ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮಂಡ್ಯ

ವಿಕಲಚೇತನರು ಸೌಲಭ್ಯ ಸದ್ಭಳಕೆ ಮಾಡಿಕೊಳ್ಳಲಿ

Parashurama
Updated On : 19 Mar 2013, 10:39 am

ಕ.ಪ್ರ.ವಾರ್ತೆ ಮಂಡ್ಯ  ಮಾ. 19
ಸರ್ಕಾರ ವಿಕಲಾಂಗ ಮಕ್ಕಳ ಅಭಿವೃದ್ಧಿಗಾಗಿ ವಿಶೇಷ ಅಗತ್ಯತೆಯುಳ್ಳ ಹಲವಾರು ಯೋಜನೆಗಳನ್ನು ರೂಪಿಸಿದೆ ಎಂದು ನಗರಸಭೆ ಸದಸ್ಯ ಮಧುಶ್ರೀ ತಿಳಿಸಿದರು.
ನಗರದ ಪೊಲೀಸ್ ಕಾಲೋನಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಸರ್ವ ಶಿಕ್ಷಣ ಅಭಿಯಾನ ಕಾರ್ಯಕ್ರಮಗಳ ಆಶ್ರಯದಲ್ಲಿ ವಿಶೇಷ ಅಗತ್ಯತೆಯುಳ್ಳ ಮಕ್ಕಳ ಜನಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪೋಷಕರು ಯೋಜನೆಗಳ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಸಂಪನ್ಮೂಲ ಶಿಕ್ಷಕ ದೇವರಾಜ್ ಮಾತನಾಡಿ, ವಿಶೇಷ ಅಗತ್ಯತೆಯುಳ್ಳ ಮಕ್ಕಳನ್ನು ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಪೋಷಕರಿಗೆ ಜಾಗೃತಿ ಮೂಡಿಸಲು ಬೀದಿ ನಾಟಕ ಕಾರ್ಯಕ್ರಮ ಆಯೋಜಿಸಲಾಗಿದೆ. ಪೋಷಕರು ತಮ್ಮ ವಿಕಲಾಂಗ ಮಕ್ಕಳನ್ನು ಕೀಳರಿಮೆಯಿಂದಾಗಿ ಶಿಕ್ಷಣಕ್ಕೆ ಹಚ್ಚುವ ಬದಲು ಮನೆಯಲ್ಲಿಯೇ ಇಟ್ಟುಕೊಳ್ಳುತ್ತಾರೆ. ಇದು ತಪ್ಪು. ಅವರ ಶಿಕ್ಷಣದ ಹಕ್ಕನ್ನು ಕಸಿಯಬಾರದು ಎಂದರು.
ವಿಕಲಾಂಗ ಮಕ್ಕಳಿಗೆ ಅವಕಾಶ ಕಲ್ಪಿಸಬೇಕು. ಅವರಲ್ಲಿಯೂ ಅಗಾಧವಾದ ಪ್ರತಿಭೆ ಇರುತ್ತದೆ. ಸಮಾಜದಲ್ಲಿ ಎಲ್ಲರಂತೆ ಬದುಕುವ ಸಾಮರ್ಥ್ಯ ಅವರಲ್ಲಿ ಇರುತ್ತದೆ. ಮಕ್ಕಳನ್ನು ಮನೆಯಲ್ಲಿ ಇಟ್ಟುಕೊಳ್ಳದೆ ಸಾಮಾನ್ಯ ಮಕ್ಕಳಂತೆ ವಿಕಲಾಂಗರೂ ಬೆಳವಣಿಗೆ ಹೊಂದಲು ಅವಕಾಶ ಕಲ್ಪಿಸಿ ಎಂದು ಸಲಹೆ ನೀಡಿದರು.
ಪತ್ರಕರ್ತ ದೇವರಾಜ ಕೊಪ್ಪ ಮಾತನಾಡಿ, ವಿಕಲಾಂಗ ಮಕ್ಕಳಲ್ಲಿ ದೈಹಿಕ  ವೈಕಲ್ಯ ಮಾತ್ರ ಇರುತ್ತದೆ. ಆದರೆ, ಬೌದ್ಧಿಕವಾಗಿ ಸಾಮಾನ್ಯ ಮಕ್ಕಳನ್ನು ಮೀರಿಸುವ ಅಸಾಮಾನ್ಯ ಶಕ್ತಿ ಹೊಂದಿರುತ್ತಾರೆ. ಇಂತಹ ಪ್ರತಿಭೆಗಳನ್ನು ಪೋಷಕರು ಚಿವುಟಿ ಹಾಕಬಾರದು ಎಂದು ಹೇಳಿದರು.
ರಾಗರಂಜಿನಿ ತಂಡದ ಎಂ.ಬಸವಯ್ಯ ಮಾತನಾಡಿ, ವಿಕಲಾಂಗರನ್ನು ಅವರ ವೈಕಲ್ಯತೆ ಹಿಡಿದು ಕರೆಯುವ ಬದಲು ಹೆಸರನ್ನು ಕರೆಯಬೇಕು. ಸಾಮಾನ್ಯರಂತೆ ಅವರನ್ನೂ ಗೌರವದಿಂದ ಸಮಾಜ ನಡೆಸಿಕೊಳ್ಳಬೇಕು ಎಂದರು.
ಮುಖ್ಯಶಿಕ್ಷಕ ಶಿವಚಿದಂಬರ್ ಅಧ್ಯಕ್ಷತೆ ವಹಿಸಿದ್ದರು. ಬ್ಯಾಂಕ್ ನಿವೃತ್ತ ಅಧಿಕಾರಿ ರಂಗನಾಥ್, ಸಂಪನ್ಮೂಲ ಶಿಕ್ಷಕ ನಾಗೇಶ್, ಮಸರ್ ಆಲಿ ಖಾನ್ ಉಪಸ್ಥಿತರಿದ್ದರು. ಶಿಕ್ಷಕ ನಾರಾಯಣಸ್ವಾಮಿ ಸ್ವಾಗತಿಸಿದರು. ಶಿಕ್ಷಕಿ ಸಾವಿತ್ರಿ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments