ಇಂದು ಜಿಲ್ಲಾಮಟ್ಟದ ಮೀನಾ ಮೇಳ
ಮಂಡ್ಯ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 6 ರಿಂದ 8ನೇ ತರಗತಿ ಮಕ್ಕಳಿಗೆ ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಮಾ. 20ರಂದು ಜಿಲ್ಲಾ ಮಟ್ಟದ ಮೀನಾ ಮೇಳ ಏರ್ಪಡಿಸಲಾಗಿದೆ. ಜಿಲ್ಲೆಯ ಎಲ್ಲಾ ತಾಲೂಕುಗಳ ಹಿರಿಯ ಪ್ರಾಥಮಿಕ ಶಾಲೆಗಳ ಮಕ್ಕಳು ಇದರಲ್ಲಿ ಭಾಗವಹಿಸಲಿದ್ದಾರೆ ಎಂದು ಡಿಡಿಪಿಐ ಎಂ.ಡಿ.ಶಿವಕುಮಾರ್ ತಿಳಿಸಿದ್ದಾರೆ.
ಇಂದು ವಿಶೇಷ ಗ್ರಾಮಸಭೆ
ನಾಗಮಂಗಲ: ತಾಲೂಕಿನ ದೇವಲಾಪುರ ಹೋಬಳಿ ಕರಡಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಮಾ. 20ರಂದು ಸಾಮಾಜಿಕ ಲೆಕ್ಕ ಪರಿಶೋಧನೆ ಮತ್ತು ವಿಶೇಷ ಗ್ರಾಮಸಭೆ ನಡೆಯಲಿದೆ. ಗ್ರಾಪಂ ಅಧ್ಯಕ್ಷೆ ಎಸ್.ಎನ್. ಪುಟ್ಟಾಮಣಿ ಅಧ್ಯಕ್ಷತೆ ವಹಿಸಲಿದ್ದು, ಮಾ. 21, 22ರಂದು ವಾರ್ಡ್‌ವಾರು ಸಭೆ ನಡೆಯಲಿದೆ. 23 ರಂದು ಗ್ರಾಪಂ ಆವರಣದಲ್ಲಿ ಗ್ರಾಮಸಭೆ ನಡೆಯಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಲು ಗ್ರಾಪಂ ಪಿಡಿಒ ಜೆ.ಸಿ. ಚಾಮರಾಜು ತಿಳಿಸಿದ್ದಾರೆ.
ಹುತಾತ್ಮ ಯೋಧನ
ಕುಟುಂಬಕ್ಕೆ ಪರಿಹಾರ
ಮಂಡ್ಯ: ಶ್ರೀನಗರದಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ ಹುತಾತ್ಮರಾದ ಕೆ.ಆರ್. ಪೇಟೆ ತಾಲೂಕಿನ ಆಲಂಬಾಡಿ ಗ್ರಾಮದ ಸಿಆರ್‌ಪಿಎಫ್ ಯೋಧ ಸತೀಶ್ ಅವರ ಕುಟುಂಬಕ್ಕೆ ಹೆರಿಟೇಜ್ ಗ್ರೂಪ್ ವ್ಯವಸ್ಥಾಪಕ ನಿರ್ದೇಶಕ ಪಿ.ಎಲ್.ವೆಂಕಟರಾಮ ರೆಡ್ಡಿ 1 ಲಕ್ಷ ಪರಿಹಾರ ನೀಡಿದರು.
ಚಿನ್ನದ ಸರ ಅಪಹರಣ
ಮಂಡ್ಯ: ದುಷ್ಕರ್ಮಿಗಳು ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯೊಬ್ಬರ ಚಿನ್ನದ ಸರ ಅಪಹರಿಸಿರುವ ಘಟನೆ ನಗರದ ಚಾಮುಂಡೇಶ್ವರಿ ನಗರ ಬಡಾವಣೆಯಲ್ಲಿ ನಡೆದಿದೆ. ಬಡಾವಣೆ ವಾಸಿ ಕೃಷ್ಣೇಗೌಡ ಅವರ ಪತ್ನಿ ಎನ್. ಶಾರದಾ ಸರ ಕಳೆದುಕೊಂಡವರು. ಅಂಗಡಿಯಿಂದ ಮನೆಗೆ ಹೋಗುತ್ತಿದ್ದ ವೇಳೆ ಹಿಂದಿನಿಂದ ಬೈಕಿನಲ್ಲಿ ಬಂದ ಸವಾರರು ಕತ್ತಿನಲ್ಲಿದ್ದ ಸುಮಾರು 50 ಗ್ರಾಂ ತೂಕದ ಚಿನ್ನದ ಸರ ಕಸಿದು ಪರಾರಿಯಾಗಿದ್ದಾರೆ. ಪಶ್ಚಿಮ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಂಡಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.