ಫ್ಲೆಕ್ಸ್ ತೆರವು: ರಾಷ್ಟ್ರ ಪ್ರೇಮಿಗಳ ಪ್ರತಿಭಟನೆ
ಕನ್ನಡಪ್ರಭ ವಾರ್ತೆ, ಮಂಡ್ಯ, ಮಾ.21
ಹುತಾತ್ಮರ ದಿನಾಚರಣೆ ಅಂಗವಾಗಿ ನಗರದಲ್ಲಿ ಹಾಕಲಾಗಿದ್ದ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿರುವ ನಗರಸಭೆ ಅಧಿಕಾರಿಗಳ ಕ್ರಮ ಖಂಡಿಸಿ ರಾಷ್ಟ್ರ ಪ್ರೇಮಿಗಳ ಬಳಗ ವತಿಯಿಂದ ಕಾರ್ಯಕರ್ತರು ನಗರಸಭೆ ಎದುರು ಗುರುವಾರ ಪ್ರತಿಭಟನೆ ನಡೆಸಿದರು.
ಯಾವುದೇ ರಾಜಕೀಯ ಪಕ್ಷಗಳಿಗೆ ಸಂಬಂಧ ಪಡದ ಫ್ಲೆಕ್ಸ್‌ಗಳನ್ನು ಚುನಾವಣೆ ನೀತಿ ಸಂಹಿತೆ ಹೆಸರಿನಲ್ಲಿ ತೆರವು ಮಾಡಿರುವುದು ಸರಿಯಲ್ಲ ಎಂದು ಪೌರಾಯುಕ್ತರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮಾ.23 ರಂದು ಭಗತ್ ಸಿಂಗ್, ರಾಜ್‌ಗುರು, ಸುಖದೇವ್ ಅವರ ಬಲಿದಾನಗೈದ ದಿನ. ಅಂದು ಹುತಾತ್ಮರ ದಿನ ಆಚರಿಸಲು ನಿರ್ಧರಿಸಿ ಫ್ಲೆಕ್ಸ್ ಹಾಕಲು ನಗರಸಭೆಯಿಂದ ಅನುಮತಿ ಪಡೆಯಲಾಗಿತ್ತು. ಆದರೂ ಅವರನ್ನು ತೆರವುಗೊಳಿಸಿರುವುದಕ್ಕೆ ತೀವ್ರವಾಗಿ ಖಂಡಿಸಿದರು.
ನಗರಸಭೆಯ ಅಧಿಕಾರಿಗಳ ವರ್ಗಧ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದ ಕಾರ್ಯಖರ್ತರು ರಾಜಕೀಯೆತರ ಕಾರ್ಯಕ್ರಮದ ಫ್ಲೆಕ್ಸ್ ತೆಗೆದಿರುವುದು ಪೂರ್ವಗ್ರಹ ಪೀಡಿತವಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.