂಡನೆ ಶಿಕ್ಷೆ ಪ್ರಕಟ ಬಳಿಕ ಊಟ-ನಿದ್ರೆ ಬಿಟ್ಟು ಕಂಗಾಲಾಗಿರುವ ಮುಸ್ಕಾನ್-ಸಾಹಿಲ್!