ಜಿಲ್ಲಾ ಜೆಡಿಎಸ್ಗೆ ಟಿ.ಪಿ. ಕರಿಯಪ್ಪ ನೇಮಕ
ಮಳವಳ್ಳಿ: ತಾಲೂಕಿನ ತೆಂಕಹಳ್ಳಿ ಗ್ರಾಮದ ಟಿ.ಪಿ. ಕರಿಯಪ್ಪ ಅವರನ್ನು ಮಂಡ್ಯ ಜಿಲ್ಲಾ ಜಾತ್ಯತೀತ ಜನತಾದಳದ ಹಿಂದುಳಿದ ವರ್ಗದ ಸಂಘಟನಾ ಕಾರ್ಯದರ್ಶಿಯಾಗಿ ಮಾಜಿ ಸಚಿವ, ಶಾಸಕ ಬಂಡೆಪ್ಪ ಖಾಶೆಂಪೂರ್ ಅವರ ನಿರ್ದೇಶನದ ಮೇರೆಗೆ ನೇಮಕ ಮಾಡಲಾಗಿದೆ ಎಂದು ಜಾತ್ಯತೀತ ಜನತಾದಳದ ಹಿಂದುಳಿದ ವರ್ಗದ ಅಧ್ಯಕ್ಷೆ ಕೆ.ವಿ. ಅಮರ್ನಾಥ್ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಅವರು ಜವಬ್ದಾರಿಯುತವಾಗಿ ಪಕ್ಷದ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ ಮಂಡ್ಯ ಜಿಲ್ಲೇಯಲ್ಲಿ ಜಾತ್ಯತೀತ ಜನತದಳವನ್ನ ಪರಿಣಾಮಕಾರಿಯಾಗಿ ಸಂಘಟಿಸುವ ನಿಟ್ಟಿನಲ್ಲಿ ಪರಿಣಾಮಕಾರಿಯಾಗಿ ಸಂಘಟಿಸಿ ಬೂತ್ಗಳ ಮಟ್ಟದಲ್ಲಿ ಜಾತ್ಯತೀತ ಜನತದಳದ ಕಾರ್ಯಕರ್ತರನ್ನು ಕ್ರಿಯಾತ್ಮಕವಾಗಿ ಕರ್ತವ್ಯ ನಿರ್ವಹಿಸುವಂತೆ ಕಾರ್ಯತಂತ್ರ ರೂಪಿಸಬೇಕೆಂದು ನಿರ್ದೇಶಿಸಿದ್ದಾರೆ.
'ಜೆಡಿಎಸ್ ಪರ ಒಲವು ಸಾಬೀತು'
ಮಳವಳ್ಳಿ: ಪಟ್ಟಣದಲ್ಲಿ ಜನರು ಜಾತ್ಯತೀತ ಜನತಾ ದಳವನ್ನು ಸ್ಪಷ್ಟವಾಗಿ ಆಯ್ಕೆ ಮಾಡಿದ್ದು 23 ವಾರ್ಡ್ಗಳಲ್ಲಿ ನಡೆದ ಚುನಾವಣೆಗಳಲ್ಲಿ 11 ಜೆಡಿಎಸ್ ಅಭ್ಯರ್ಥಿಗಳನ್ನು ಹಾಗೂ 1 ಜೆಡಿಎಸೆ ಬೆಂಬಲಿತ ಪಕ್ಷೇತರ ಆಭ್ಯರ್ಥಿಯನ್ನು ಆಯ್ಕೆ ಮಾಡಿದ್ದಾರೆ. ಮತದಾರರ ನಿರ್ಣಯವು ಸಂಪೂರ್ಣವಾಗಿ ಜೆಡಿಎಸ್ ಅಧಿಕಾರಕ್ಕೆ ಬರಲೆಂದೇ ಸ್ಪಷ್ಟವಾಗಿ ಅರ್ಥವಾಗುತ್ತದೆ ಎಂದು ಮಾಜಿ ಶಾಸಕ ಡಾ. ಕೆ. ಅನ್ನದಾನಿ ತಿಳಿಸಿದರು. ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ಅವರು ಜನರ ಆದೇಶವನ್ನು ಸ್ವೀಕರಿಸಬೇಕಾದುದ್ದು ನಮ್ಮ ಕರ್ತವ್ಯವಾಗಿದ್ದು ಯಾವುದೇ ಅಪಪ್ರಚಾರಗಳಿಗೆ ಕಿವಿಗೊಡಬೇಡಿ. ಜೆಡಿಎಸ್ ವತಿಯಿಂದ ಪುರಸಭೆಯ ಚುನಾಯಿತ ಪ್ರತಿನಿಧಿಗಳು 5 ವರ್ಷಗಳ ಕಾಲ ಅಧಿಕಾರ ನಡೆಸಲಿದ್ದು ಟೀಕೆ-ಟಿಪ್ಪಣಿಗಳಿಗೆ ಪ್ರತಿಕ್ರಿಯಿಸುವ ಅವಶ್ಯಕತೆ ಜೆಡಿಎಸ್ಗಿಲ್ಲ. ಮಳವಳ್ಳಿ ಕ್ಷೇತ್ರದಲ್ಲಿ ನಡೆಯುತ್ತಿರುವ ಎಲ್ಲಾ ಬೆಳವಣಿಗೆಗಳನ್ನು ಮತದಾರರು ಗಮನಿಸುತ್ತಿದ್ದು ಚುನಾವಣೆಯಲ್ಲಿ ಇದಕ್ಕೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಹೇಳಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.