ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮಂಡ್ಯ

ಕಾವೇರಿ ನಿರ್ವಹಣಾ ಮಂಡಳಿ ರಚನೆ ಬೇಡ

Parashurama
Updated On : 3 Mar 2013, 11:40 am

ಮಂಡ್ಯ:  ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡಬಾರದು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಭಾನುವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಕಾವೇರಿ ವನದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ರಸ್ತೆತಡೆ ನಡೆಸಿದ ಕಾರ್ಯಕರ್ತರು ಕೇಂದ್ರ ಸರ್ಕಾರ ಹಾಗೂ ತಮಿಳುನಾಡು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕಾವೇರಿ ಜಲಾಶಯಗಳು ಖಾಲಿಯಾಗಿವೆ. ಕುಡಿವ ನೀರಿಗೂ ಪರಿತಪಿಸುವ ಸ್ಥಿತಿ ನಿರ್ಮಾಣವಾಗಿದೆ. ಇಂತಹ ಸನ್ನಿವೇಶದಲ್ಲೂ ತಮಿಳುನಾಡಿನ ಕೈಗೊಂಬೆಯಾಗಿ ನರ್ತಿಸುತ್ತಿರುವ ಕೇಂದ್ರ ಸರ್ಕಾರ ಕಾವೇರಿ ಐ ತೀರ್ಪು ಅಧಿಸೂಚನೆ ಹೊರಡಿಸಿದೆ ಎಂದು ಆರೋಪಿಸಿದರು. ಪ್ರಧಾನ ಮಂತ್ರಿಗಳು ಯಾವ ಕಾರಣಕ್ಕೂ ಕಾವೇರಿ ನಿರ್ವಹಣ ಮಂಡಳಿ ರಚನೆ ಮಾಡಬಾರದು. ಕೇಂದ್ರವನ್ನು ಪ್ರತಿನಿಧಿಸುತ್ತಿರುವ ರಾಜ್ಯದ ಸಚಿವರು, ರಾಜ್ಯಸಭಾ ಸದಸ್ಯರು ಹಾಗೂ ಸಂಸದರು ಒಗ್ಗಟ್ಟಿನಿಂದ ಕೇಂದ್ರದ ಮೇಲೆ ಒತ್ತಡ ಹೇರಬೇಕು ಎಂದು ಒತ್ತಾಯಿಸಿದರು. ಕಾವೇರಿ ಐತೀರ್ಪನ್ನು ಅಧಿಸೂಚನೆಯಾಗಿ ಹೊರಡಿಸಿದ ಕೇಂದ್ರದ ಕ್ರಮ ವಿರೋಧಿಸಿ ಮಾ.24ರಂದು ಬೆಂಗಳೂರು ನ್ಯಾಷನಲ್ ಕಾಲೇಜು ಮೈದಾನದಲ್ಲಿ ಬೃಹತ್ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿದೆ. ಈ ಸಭೆಗೆ ಆಗಮಿಸದ ಜನಪ್ರತಿನಿಧಿಗಳ ನಿವಾಸದ ಎದುರು ಪ್ರತಿಭಟನೆ ಹಾಗೂ ಘೇರಾವ್ ಮಾಡಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ವೇದಿಕೆ ಮುಖಂಡರಾದ ವಿ.ಸಿ.ಉಮಾಶಂಕರ್, ಮ.ಸೊ.ಚಿದಂಬರ್, ಡಿ.ಅಶೋಕ್, ಸಿ.ಸ್ವಾಮಿಗೌಡ, ಪುನೀತ್‌ಗೌಡ, ಕೆ.ಬಿ.ಬಸವರಾಜು, ಕಾಂತರಾಜು, ವೆಂಕಟೇಶ್, ನಾರಾಯಣ, ಲೀಲಾ, ಪ್ರೇಮಾ, ಶಿವಮ್ಮ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments