ಇಂದು ಕರಗ ಮಹೋತ್ಸವ
ಮಂಡ್ಯ: ತಾಲೂಕಿನ ಚಿಕ್ಕಮಂಡ್ಯ ಗ್ರಾಮದಲ್ಲಿ 22ರಂದು ಲಕ್ಷ್ಮಿದೇವಿ (ಹುಚ್ಚಮ್ಮ) ದೇವಸ್ಥಾನದ 10ನೇ ವರ್ಷದ ಮಹೋತ್ಸವ ನಡೆಯಲಿದೆ. ಬೆಳಗ್ಗೆ 9 ಗಂಟೆಗೆ ಹೋಮ, ಸಂಜೆ 4 ಗಂಟೆಗೆ ಕರಗ ಮಹೋತ್ಸವ, ಮಾ.23 ರಂದು ಬೆಳಗ್ಗೆ 9 ಗಂಟೆಯಿಂದ ಅನ್ನ ಸಂತರ್ಪಣೆ ನಡೆಯಲಿದೆ.
ನಾಳೆ ರೈತರ ಸಭೆ
ಮಂಡ್ಯ: ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಸರ್.ಎಂ.ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗದಲ್ಲಿ ಮಾ.23ರ ಬೆಳಗ್ಗೆ 11ಗಂಟೆಗೆ ಶ್ರೀರಂಗಪಟ್ಟಣ ಕ್ಷೇತ್ರದ ಕೊತ್ತತ್ತಿ 1 ಮತ್ತು 2ನೇ ವೃತ್ತದ ರೈತ ಕಾರ್ಯಕರ್ತರ ಸಭೆ ಕರೆಯಲಾಗಿದೆ. ಸಭೆಯಲ್ಲಿ ಶ್ರೀರಂಗಪಟ್ಟಣ ಕ್ಷೇತ್ರದ ಅಧ್ಯಕ್ಷ ಕೆಂಪೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಹನಿಯಂಬಾಡಿ ನಾಗರಾಜು, ಕೆ.ಎಸ್.ಬಾಲಚಂದ್ರ ತಿಳಿಸಿದ್ದಾರೆ.
ಹುತಾತ್ಮರ ನೆನಪು
ಮಂಡ್ಯ: ಕರ್ನಾಟಕ ವಿದ್ಯಾರ್ಥಿ ಸಂಘಟನೆ ವತಿಯಿಂದ ಮಾ.23 ರಂದು ಭಗತ್ಸಿಂಗ್, ಸುಖ್ದೇವ್, ರಾಜಾಗುರು ಅವರ 82ನೇ ಹುತಾತ್ಮ ದಿನಾಚರಣೆ ಅಂಗವಾಗಿ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಸಿಲ್ವರ್ ಜೂಬಿಲಿ ಪಾರ್ಕ್ವರೆಗೆ ಸೈಕಲ್ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆ ಪದಾಧಿಕಾರಿಗಳು ತಿಳಿಸಿದ್ದಾರೆ.
ಮುಂದೂಡಿಕೆ
ಮಂಡ್ಯ: ಮಂಡ್ಯ ನಗರದ ಗಾಂಧಿ ಭವನದ ಆವರಣದಲ್ಲಿ ಮಾ.22 ರಂದು ಮಧ್ಯಾಹ್ನ 3ಕ್ಕೆ ನಡೆಯಬೇಕಿದ್ದ ವಿಶ್ವಜಲ ದಿನಾಚರಣೆ ಕಾರ್ಯಕ್ರಮವನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ ಎಂದು ವಿಜ್ಞಾನ ಮತ್ತು ಪರಿಸರ ಶಿಕ್ಷಣ ಅಕಾಡೆಮಿ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದುಕೊರತೆ ಸಭೆ
ಮಂಡ್ಯ: ಪೊಲೀಸ್ ಇಲಾಖೆ ವತಿಯಿಂದ ಜಿಲ್ಲೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜನಾಂಗದವರ ಕುಂದು ಕೊರತೆಗಳ ಬಗ್ಗೆ ಚರ್ಚಿಸಲು ಮಾ. 24 ರಂದು ಮ.12 ಗಂಟೆಗೆ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿ ಸಭಾಂಗಣದಲ್ಲಿ ಸಭೆ ಕರೆಯಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಹಾಗೂ ದಲಿತ ಮುಖಂಡರು ಈ ಸಭೆಯಲ್ಲಿ ಪಾಲ್ಗೊಳ್ಳಬಹುದು.
ನಿವೇಶನ ಅಕ್ರಮ: ತನಿಖೆಗೆ ಆದೇಶ
ಕನ್ನಡಪ್ರಭ ವಾರ್ತೆ ಮಂಡ್ಯ, ಮಾ 20
ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 107 ನಿವೇಶನಗಳ ಅಕ್ರಮ ಹಂಚಿಕೆಯ ಕುರಿತು ತನಿಖೆ ನಡೆಸಿ ವರದಿ ನೀಡುವಂತೆ ನಿವೃತ್ತ ಜಿಲ್ಲಾ ನ್ಯಾಯಾಧೀಶರೊಬ್ಬರ ಸಮಿತಿಗೆ ಸೂಚಿಸಿದೆ.
ಈ ಕುರಿತಂತೆ ಆದೇಶ ಹೊರಡಿಸಿದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ನಿವೃತ್ತ ಜಿಲ್ಲಾ ನ್ಯಾಯಾಧೀಶ ಎಸ್. ಸಿ. ಇಂಗಳಗಿ ಅವರನ್ನು ತನಿಖಾಧಿಕಾರಿಯಾಗಿ ನೇಮಕ ಮಾಡಿದೆ. ನಿವೇಶನ ಹಂಚಿಕೆಯಲ್ಲಿ ಆಗಿರುವ ಲೋಪಗಳ ಬಗ್ಗೆ ಸಮಗ್ರ ತನಿಖೆ ನಡೆಸಿ ಮೂರು ತಿಂಗಳಲ್ಲಿ ವರದಿ ನೀಡುವಂತೆ ಆದೇಶಿಸಲಾಗಿದೆ. ತನಿಖಾಧಿಕಾರಿಗಳಿಗೆ ಸಮಗ್ರವಾಗಿ ಸಹಕಾರ ನೀಡುವಂತೆ ಡಿಸಿಗೆ ಸೂಚಿಸಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.