ಮಳವಳ್ಳಿಯಲ್ಲಿ ಇಂದಿನಿಂದ ದಿನ ಬಿಟ್ಟು ದಿನ ನೀರು ಪೂರೈಕೆ
ಮಳವಳ್ಳಿ: ಪಟ್ಟಣದಲ್ಲಿ ಇಂದಿನಿಂದಲೇ ದಿನಬಿಟ್ಟು ದಿನಕ್ಕೆ ಕಾವೇರಿ ಕುಡಿಯುವ ನೀರನ್ನು ಪೂರೈಕೆ ಮಾಡುವ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ಪುರಸಭೆಯ ಮುಖ್ಯಾಧಿಕಾರಿ ಮಂಜುನಾಥ್ ತಿಳಿಸಿದ್ದಾರೆ.
'ಕನ್ನಡಪ್ರಭ'ದೊಂದಿಗೆ ಈ ಮಾಹಿತಿ ನೀಡಿರುವ ಅವರು ಪಟ್ಟಣಕ್ಕೆ ಕಾವೇರಿ ನದಿಯಿಂದ ಕುಡಿಯುವ ನೀರನ್ನು ಪಂಪ್ ಮಾಡುವ ಹೆಡ್ವರ್ಕ್ಸ್ ಬಳಿ ನದಿಯಲ್ಲಿ ನೀರಿನ ಮಟ್ಟ ಸಂಪೂರ್ಣ ಇಳಿಮುಖವಾಗಿದ್ದು ಒಮ್ಮೊಮ್ಮೆ ಪೈಪ್ಗಳ ಮಟ್ಟಕ್ಕೂ ನೀರು ಎಟುಕದ ಮಟ್ಟಕ್ಕೆ ಕುಸಿಯುತ್ತಿರುವುದರಿಂದ ಪ್ರತಿನಿತ್ಯ ನೀರು ಸರಬರಾಜು ಅಸಾಧ್ಯವಾಗಿದೆ ಎಂದು ಹೇಳಿದ್ದಾರೆ. ಅಲ್ಲದೆ ನೀರು ಪಂಪ್ ಮಾಡಲು ವಿದ್ಯುತ್ ಸಮಸ್ಯೆ ಸಹ ತೀವ್ರವಾಗುತ್ತಿದ್ದು ನೀರಿದ್ದರೆ ಕರೆಂಟ್ ಇಲ್ಲ, ಕರೆಂಟ್ ಇದ್ದರೆ ನೀರಿಲ್ಲ ಎನ್ನುವ ಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ನೀರಿನ ಲಭ್ಯತೆಯನ್ನು ಆಧರಿಸಿ ಒಂದು ದಿನ ನೀರನ್ನು ಸಂಗ್ರಹಿಸಿಟ್ಟುಕೊಂಡು ಮಾರನೇ ದಿನಕ್ಕೆ ನೀರು ಪೂರೈಕೆ ಮಾಡುವ ಅನಿವಾರ್ಯತೆ ನಿರ್ಮಾಣವಾಗಿದೆ ಎಂದಿರುವ ಮುಖ್ಯಾಧಿಕಾರಿಗಳು ಈ ಹಿನ್ನೆಲೆಯಲ್ಲಿ ಪಟ್ಟಣಕ್ಕೆ ದಿನಬಿಟ್ಟು ದಿನ ನೀರು ಪೂರೈಕೆ ಮಾಡುವ ನಿರ್ಧಾರಕ್ಕೆ ಬರಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಪಟ್ಟಣದ ನಾಗರೀಕರು ನೀರು ಬರುವ ದಿನ ನೀರನ್ನು ಸಂಗ್ರಹಿಸಿಟ್ಟುಕೊಂಡು ಪುರಸಭೆಯ ಜೊತೆ ಸಹಕರಿಸುವುದರ ಜೊತೆಗೆ ಕುಡಿಯುವ ನೀರು ಪೋಲು ಮಾಡದಂತೆ ಆದಷ್ಟು ಮಿತವಾಗಿ ನೀರನ್ನು ಬಳಸಬೇಕೆಂದು ಸಿಇಒ ಮಂಜುನಾಥ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.