ಕಬ್ಬಿಣಾಂಶ ಮಾತ್ರೆ ನೀಡುವ ಕಾರ್ಯಕ್ರಮ
ಮಂಡ್ಯ: ತಾಲೂಕಿನ ಮಂಗಲ ಗ್ರಾಮದಲ್ಲಿ ಇತ್ತೀಚೆಗೆ ಹದಿಹರೆಯದವರಿಗೆ ಕಬ್ಬಿಣಾಂಶ ಮಾತ್ರೆ ನೀಡುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ವೈದ್ಯಾಧಿಕಾರಿ ಡಾ.ಕೆ.ಪ್ರಶಾಂತ್, ಶೇ.55 ಕ್ಕಿಂತ ಹೆಚ್ಚು ಗಂಡು ಮತ್ತು ಹೆಣ್ಣುಮಕ್ಕಳು ರಕ್ತಹೀನತೆಯಿಂದ ಬಳಲುತ್ತಿದ್ದಾರೆ. ಇವರಿಗೆ ಪೌಷ್ಟಿಕ ಆಹಾರ ಕೊರತೆ ಮತ್ತ ಕಬ್ಬಿಣಾಂಶದ ಕೊರತೆ ಕಂಡು ಬರುತ್ತಿದೆ ಎಂದರು. ಕಬ್ಬಿಣಾಂಶ ಕೊರತೆ ಇರುವ ಮಕ್ಕಳಿಗೆ ಪ್ರತಿ ಸೋಮವಾರ ಶಾಲೆಗಳಲ್ಲಿ ಮಾತ್ರೆ ಕೊಡಲಾಗುತ್ತಿದೆ. ಶಿಕ್ಷಕರ ಮೂಲಕ 6 ರಿಂದ 10ನೇ ತರಗತಿವರೆಗಿನ ಮಕ್ಕಳಿಗೆ ಮಾತ್ರೆ ವಿತರಿಸಲು ಕಾರ್ಯಾಗಾರ ನಡೆಸಲಾಗುತ್ತಿದೆ ಎಂದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಚ್.ಎಂ. ದಕ್ಷಿಣಮೂರ್ತಿ ಮಾತನಾಡಿದರು. ತಾಪಂ ಸದಸ್ಯ ಜವರೇಗೌಡ ಅಧ್ಯಕ್ಷತೆ ವಹಿಸಿದ್ದರು. ಪುಟ್ಟಲಿಂಗಮ್ಮ, ಕೆ. ಶಿವಶಂಕರ್, ಪುಟ್ಟೇಗೌಡ, ಸಾಕಮ್ಮ, ನೇತ್ರ, ಸುಶೀಲ, ಆಶಾ ಇದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.