ನಿರಂತರ ಪರಿಶ್ರಮದಿಂದ ಯಶಸ್ಸು ಸಾಧ್ಯ: ಬಸವರಾಜು
ಕನ್ನಡಪ್ರಭ ವಾರ್ತೆ, ಮಂಡ್ಯ, ಮಾ.21
ಕಲೆ ಮತ್ತು ಸಾಹಿತ್ಯದಲ್ಲಿ ನಿರಂತರ ಪರಿಶ್ರಮವಿದ್ದರೆ ಯಶಸ್ಸು ಖಂಡಿತ ಸಾಧ್ಯ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ವಾರ್ತೆ ಇಲಾಖೆ ಪ್ರಧಾನ ಕಾರ್ಯದರ್ಶಿ ಬಸವರಾಜು ಅಭಿಪ್ರಾಯಪಟ್ಟರು.
ತಾಲೂಕಿನ ಕಾಗೇಮಂಟಿಯಲ್ಲಿ ಗಿರೀಶ ಮಾಚಹಳ್ಳಿ ನಿರ್ದೇಶನದ ಆರ್ಯ ದ್ರಾವಿಡ ನಾಟಕ ಉದ್ಘಾಟಿಸಿ ಮಾತನಾಡಿದ ಅವರು, ಬಸವರಾಜು ಮಾಚಹಳ್ಳಿಯವರ 2 ವರ್ಷಗಳ ಸತತ ಪ್ರಯತ್ನದಿಂದಾಗಿ ಗ್ರಾಮೀಣ ಪ್ರದೇಶದಲ್ಲಿ ಅತ್ಯುತ್ತಮ ವೇದಿಕೆ ಸಿದ್ಧಪಡಿಸಿ, ಮಾನವನ ಉಗಮದಿಂದ ಇಂದಿನ ಜೀವನದವರೆಗೆ ನಾಗರಿಕತೆ, ಸಾಮಾಜಿಕ ಹಾಗೂ ಆರ್ಥಿಕತೆ ಮೇಲೆ ಉಂಟಾದ ಬದಲಾವಣೆಗಳ ಬಗ್ಗೆ 10 ಗಂಟೆಗಳ ಕಾಲ ಪ್ರದರ್ಶನಗೊಳ್ಳುವ ನಾಟಕದಲ್ಲಿ ತೋರಿಸುವ ಕ್ರಿಯಾಶೀಲತೆ ಮೆಚ್ಚುವಂತಹದ್ದು ಎಂದರು.
ಭ್ರಷ್ಠಾಚಾರ ಹಾಗೂ ಜಾತಿ ಪದ್ಧತಿ ಇಂದಿಗೂ ನಮ್ಮ ಸಮಾಜದಲ್ಲಿ ಕಾಣಬಹುದು. ಆರ್ಯ ದ್ರಾವಿಡ ನಾಟಕವು ಅವುಗಳ ವಿರುದ್ಧ ಹೋರಾಡಲು ಯುವಕರಿಗೆ ಸ್ಫೂರ್ತಿ ತುಂಬಲಿದೆ ಎಂದರು.
ಪಿಇಟಿ ಸಂಸ್ಥೆ ಅಧ್ಯಕ್ಷ ಡಾ.ಹೆಚ್.ಡಿ.ಚೌಡಯ್ಯ, ಪ್ರೊ. ಕೆ.ಎಸ್.ಭಗವಾನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಪುಟ್ಟಸ್ವಾಮಿ, ಜಿಲ್ಲಾ ವಾತಾಧಿಕಾರಿ ಆರ್.ರಾಜು ಮತ್ತಿತರರು ಉಪಸ್ಥಿತರಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.