ಆಯುಷ್ ಇಲಾಖೆಯ 'ಮನೆ ಮದ್ದು'
ಮಂಡ್ಯ: ತಾಲೂಕಿನ ತಿಮ್ಮನ ಹೊಸೂರು ಗ್ರಾಮದಲ್ಲಿ ಗ್ರಾಪಂ ಮಾಜಿ ಅಧ್ಯಕ್ಷೆ ಚಂದ್ರಮ್ಮ ಅಧ್ಯಕ್ಷತೆಯಲ್ಲಿ ಆಯುಷ್ ಇಲಾಖೆ ವತಿಯಿಂದ 'ಮನೆ ಮದ್ದು' ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಡಾ.ಪ್ರಸನ್ನಕುಮಾರ್, ಪ್ರತಿ ನಿತ್ಯ ಮನೆಗಳಲ್ಲಿ ಬಳಸುವ ವಸ್ತುಗಳಾದ ಕರಿಬೇವಿನ ಎಲೆ ಸೇವನೆಯಿಂದ ರಕ್ತ ಶುದ್ಧಿಯಾಗುತ್ತದೆ. ರಕ್ತಹೀನತೆ ಕಡಿಮೆ ಆಗುತ್ತದೆ. ಪುದೀನ ಸೊಪ್ಪು ಮತ್ತು ಶುಂಠಿ ರಸ ಸೇವನೆಯಿಂದ ಗ್ಯಾಸ್ಟ್ರಿಕ್ಟ್ ಕಡಿಮೆ ಆಗುತ್ತದೆ ಎಂಬ ಇತ್ಯಾದಿಗಳ ಬಗ್ಗೆ ತಿಳಿಸಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಚ್.ಎಂ.ದಕ್ಷಿಣಮೂರ್ತಿ ಮಾತನಾಡಿ, ಕ್ಷಯರೋಗದ ಲಕ್ಷಣಗಳ ಕುರಿತು ಕುಟುಂಬ ಕಲ್ಯಾಣ ತಾತ್ಕಾಲಿಕ ಬಳಕೆ ಮತ್ತು ಶಾಶ್ವತ ವಿಧಾನಗಳ ಬಗ್ಗೆ ತಿಳಿಸಿದರು. ಡಾ.ಸೌಮ್ಯ, ಮನೆಗಳಲ್ಲಿ ಆಯುಸ್ ಔಷಧಿಗಳನ್ನು ತಯಾರು ಮಾಡುವ ಬಗ್ಗೆ ಪ್ರಾಯೋಗಿಕವಾಗಿ ತೋರಿಸಿದರು. ಡಾ.ಲಿಂಗರಾಜು, ಮೆಂತ್ಯಾಪುಡಿ, ನೇರಳೆ ಬೀಜದ ಪುಡಿಯನ್ನು ನೀರಿನಲ್ಲಿ ಸೇರಿಸಿ ಕುಡಿಯುವುದರಿಂದ ಸಕ್ಕರೆ ಕಾಯಿಲೆ ನಿಯಂತ್ರಣದಲ್ಲಿ ಇಡಬಹುದು ಎಂದು ತಿಳಿಸಿದರು. ಆಶಾ ಕಾರ್ಯಕರ್ತೆ ಕಿ.ಮ.ಆ.ಸ.ನೇತ್ರಾ, ಅಂಗನವಾಡಿ ಕಾರ್ಯಕರ್ತರು, ಸ್ವ ಸಹಾಯ ಸಂಘದ ಸದಸ್ಯರು ಮತ್ತಿತರರು ಈ ಸಂದರ್ಭದಲ್ಲಿ ಭಾಗವಹಿಸಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.