ಅಸಮರ್ಪಕ ವಿದ್ಯುತ್: ಸೆಸ್ಕ್ ಎದುರು ಪ್ರತಿಭಟನೆ
ಕನ್ನಡಪ್ರಭ ವಾರ್ತೆ ಮಂಡ್ಯ ಮಾ.25
ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ತಾಲೂಕಿನ ಸಂಪಹಳ್ಳಿ, ಬೀರಗೊಂಡನಹಳ್ಳಿ, ಗೊರವಾಲೆ ಗ್ರಾಮಸ್ಥರು ಸೋಮವಾರ ನಗರದ ಸೆಸ್ಕ್‌ಂ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಗ್ರಾಮದಿಂದ ನಗರಕ್ಕೆ ಆಗಮಿಸಿದ ಗ್ರಾಮಸ್ಥರು ಸೆಸ್ಕ್ ಕಚೇರಿ ಎದುರು ಧರಣಿ ನಡೆಸಿ, ಮಂಡ್ಯ ನಗರಕ್ಕೆ ಪೂರೈಸಲಾಗುತ್ತಿರುವ ವಿದ್ಯುತ್ ಲೈನ್ ಸಂಪರ್ಕವನ್ನೇ ಈ ಗ್ರಾಮಗಳಿಗೂ ನೀಡಬೇಕೆಂದು ಒತ್ತಾಯಿಸಿದರು.
ಗ್ರಾಮಕ್ಕೆ ಸಂಪರ್ಕ ಕಲ್ಪಿಸಿರುವ ವಿದ್ಯುತ್ ಲೈನ್‌ನಲ್ಲಿ ದಿನದಲ್ಲಿ 3 ಗಂಟೆಯೂ ಸರಿಯಾಗಿ ವಿದ್ಯುತ್ ಸರಬರಾಜು ಆಗುತ್ತಿಲ್ಲ. ವಿದ್ಯುತ್ ಇಲ್ಲದೆ ಪಂಪ್‌ಸೆಟ್‌ಗಳು ಓಡುತ್ತಿಲ್ಲ. ಬೆಳೆದ ಬೆಳೆಗಳಿಗೆ ನೀರುಣಿಸಲೂ ಸಾಧ್ಯವಾಗುತ್ತಿಲ್ಲ. ಜೊತೆಗೆ ಕುಡಿಯುವ ನೀರಿಗೂ ಪರದಾಡುವಂತಹ ಸ್ಥಿತಿ ಎದುರಾಗಿದೆ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡರು.
ಮಂಡ್ಯ ನಗರಕ್ಕೆ ಸಂಪರ್ಕ ಕಲ್ಪಿಸಿರುವ ವಿದ್ಯುತ್ ಲೈನ್‌ನಿಂದ ಚಿಕ್ಕಮಂಡ್ಯಕ್ಕೆ ಸಂಪರ್ಕ ಕಲ್ಪಿಸಲಾಗಿದೆ. ಅದೇ ರೀತಿ ನಗರದಿಂದ 2-3 ಕಿ.ಮೀ. ದೂರದ ನಮ್ಮ ಗ್ರಾಮಗಳಿಗೂ ಅದೇ ಸಂಪರ್ಕವನ್ನು ಕಲ್ಪಿಸುವ ಮೂಲಕ ಗ್ರಾಮಸ್ಥರು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡುವಂತೆ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಕೃಷ್ಣಪ್ರಕಾಶ್, ಸಿದ್ದೇಗೌಡ, ರೇಣುಕಾ, ಉಮೇಶ, ಮಂಜುನಾಥ್ ಮತ್ತಿತರರು ಭಾಗವಹಿಸಿದ್ದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.