ಶಾಲೆ ಪ್ರವೇಶ: ಅವಧಿ ವಿಸ್ತರಣೆ
ಮಂಡ್ಯ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಲ್ಲಿ 6ನೇ ತರಗತಿಯ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸುವ ದಿನಾಂಕವನ್ನು ಮಾ.2 ರವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ವೆಂಕಟರಮಣ ರೆಡ್ಡಿ ತಿಳಿಸಿದ್ದಾರೆ.
ವಿಜಯಾ ಬ್ಯಾಂಕ್ ಶಾಖೆ ಉದ್ಘಾಟನೆ
ಮಂಡ್ಯ: ಕೆರಗೋಡಿನಲ್ಲಿ ನೂತನವಾಗಿ ನಿರ್ಮಿಸಿರುವ ಕಟ್ಟಡದಲ್ಲಿ ವಿಜಯಾ ಬ್ಯಾಂಕ್ ಕಾರ್ಯನಿರ್ವಹಿಸಲಿದೆ. ನೂತನ ಕಟ್ಟಡಕ್ಕೆ ಸ್ಥಳಾಂತರವಾದ ವಿಜಯಾ ಬ್ಯಾಂಕ್ ಕೆರಗೋಡು ಶಾಖೆಯನ್ನು ಕಾರ್ಯನಿರ್ವಾಹಕ ನಿರ್ದೇಶಕ ಕೆ.ಆರ್. ಶೆಣೈ ಉದ್ಘಾಟಿಸಿದರು.
ನಾಳೆಯಿಂದ ಜಿಲ್ಲಾಮಟ್ಟದ ಸಭೆ
ಮಂಡ್ಯ: ಶ್ರೀಆದಿಚುಂಚನಗಿರಿ ಹಿರಿಯ ವಿದ್ಯಾರ್ಥಿಗಳ ಒಕ್ಕೂಟದ ಪ್ರಥಮ ಜಿಲ್ಲಾಮಟ್ಟದ ಸಭೆ ಮಾ.3 ರಂದು ಕೊಮ್ಮೇರಹಳ್ಳಿ ವಿಶ್ವಮಾನವ ಕ್ಷೇತ್ರದಲ್ಲಿ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಮೊ.9986861137, 9844478465 ಇಲ್ಲಿ ಸಂಪರ್ಕಿಸುವಂತೆ ಒಕ್ಕೂಟದ ಅಧ್ಯಕ್ಷ ರಾಮಕೃಷ್ಣೇಗೌಡ ಕೋರಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.