ಹುತಾತ್ಮರ ತತ್ವಾದರ್ಶ ಮಕ್ಕಳು ಪಾಲಿಸಲಿ
ಕೆ.ಆರ್.ಪೇಟೆ: ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಮಡಿದ ಮಹನೀಯರ ತತ್ವ ಆದರ್ಶ ಮಕ್ಕಳು ಪಾಲಿಸುವಂತೆ ಜಿಲ್ಲಾ ಪಂಚಾಯ್ತಿ ಸದಸ್ಯ ಕೆ.ಆರ್. ಕುಮಾರ್ ಕರೆನೀಡಿದರು.
ತಾಲೂಕಿನ ಶೀಳನೆರೆ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿದ ಅವರು, ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಶಿಕ್ಷಣ ಮತ್ತು ಆರೋಗ್ಯ ಪಾತ್ರ ನಿರ್ಣಾಯಕ. ಆದ್ದರಿಂದ ಮಕ್ಕಳು ಶಿಕ್ಷಣವಂತರಾಗುವುದರ ಜತೆಗೆ ಆರೋಗ್ಯದತ್ತ ಹೆಚ್ಚಿನ ಗಮನ ಹರಿಸಬೇಕು ಎಂದರು.
ಗ್ರಾಮೀಣ ಜನರು ಆಸ್ತಿ ಸಂಪಾದನೆಯ ಕಡೆಗೆ ಗಮನ ಹರಿಸದೆ ತಮ್ಮ ಮಕ್ಕಳಿಗೆ ಅಕ್ಷರ ಜ್ಞಾನವನ್ನು ನೀಡಬೇಕು. ಸರ್ಕಾರಿ ಶಾಲೆಗಳಲ್ಲಿಯೇ ಗುಣಾತ್ಮಕ ಶಿಕ್ಷಣ ದೊರೆಯುತ್ತಿರುವುದರಿಂದ ಕಾನ್ವೆಂಟ್ ವ್ಯಾಮೋಹಕ್ಕೆ ಬಲಿಯಾಗಬಾರದು ಎಂದು ತಿಳಿಸಿದರು.
ಕಾರ್ಯಕ್ರಮ ಉದ್ಘಾಟಿಸಿದ ತಾಲೂಕು ಪಂಚಾಯ್ತಿ ಸದಸ್ಯ ಗೋವಿಂದಶೆಟ್ಟಿ, ವಿದ್ಯಾರ್ಥಿಗಳು ಪಾಠದ ಜತೆಗೆ ಪಠ್ಯೇತರ ಚಟುವಟಿಕೆಗಳಿಗೂ ಮಹತ್ವ ನೀಡಬೇಕು. ಮಕ್ಕಳು ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದರಿಂದ ಆರೋಗ್ಯ ಸದೃಢಗೊಳ್ಳುತ್ತದೆ ಎಂದು ಹೇಳಿದರು.
ಶೀಳನೆರೆ ವ್ಯವಸಾಯ ಸೇವಾ ಸಹಕಾರ ಬ್ಯಾಂಕಿನ ಅಧ್ಯಕ್ಷ ಎಸ್.ಎಲ್.ಮೋಹನ್ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಿದರು. ಕ್ಷೇತ್ರ ಸಮನ್ವಯಾಧಿಕಾರಿ ಜಿ.ಬಿ.ರಾಮಪ್ಪ ಸಮಾರೋಪ ಭಾಷಣ ಮಾಡಿದರು.
ಗ್ರಾಪಂ ಅಧ್ಯಕ್ಷ ಸುರೇಶ್, ಉಪಾಧ್ಯಕ್ಷೆ ಸವಿತಾ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಕೆ.ಶಿವರಾಮೇಗೌಡ, ಜಿಲ್ಲಾ ಉಪಾಧ್ಯಕ್ಷ ಬಿಸಿಎಸ್ ಕುಮಾರ್, ಪ್ರಧಾನ ಕಾರ್ಯದರ್ಶಿ ಎಲ್.ಎಸ್.ಧರ್ಮಪ್ಪ, ಉಪಾಧ್ಯಕ್ಷ ಭಗವಾನ್, ಸಿ.ಕೆ.ರವಿಕುಮಾರ್ ಉಪಸ್ಥಿತರಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.