ಪುರಸಭೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ: ಮರಿತಿಬ್ಬೇಗೌಡ
ಮಳವಳ್ಳಿ: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮಳವಳ್ಳಿ ಪುರಸಭೆಗೆ ಜೆಡಿಎಸ್ನಿಂದ ಸ್ಪರ್ಧಿಸಿರುವ ಎಲ್ಲಾ ಅಭ್ಯರ್ಥಿಗಳು ಸಹ ಪ್ರಾಮಾಣಿಕರಾಗಿದ್ದಾರೆ. ಅವರ ಪ್ರಾಮಾಣಿಕ ಹೋರಾಟದ ಫಲದಿಂದಾಗಿ ಈ ಬಾರಿಯ ಪುರಸಭೆಯಲ್ಲಿ ಅಧಿಕಾರ ಚುಕ್ಕಾಣಿ ಹಿಡಿಯಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ವಿಶ್ವಾಸ ವ್ಯಕ್ತಪಡಿಸಿದರು.
ಪಟ್ಟಣದ 16, 17, 18 ಹಾಗೂ 13ನೇ ವಾರ್ಡ್ಗಳಲ್ಲಿ ಶುಕ್ರವಾರ ಪಾದಯಾತ್ರೆ ಮೂಲಕ ಅಭ್ಯರ್ಥಿಗಳ ಜೊತೆ ಮತ ಯಾಚಿಸಿ ಮಾತನಾಡಿದ ಅವರು, ಕ್ಷೇತ್ರದ ಮಾಜಿ ಶಾಸಕ ಅನ್ನದಾನಿ ಅವರ ಕೈ ಬಲಪಡಿಸಬೇಕಾದರೆ ಪಕ್ಷದ ಧುರೀಣರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ಕೈಬಲಪಡಿಸಬೇಕು. ಮುಂದಿನ ವಿಧಾನಸಭಾ ಚುನಾವಣೆ ಮುಂದಿಟ್ಟುಕೊಂಡು 23 ವಾರ್ಡ್ಗಳಲ್ಲಿಯೂ ಸಹ ಜೆಡಿಎಸ್ ಅಧಿಕಾರಕ್ಕೆ ತರಬೇಕು. ಈ ನಿಟ್ಟಿನಲ್ಲಿ ಜೆಡಿಎಸ್ನ ಎಲ್ಲಾ ಕಾರ್ಯಕರ್ತರು ಪ್ರತಿ ಮನೆ ಮನೆಗೂ ತೆರಳಿ ಮತದಾರನ ಮತಗಳನ್ನು ಪಡೆದುಕೊಳ್ಳುವಂತೆ ಪರಿವರ್ತಿಸಬೇಕು ಎಂದು ತಿಳಿಸಿದರು.
ಈ ಸಂದರ್ಭ ಮಾಜಿ ಪುರಸಭಾಧ್ಯಕ್ಷ ಹಾಗೂ 16ನೇ ವಾರ್ಡ್ನಿಂದ ಸ್ಪರ್ಧಿಸಿರುವ ಎಂ.ಎ. ಚಿಕ್ಕರಾಜ್, 17ನೇ ವಾರ್ಡ್ನ ಅಭ್ಯರ್ಥಿ ಎಂ.ಎಸ್. ರಮೇಶ್, 18ನೇ ವಾರ್ಡ್ನ ಸವಿತ 13ನೇ ವಾರ್ಡ್ನ ಅಭ್ಯರ್ಥಿ ಅಹಮದ್ ಪಾಷ ಎನ್., ಯುವ ಮುಖಂಡ ವಡ್ಡರಹಳ್ಳಿ ಸಿದ್ದರಾಜು, ಯೋಗಗುರು ಮಲ್ಲಿಕಾರ್ಜುನ್ ಸೇರಿದಂತೆ 500ಕ್ಕೂ ಹೆಚ್ಚು ಆ ಭಾಗದ ಹಿರಿಯರು, ಮುಖಂಡರು ಹಾಗೂ ಮತದಾರ ಬಂಧುಗಳು ಪಾಲೊಂಡಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.