ಸಾಹಿತ್ಯ ಸಾಮಾಜಿಕ ಕಳಕಳಿ ಬಿಂಬ: ಮೀರಾ
ಕ.ಪ್ರ.ವಾರ್ತೆ ಟಿ ನಾಗಮಂಗಲ ಟಿ ಮಾ. 19
ಸಾಹಿತ್ಯ ಮತ್ತು ಸಂಸ್ಕೃತಿ ಸಾಮಾಜಿಕ ಕಳಕಳಿಯ ಪ್ರತಿಬಿಂಬವಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಮೀರಾ ಶಿವಲಿಂಗಯ್ಯ ಹೇಳಿದರು.
ತಾಲೂಕಿನ ಹೆರಗನಹಳ್ಳಿ ಗ್ರಾಮದಲ್ಲಿ ತಾಲೂಕು ಕಸಾಪ ಮತ್ತು ಗ್ರಾಮಸ್ಥರ ನೆರವಿನೊಂದಿಗೆ ಸಾಹಿತಿ ಎಚ್.ಎಲ್. ಕೇಶವಮೂರ್ತಿ ಅವರಿಗೆ ಆಯೋಜಿಸಿದ್ದ ತವರಿನ ಸಿರಿ ಅಭಿನಂದನಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾಂಸ್ಕೃತಿಕ ತೇರಾಗಿರುವ ಸಾಹಿತ್ಯವನ್ನು ಪ್ರತಿಯೊಬ್ಬರು ಗೌರವಿಸಬೇಕು ಎಂದರು.
ಸಾಹಿತ್ಯದ ಬದುಕಿನಲ್ಲಿ ಸಮಾಜದ ಅಂಕು-ಡೊಂಕುಗಳನ್ನು ಸೂಕ್ಷ್ಮವಾಗಿ ತಿಳಿಸಿರುವ ಎಚ್.ಎಲ್. ಕೇಶವಮೂರ್ತಿ ಅವರ ಬರಹ ಗಮನಿಸಿದಾಗ ಸಾಹಿತ್ಯದಲ್ಲಿ ಸಂಸ್ಕೃತಿ ಹಾಗೂ ಸಾಂಸ್ಕೃತಿಕ ನೆಲೆಗಟ್ಟನ್ನು ಹುಡುಕಿಕೊಳ್ಳಬಹುದು ಎಂದು ಹೇಳಿದರು.
ಅಂಕಣಕಾರ ಬಿ.ಚಂದ್ರೇಗೌಡ, ಶಾಸಕ ಸುರೇಶ್ಗೌಡ, ಮಾಜಿ ಸಚಿವ ಎಚ್.ಟಿ. ಕೃಷ್ಣಪ್ಪ, ವಕೀಲ ರಮೇಶ್ಗೌಡ ಅವರು ಎಚ್.ಎಲ್. ಕೇಶವಮೂತಿ ಅವರ ಪರಿಚಯ ಹಾಗೂ ಬರಹಗಳ ಬಗ್ಗೆ ಮಾತನಾಡಿದರು.
ಅಭಿನಂದನೆ ಸ್ವೀಕರಿಸಿದ ಎಚ್.ಎಲ್. ಕೇಶವಮೂರ್ತಿ, ಗ್ರಾಮೀಣ ಪ್ರದೇಶಗಳಲ್ಲಿ ಇಂಗ್ಲೀಷ್ ವ್ಯಾಮೋಹದಿಂದ ಸರ್ಕಾರಿ ಕನ್ನಡ ಶಾಲೆಗಳು ಮುಚ್ಚುವ ಸ್ಥಿತಿ ತಲುಪುತ್ತಿವೆ. ಗ್ರಾಮೀಣ ಪೋಷಕರು ಕನ್ನಡ ಶಾಲೆಗಳತ್ತ ಒಲವು ತೋರುತ್ತಿಲ್ಲ.
ಇಂಗ್ಲೀಷ್ ಒಂದು ಭಾಷೆಯಾಗಿರಲಿ. ಆದರೆ, ಮಾತೃ ಭಾಷೆ ಮಾತ್ರ ಕನ್ನಡವಾಗಿರಬೇಕೆಂಬುದು ನಮ್ಮೆಲ್ಲರ ಆಶಯ ಎಂದರು.
ಡಾ.ಕೃಷ್ಣೇಗೌಡ, ಜಿಲ್ಲಾ ಕಸಾಪ ಕಾರ್ಯದರ್ಶಿ ಪುಟ್ಟಸ್ವಾಮಿ, ಲೋಕೇಶ್ ಉಪಸ್ಥಿತರಿದ್ದರು. ತಾಲೂಕು ಕಸಾಪ ಅಧ್ಯಕ್ಷ ದೇ.ರಾ. ಜಗದೀಶ ಪ್ರಾಸ್ತಾವಿಕವಾಗಿ ಮಾತನಾಡಿದರು. ದಿನೇಶ್ ಸ್ವಾಗತಿಸಿ, ಲೋಕೇಶ್ ವಂದಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.