ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮಂಡ್ಯ

ವಿಷಪೂರಿತ ಕಾಯಿ ಸೇವಿಸಿ ನಾಲ್ವರು ಅಸ್ವಸ್ಥ

Parashurama
Updated On : 22 Mar 2013, 11:14 am

ಕ.ಪ್ರ.ವಾರ್ತೆ ಮದ್ದೂರು ಮಾ.22
ವಿಷಪೂರಿತ ಕಾಯಿ ಸೇವಿಸಿ ನಾಲ್ವರು ಬಾಲಕರು ಅಸ್ವಸ್ಥಗೊಂಡಿರುವ ಘಟನೆ ತಾಲೂಕಿನ ಚಾಪುರದೊಡ್ಡಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಗ್ರಾಮದ ರಂಗೇಶ್, ಬಸವರಾಜು, ಮಹದೇವು ಹಾಗೂ ಚಿಕ್ಕಸ್ವಾಮಿ ಅಸ್ವಸ್ಥಗೊಂಡ ಬಾಲಕರು. ಮದ್ದೂರು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನಂತರ ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ರಂಗೇಶ್ ಮತ್ತು ಬಸವರಾಜು ದೇಶಹಳ್ಳಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು. ಶಾಲೆಗೆ ರಜೆ ಇದ್ದ ಹಿನ್ನೆಲೆಯಲ್ಲಿ ಇವರು ತಮ್ಮ ಸ್ನೇಹಿತರಾದ ಮಹದೇವು ಮತ್ತು ಚಿಕ್ಕಸ್ವಾಮಿ ಅವರೊಂದಿಗೆ ಆಟವಾಡುತ್ತಿದ್ದ ವೇಳೆ ಮಾವಿನ ಕಾಯಿ ಎಂದು ಭಾವಿಸಿ ವಿಷಪೂರಿತ ಕಾಯಿಯೊಂದನ್ನು ಸೇವಿಸಿದ್ದಾರೆ.
ಕೆಲಹೊತ್ತಿನಲ್ಲಿ ನಾಲ್ವರು ಬಾಲಕರು ಅಸ್ವಸ್ಥಗೊಂಡಿದ್ದಾರೆ. ಇದನ್ನು ಕಂಡ ಗ್ರಾಮಸ್ಥರು ಪೋಷಕರಿಗೆ ವಿಷಯ ತಿಳಿಸಿ ನಂತರ ಮದ್ದೂರು ತಾಲೂಕು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ನಂತರ ವೈದ್ಯರ ಸಲಹೆ ಮೇರೆಗೆ ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments