ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮಂಡ್ಯ

ಹೊಟ್ಟೆನೋವು: ವಿಷ ಸೇವಿಸಿ ಆತ್ಮಹತ್ಯೆ

Parashurama
Updated On : 3 Mar 2013, 11:41 am

ಶ್ರೀರಂಗಪಟ್ಟಣ:  ಹೊಟ್ಟೆನೋವು ತಾಳಲಾರದೆ ವ್ಯಕ್ತಿಯೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಮರಳಗಾಲ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚಲುವಯ್ಯ ಅವರ ಮಗ ವೈಕುಂಠಯ್ಯ (45) ಎಂಬಾತನೇ ಸಾವನ್ನಪ್ಪಿದರು. ಕೆಲ ದಿನಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ವೈಕುಂಠಯ್ಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರು. ಹೊಟ್ಟೆನೋವು ತೀವ್ರಗೊಂಡ ಹಿನ್ನೆಲೆಯಲ್ಲಿ ಬೇಸತ್ತ ವೈಕುಂಠಯ್ಯ ತನ್ನ ಮನೆಯಲ್ಲಿ ವಿಷ ಸೇವಿಸಿ ಅಸ್ವಸ್ಥರಾಗಿದ್ದರು.
ತಕ್ಷಣ ಅವರನ್ನು ಶ್ರೀರಂಗಪಟ್ಟಣ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ವೈಕುಂಠಯ್ಯ ಸಾವನ್ನಪ್ಪಿದ್ದಾನೆ. ಶ್ರೀರಂಗಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments