ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮಂಡ್ಯ

ಅಕ್ರಮ ನಡೆಸೀರಿ ಜೋಕೆ

Parashurama
Updated On : 21 Mar 2013, 10:45 am

ಕನ್ನಡಪ್ರಭ ವಾರ್ತೆ, ಮಳವಳ್ಳಿ, ಮಾ, 21
ಚುನಾವಣಾ ದಿನಾಂಕ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ತಾಲೂಕಿನಲ್ಲೂ ಚುನಾವಣಾ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ಎಲ್ಲಾ ಗ್ರಾಪಂಗಳ ಪಿಡಿಓ, ಕಾರ್ಯದರ್ಶಿಗಳು, ಕಂದಾಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
  ನೀತಿ ಸಂಹಿತೆ ಜಾರಿಯಾದ ಬೆನ್ನೆಲ್ಲೇ ಬೆಳಗ್ಗೆ ಇಲ್ಲಿನ ತಾ ಪಂ ಕಚೇರಿ ಸಭಾಂಗಣದಲ್ಲಿ ನಡೆದ ಪಿಡಿಓ. ಕಾರ್ಯದರ್ಶಿಗಳು ಹಾಗೂ ಕಂದಾಯ ಅಧಿಕಾರಿಗಳ ತುರ್ತು ಸಭೆಯಲ್ಲಿ ಈ ಸೂಚನೆ ನೀಡಿರುವ ತಾಪಂ ಇಓ ಎಜಾಸ್‌ಪಾಷ, ಚುನಾವಣಾಧಿಕಾರಿಗಳೂ ಆದ ತಹಸೀಲ್ದಾರ್ ಎಂ.ಆರ್. ರಾಜೇಶ್ ಅವರು ಈ ಬಾರಿಯ ಚುನಾವಣೆಯನ್ನು ಕಟ್ಟುನಿಟ್ಟಾಗಿ ನಡೆಸಲು ಚುನಾವಣಾ ಆಯೋಗ ನಿರ್ಧರಿಸುವುದರ ಜೊತೆಗೆ ನೀತಿ ಸಂಹಿತೆ ಜಾರಿ ಕುರಿತು ಆಯೋಗ ಹದ್ದಿನ ಕಣ್ಣು ಇಟ್ಟಿದ್ದು, ಸ್ವಲ್ಪ ವ್ಯತ್ಯಾಸವಾದರೂ ನಿರ್ದಾಕ್ಷಿಣ್ಯ ಕ್ರಮಕ್ಕೆ ಆಯೋಗ ಮುಂದಾಗುವುದರಿಂದ ಈ ಬಗ್ಗೆ ತೀವ್ರ ನಿಗಾ ವಹಿಸುವಂತೆ ಪಂಚಾಯ್ತಿ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
 ಈ ಕೂಡಲೇ ಗ್ರಾಮಗಳಲ್ಲಿ ಹಾಕಲಾಗಿರುವ ಎಲ್ಲಾ ರೀತಿಯ ಗೋಡೆ ಬರಹ, ಫ್ಲೆಕ್ಸ್, ಬೋರ್ಡ್‌ಗಳು ಬ್ಯಾನರ್‌ಗಳು, ಇನ್ನಿತರ ಫಲಕ ತೆರವುಗೊಳಿಸುವಂತೆ ಸೂಚನೆ ನೀಡಿದ ಇಓ ಹಾಗೂ ತಹಸೀಲ್ದಾರ್ ಅವರು, ಯಾವುದೇ ಪಕ್ಷದ ಫಲಕ ಬ್ಯಾನರ್ ಚಿಹ್ನೆ ಹಾಗೂ ಪಕ್ಷದ ನಾಯಕರ ಭಾವಚಿತ್ರಗಳು ಅನುಮತಿ ಪಡೆಯದೆ ಹಾಕಿದ್ದ ಪಕ್ಷದಲ್ಲಿ ಅದಕ್ಕೆ ಆಯಾ ಪಂಚಾಯ್ತಿ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡುವುದಾಗಿ ಎಚ್ಚರಿಸಿದರು.
ಪಂಚಾಯ್ತಿಗಳಿಗೆ ನಿಗಧಿತ ಶುಲ್ಕ ಪಾವತಿಸಿಅನುಮತಿ ಪಡೆದ ನಂತರವಷ್ಟೆ ಹಾಕಬಹುದಾಗಿದ್ದು ಪರವಾನಿಗೆ ಇಲ್ಲದೆ ಬ್ಯಾನರೆ ಬೋರ್ಡ್‌ಗಳನ್ನು ಹಾಕಿದಲ್ಲಿ ಅಂತಹವರ ವಿರುದ್ಧ ಸೂಕ್ತಕ್ರಮ ಕೈಗೊಳ್ಳಬೇಕೆಂದು ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಲಾಯಿತು. ಅಲ್ಲದೆ ತೀವ್ರತರದ ಬೇಸಿಗೆಯಿಂದ ವಿದ್ಯುಚ್ಛಕ್ತಿ ಅಭಾವದಿಂದಾಗಿ ಕೆಲ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ತೀವ್ರ ಸಮಸ್ಯೆ ಇರುವ ಗ್ರಾಮಗಳಿಗೆ ಮಾತ್ರ ಕುಡಿಯುವ ನೀರನ್ನು ಟ್ಯಾಂಕರ್‌ನಲ್ಲಿ ಸರಬರಾಜು ಮಾಡಲು ಜಿ ಪಂ ಸಹಾಯಕ ಕಾರ್ಯಾಪಾಲಕ ಅಭಿಯಂತರರಾದ ಪದ್ಮನಾಭ ಅವರಿಗೆ ಸೂಚಿಸಿದ ಇಓ ಎಜಾಸ್‌ಪಾಷಾ ಅವರು ನೀರು ಸರಬರಾಜು ಮಾಡುವ ವಿಚಾರದಲ್ಲಿ ಯಾವುದೇ ರಾಜಕೀಯ ಶಿಫಾರಸ್ಸು ಹಾಗೂ ಹಸ್ತಕ್ಷೇಪಕ್ಕೆ ಅವಕಾಶ ನೀಡದಂತೆ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸಲಹೆ ಮಾಡಿದರು. ಇಓ ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments