ಕಾವೇರಿ ನೀರು ಹಂಚಿಕೆಗೆ ಕೇಂದ್ರ ಸರ್ಕಾರದ ನಿರ್ಲಕ್ಷ್ಯವೇ ಕಾರಣ: ಚಲುವರಾಯಸ್ವಾಮಿ
ಮಂಡ್ಯ-ಭಾರತೀನಗರ: ಕೇಂದ್ರದ ಮಲತಾಯಿ ಧೋರಣೆ ಮತ್ತು ನಿರ್ಲಕ್ಷ್ಯದಿಂದಾಗಿ ಕಾವೇರಿ ನದಿ ನೀರು ಹಂಚಿಕೆಯಲ್ಲಿ ಅನ್ಯಾಯವಾಗಿದೆ ಎಂದು ಸಂಸದ ಎನ್.ಚಲುವರಾಯಸ್ವಾಮಿ ಭಾನುವಾರ ಆರೋಪಿಸಿದರು.
ತಮ್ಮಣ್ಣ ಸೇರ್ಪಡೆ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿರುವ ಕಾಂಗ್ರೆಸ್ನ ಮಹಾನ್ ನಾಯಕರ್ಯಾರೂ ಕಾವೇರಿ ನದಿ ನೀರಿನ ವಿಚಾರದಲ್ಲಿ ಸಂಸತ್ನಲ್ಲಿ ಒಂದು ದಿನವೂ ಸೊಲ್ಲೆತ್ತಲಿಲ್ಲ. ಹೀಗಾಗಿ, ನ್ಯಾಯಾಲಯಕ್ಕಿಂತ ಹೆಚ್ಚಾಗಿ ನಮಗೆ ಕೇಂದ್ರ ಸರ್ಕಾರದಿಂದಲೇ ಅನ್ಯಾಯವಾಗಿದೆ ಎಂದು ಹೇಳಿದರು. ಬಿಜೆಪಿ ಆಡಳಿತ ನಡೆಸಿದ ಅವಧಿಯಲ್ಲಿ ಸಾಕಷ್ಟು ಭ್ರಷ್ಟಚಾರ, ಅವ್ಯವಹಾರ ನಡೆದಿದ್ದರೂ ಕಾಂಗ್ರೆಸ್ನವರು ನಡೆಸಿದ 40 ವರ್ಷಗಳ ಆಡಳಿತದಲ್ಲಿ ರಾಜ್ಯ ಬೀದಿಗೆ ಬಂದು ನಿಲ್ಲುವಂತಾಗಿದೆ. ಈಗ ಈ ನಾಯಕರು ತಮ್ಮ ಸಾಧನೆಯನ್ನು ಹೇಳಿಕೊಳ್ಳದ ಸ್ಥಿತಿ ಬಂದಿದೆ ಎಂದರು.
ಮಂಡ್ಯ ಜಿಲ್ಲೆಗೆ ಕಾಂಗ್ರೆಸ್ ನಾಯಕರ ಕೊಡುಗೆಗಳು ಏನು? ಜೆಡಿಎಸ್ ಅಧಿಕಾರದಲ್ಲಿ ಇದ್ದಾಗ ವೈದ್ಯಕೀಯ ಕಾಲೇಜು, ಡಿಪೋಗಳು, ಉನ್ನತ ಶಿಕ್ಷಣದ ಕಾಲೇಜು, ರಸ್ತೆಗಳ ಉನ್ನತೀಕರಣ, ಇಂಧನ ಇಲಾಖೆ ಪ್ರಗತಿ ಹೀಗೆ ನಾನಾ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದನ್ನು ಮರೆಯುವಂತಿಲ್ಲ ಎಂದರು. ಶಾಸಕ ತಮ್ಮಣ್ಣನವರು ಜೆಡಿಎಸ್ ಗೆ ಸೇರ್ಪಡೆಯಾಗಿರುವುದು ಪಕ್ಷಕ್ಕೆ ಶಕ್ತಿ ಬಂದಂತಾಗಿದೆ. ಅವರ ಸೇರ್ಪಡೆಯಿಂದ ಗೊಂದಲ ಸೃಷ್ಟಿಯಾಗಿರುವುದು ನಿಜ. ಶಾಸಕಿ ಕಲ್ಪನಾ ಸಿದ್ದರಾಜು ದುಡಿಕಿನಿಂದ ಯಾವುದೇ ನಿರ್ಧಾರ ಕೈಗೊಂಡರು ಅವರ ರಾಜಕೀಯ ಭವಿಷ್ಯವನ್ನು ಅವರೇ ಹಾಳು ಮಾಡಿಕೊಂಡಂತಾಗುತ್ತದೆ. ಪಕ್ಷದಲ್ಲಿ ಸಾಕಷ್ಟು ಅವಕಾಶಗಳು ಬರುತ್ತವೆ. ಕುಳಿತು ಮಾತನಾಡುವ ಸಂದರ್ಭವೂ ಬರುತ್ತದೆ. ತಾಳ್ಮೆ ಬೇಕು ಎಂದು ಹೇಳಿದರು.
ಸಮಾರಂಭದಲ್ಲಿ ಮಾತನಾಡಿದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಫ್ರುಲ್ಲಾ ಖಾನ್, ಜೆಡಿಎಸ್ ಅಪ್ಪ ಮಕ್ಕಳ ಪಕ್ಷ ನಿಜ. ಏಕೆಂದರೆ ದೇವೇಗೌಡರು ನಮ್ಮ ಪಕ್ಷದ ತಂದೆ ಇದ್ದ ಹಾಗೆ. ಕುಮಾರಣ್ಣ, ಚಲುವಣ್ಣ, ಜಮೀರಣ್ಣ ನಾವೆಲ್ಲರೂ ಅಣ್ಣ-ತಮ್ಮಂದಿರು. ಆದರೆ, ಬೇರೆ ಪಕ್ಷಗಳಿಗೆ ತಾಯಿ ಒಬ್ಬರೆ ಇದ್ದಾರೆ. ತಂದೆ ಎಷ್ಟು ಜನ ಇದ್ದಾರೆ ಎಂದು ಗೊತ್ತಿಲ್ಲ ಎಂದು ಕಾಂಗ್ರೆಸ್ಪ್ಕ್ಷದ ಬಗ್ಗೆ ಟೀಕಿಸಿದರು.
ಸಮಾರಂಭದಲ್ಲಿ ಮಾಜಿ ಸ್ಪೀಕರ್ ಕೃಷ್ಣ, ಶಾಸಕರಾದ ಎಂ.ಶ್ರೀನಿವಾಸ್, ಸಿ.ಎಸ್. ಪುಟ್ಟರಾಜು, ರಮೇಶ್ಬಾಬು ಬಂಡಿಸಿದ್ದೇಗೌಡ, ಬಿ.ರಾಮಕೃಷ್ಣ, ಮಾಜಿ ಶಾಸಕ ಡಾ. ಅನ್ನದಾನಿ, ಕೆ.ಟಿ. ಶ್ರೀಕಂಠೇಗೌಡ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಡಿ.ರಮೇಶ್, ಯುವ ಅಧ್ಯಕ್ಷ ಬೇಲೂರು ಶಶಿಧರ, ಮದ್ದೂರು ಜೆಡಿಎಸ್ ನಾಯಕರಾದ ಬಸವರಾಜು, ವೆಂಕಟೇಶ್, ಅಣ್ಣೂರು ನವೀನ್, ಮೆಣಸಗೆರೆ ರಾಜಮ್ಣ, ಶ್ರೀಮತಿ ಯಶೋಧ ಶ್ರೀನಿವಾಸ್ ಸೇರಿದಂತೆ ಹಲವಾರು ನಾಯಕರು ಉಪಸ್ಥಿತರಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.