29ರಂದು ರಾಜ್ಯದ ವಿವಿ ಕುಲಪತಿಗಳಿಗೆ ಅಭಿನಂದನೆ
ಕ.ಪ್ರ.ವಾರ್ತೆ ಮಂಡ್ಯ ಮಾ.25
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕರ್ನಾಟಕ ಸಂಘದ ವತಿಯಿಂದ ಮಾ.29ರಂದು ನಗರದಲ್ಲಿ ರಾಜ್ಯದ ವಿವಿಧ ವಿಶ್ವವಿದ್ಯಾಲಯದ ಕುಲಪತಿಗಳಿಗೆ ಸಾರ್ವಜನಿಕ ಅಭಿನಂದನೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಸಂಘ ಅಧ್ಯಕ್ಷ ಪ್ರೊ. ಬಿ.ಜಯಪ್ರಕಾಶ್ಗೌಡ ತಿಳಿಸಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದ ಪಿಇಎಸ್ ಎಂಜಿನಿಯರಿಂಗ್ ಕಾಲೇಜಿನ ಪ್ಲೇಸ್ಮೆಂಟ್ ಸಭಾಂಗಣದಲ್ಲಿ ನಡೆವ ಸಮಾರಂಭದಲ್ಲಿ ಮೈಸೂರು ವಿವಿ, ಬೆಂಗಳೂರು ವಿವಿ, ಕರ್ನಾಟಕ ರಾಜ್ಯ ಮುಕ್ತ ವಿವಿ ಮೈಸೂರು, ಕನ್ನಡ ವಿವಿ ಹಂಪಿ, ರಾಣಿ ಚೆನ್ನಮ್ಮ ವಿವಿ ಬೆಳಗಾವಿಯ ಕುಲಪತಿಗಳನ್ನು ಅಭಿನಂದಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ದಿವ್ಯ ಸಾನ್ನಿಧ್ಯವನ್ನು ಆದಿಚುಂಚನಗಿರಿ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ವಹಿಸುವರು. ಕರ್ನಾಟಕ ಉಚ್ಚನ್ಯಾಯಾಲಯ ನ್ಯಾಯಮೂರ್ತಿ ಹುಲುವಾಡಿ ಜಿ.ರಮೇಶ್ ಅಧ್ಯಕ್ಷತೆ ವಹಿಸಲಿದ್ದು, ಬೆಂಗಳೂರು ಕೃಷಿ ವಿವಿ ಕುಲಪತಿ ಪ್ರೊ. ಕೆ.ನಾರಾಯಣಗೌಡ ಕುಲಪತಿಗಳನ್ನು ಅಭಿನಂದಿಸಲಿದ್ದಾರೆ.
ಮೈಸೂರು ವಿವಿ ಕುಲಪತಿ ಪ್ರೊ. ಕೆ.ಎಸ್. ರಂಗಪ್ಪ, ಬೆಳಗಾವಿ ರಾಣಿ ಚೆನ್ನಮ್ಮ ವಿವಿ ಕುಲಪತಿ ಪ್ರೊ. ಬಿ.ಆರ್. ಅನಂತನ್, ಬೆಂಗಳೂರು ವಿವಿ ಕುಲಪತಿ ಪ್ರೊ. ಬಿ.ತಿಮ್ಮೇಗೌಡ, ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿ ಕುಲಪತಿ ಪ್ರೊ. ಎಂ.ಜಿ.ಕೃಷ್ಣನ್, ಹಂಪಿ ಕನ್ನಡ ವಿವಿ ಕುಲಪತಿ ಪ್ರೊ. ಹಿ.ಚಿ. ಬೋರಲಿಂಗಯ್ಯ ಅಭಿನಂದನೆ ಸ್ವೀಕರಿಸಲಿದ್ದಾರೆ.
ಹಿರಿಯ ನಾಯಕರಾದ ಡಾ. ಜಿ.ಮಾದೇಗೌಡ, ಡಾ. ಎಚ್.ಡಿ. ಚೌಡಯ್ಯ, ಶಾಸಕ ಎಂ.ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯ ಬಿ.ರಾಮಕೃಷ್ಣ, ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಜಯಪ್ರಕಾಶ್ಗೌಡ ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ ಅಧ್ಯಕ್ಷೆ ಮೀರಾ ಶಿವಲಿಂಗಯ್ಯ, ಮಾಜಿ ಅಧ್ಯಕ್ಷ ಎಚ್.ವಿ.ಜಯರಾಂ ಇದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.