ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮಂಡ್ಯ

ಡಿಎಸ್‌ಎಸ್‌ನಿಂದ ಕಾರ್ಯಕರ್ತರ ಶಿಬಿರ

Parashurama
Updated On : 25 Mar 2013, 10:51 am

ಕ.ಪ್ರ.ವಾರ್ತೆ, ಮಂಡ್ಯ, ಮಾ.25
ಕರ್ನಾಟಕ ರಾಜ್ಯ ದಲಿತ ಸಂಘರ್ಷ ಜಿಲ್ಲಾ ಸಮಿತಿ ವತಿಯಿಂದ ಶ್ರೀರಂಗಪಟ್ಟಣದ ಮಂಜುನಾಥ ಸಮುದಾಯ ಭವನದಲ್ಲಿ ಮಾ.28 ಮತ್ತು 29ರಂದು ಜಿಲ್ಲಾ ಮಟ್ಟದ ಕಾರ್ಯಕರ್ತರ ಅಧ್ಯಯನ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಎಂ.ಬಿ.ಶ್ರೀನಿವಾಸ್ ತಿಳಿಸಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ, ದಲಿತ ವಿದ್ಯಾರ್ಥಿ ಒಕ್ಕೂಟ ಮತ್ತು ದಲಿತ ಮಹಿಳಾ ಒಕ್ಕೂಟದ ಸಹಯೋಗದಲ್ಲಿ 2 ದಿನಗಳ ಕಾಲ ನಡೆಯುವ ಶಿಬಿರದಲ್ಲಿ ವಿವಿಧ ವಿಚಾರಗಳ ಬಗ್ಗೆ ಗೋಷ್ಟಿಗಳು ನಡೆಯಲಿವೆ ಎಂದರು.
ಶಿಬಿರ ಶಾಸಕ ಸಿ.ಎಸ್.ಪುಟ್ಟರಾಜು ಉದ್ಘಾಟಿಸಲಿದ್ದಾರೆ.  ದಸಂಸ ರಾಜ್ಯ ಸಂಘಟನಾ ಸಂಚಾಲಕ ಎಂ.ಬಿ. ಶ್ರೀನಿವಾಸ್ ಅಧ್ಯಕ್ಷತೆ ವಹಿಸಲಿದ್ದು, ಜಿಲ್ಲಾಧಿಕಾರಿ ಬಿ.ಎನ್. ಕೃಷ್ಣಯ್ಯ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು. ಶಿಬಿರದ ದಿಕ್ಸೂಚಿ ಕುರಿತು ಪ್ರಗತಿಪರ ಚಿಂತಕ ಡಾ.ಬಂಜಗೆರೆ ಜಯಪ್ರಕಾಶ್ ಭಾಷಣ ಮಾಡಲಿದ್ದಾರೆ. ಹಲವರು ಅತಿಥಿಗಳಾಗಿ ಭಾಗವಹಿಸುವರು ಎಂದರು.
ಮೊದಲ ಗೋಷ್ಟಿಯಲ್ಲಿ ದಸಂಸ ಹುಟ್ಟು ಮತ್ತು ಬೆಳವಣಿಗೆ ಕುರಿತು ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮ ಸಮನ್ವಯಾಧಿಕಾರಿ ಡಾ. ಎಸ್. ತುಕಾರಾಂ ವಿಷಯ ಮಂಡನೆ ಮಾಡುವರು. ಕೋಲಾರದ  ದಸಂಸ ಹಿರಿಯ ನಾಯಕ ಎನ್.ವೆಂಕಟೇಶ್ ಅಧ್ಯಕ್ಷತೆ ವಹಿಸುವರು.
2ನೇ ಗೋಷ್ಟಿಯಲ್ಲಿ 'ಮಂಡ್ಯ ಜಿಲ್ಲೆಯ ದಸಂಸ ಹಾಗೂ ಇತರ ಪ್ರಗತಿಪರ ಚಳವಳಿಗಳು - ಹಿನ್ನೋಟ ಮತ್ತು ಮುಂದಿನ ಮಾರ್ಗ' ಕುರಿತು ಮಹಾರಾಣಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಪ್ರಾಧ್ಯಾಪಕ ಡಾ.ಕೆ.ಗುರುಸ್ವಾಮಿ ವಿಷಯ ಮಂಡಿಸುವರು. ಪ್ರಗತಿಪರ ಚಿಂತಕ ಪ್ರೊ. ಎಚ್.ಎಲ್. ಕೇಶವಮೂರ್ತಿ ಅಧ್ಯಕ್ಷತೆ ವಹಿಸಲಿದ್ದಾರೆ.
3ನೇ ಗೋಷ್ಟಿಯಲ್ಲಿ 'ವರ್ತಮಾನದಲ್ಲಿ ದಲಿತರ ಸಾಮಾಜಿಕ ಆರ್ಥಿಕ ಬಿಕ್ಕಟ್ಟುಗಳು' ಕುರಿತು ಪಿಯುಸಿಎಲ್ ಪ್ರಧಾನ ಕಾರ್ಯದರ್ಶಿ ಡಾ. ವಿ.ಲಕ್ಷ್ಮಿನಾರಾಯಣ ವಿಷಯ ಮಂಡಿಸುವರು. ಮೈಸೂರು ವಿವಿ ಪ್ರಾಧ್ಯಾಪಕ ಪ್ರೊ. ಡಿ.ಆನಂದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ವಿವರಿಸಿದರು.
ಸುದ್ದಿಗೋಷ್ಟಿಯಲ್ಲಿ ಎಂ.ವಿ. ಕೃಷ್ಣ, ಕುಬೇರಪ್ಪ, ಅರಳಕುಪ್ಪೆ ದೇವರಾಜ್, ಪಿ.ಹೇಮಂತ್ ಕುಮಾರ್ ಇದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments