ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮಂಡ್ಯ

'ಕನಕದಾಸರು ಯಾವುದೇ ಜಾತಿಗೆ ಸೀಮಿತರಲ್ಲ'

Parashurama
Updated On : 29 Jan 2013, 12:20 pm

ಮಳವಳ್ಳಿ: ಕನಕದಾಸರು ಯಾವ ಜಾತಿಗೂ ಸೀಮಿತವಾದವರಲ್ಲ. ಹಿಂದುಳಿದ ವರ್ಗದಲ್ಲಿ ಜನಿಸಿ ಜಾತಿ- ಜಾತಿಗಳ ನಡುವೆ ಇದ್ದ ವೈಮನಸ್ಸು ತೊಡೆಯಲು ಸಾಹಿತ್ಯದ ಮೂಲಕ ಶ್ರಮಿಸಿದರು ಎಂದು ಕೆಪಿಸಿಸಿ ಸದಸ್ಯ ಹಾಗೂ ರಾಮ್‌ಮನೋಹರ್ ಲೋಹಿಯಾ ವಿಚಾರ ವೇದಿಕೆಯ ಅಧ್ಯಕ್ಷ ಬಿ. ಎಸ್. ಶಿವಣ್ಣ ಹೇಳಿದರು.
ಪಟ್ಟಣದ ಕುರುಬರ ವಿದ್ಯಾರ್ಥಿನಿಲಯದಲ್ಲಿ ಜಿಲ್ಲಾ ಕುರುಬರ ಸಂಘ ಮಂಡ್ಯ ಹಾಗೂ ಜಿಲ್ಲಾ ಶೋಷಿತ ವರ್ಗಗಳ ಆಶ್ರಯದಲ್ಲಿ ಫೆ. 10 ರಂದು ಮಂಡ್ಯ ನಗರದ ಸರ್ ಎಂ. ವಿ. ಕ್ರೀಡಾಂಗಣದಲ್ಲಿ ಆಯೋಜಿತವಾಗಿರುವ ಕನಕದಾಸರ ಜಯಂತಿ ಅಂಗವಾಗಿ ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಮಾತಾನಾಡಿದರು.
ಶೋಷಿತ ವರ್ಗಗಳ ಹಾಗೂ ದಮನಕ್ಕೊಳಗಾದ ವರ್ಗಗಳ ನಾಯಕನೆಂದು ಬಿಂಬಿತವಾಗಿರುವ ಕುರುಬ ಸಮುದಾಯ ಒಗ್ಗಟ್ಟಿನಿಂದ ಆರ್ಥಿಕವಾಗಿ ರಾಜಕೀಯವಾಗಿ ಹಾಗೂ ವಿದ್ಯಾಭ್ಯಾಸದಲ್ಲಿ ಅಭಿವೃದ್ಧಿ ಹೊಂದಬೇಕೆಂದು ಸಲಹೆ ನೀಡಿದರು.
ರಾಜ್ಯ ಕುರುಬರ ಸಂಘದ ಪ್ರಾಧಾನ ಕಾರ್ಯದರ್ಶಿ ರಾಮಚಂದ್ರಪ್ಪ ಮಾತನಾಡಿದರು. ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ನಾಗರಾಜ್, ಅಹಿಂದಾ ಸಂಘಟನೆಯ ಪುಟ್ಟಅಂಕಯ್ಯ ಸೇರಿದಂತೆ ತಾಲೂಕು ಕುರುಬರ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments