ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮಂಡ್ಯ

ಅಕ್ರಮ ಮದ್ಯ: ಕ್ರಮಕ್ಕೆ ಆಗ್ರಹ

Parashurama
Updated On : 26 Mar 2013, 9:53 am

ಪಾಂಡವಪುರ:  ತಾಲೂಕಿನ ತಿಮ್ಮನಕೊಪ್ಪಲು ಗ್ರಾಮದ ಆಲೆಮನೆಯಲ್ಲಿ ಪಾಂಡವಪುರ ಪೋಲಿಸರು ಅಕ್ರಮ ಮದ್ಯ ವಶಪಡಿಸಿಕೊಂಡಿದ್ದು, ವಿಧಾನಸಭೆ ಚುನಾವಣೆಯಲ್ಲಿ ಅಕ್ರಮ ನಡೆಸಲು ಬಳಸುವುದಕ್ಕಾಗಿ ಶೇಖರಿಸಿದ್ದರೆನ್ನುವುದು ಸ್ಪಷ್ಟವಾಗಿರುವುದರಿಂದ ಚುನಾವಣೆ ಆಯೋಗ ತಕ್ಷಣ ಕ್ರಮ ಕೈಗೊಂಡು ತಪ್ಪಿತಸ್ಥರನ್ನು ಬಂಧಿಸಬೇಕೆಂದು ರೈತ ಸಂಘದ ಮುಖಂಡ ಹಾಗೂ ಜಿ.ಪಂ. ಸದಸ್ಯ ಎ.ಎಲ್. ಕೆಂಪೂಗೌಡ ಆಗ್ರಹಿಸಿದ್ದಾರೆ.  ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಚುನಾವಣೆ ಆಯೋಗ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.  ನಮ್ಮ ರೈತಸಂಘದ ಕಾರ್ಯಕರ್ತರಾದ ಚಿಕ್ಕಾಡೆ ವಿಜೇಂದ್ರ, ಪ್ರಕಾಶ್ ಹಾಗೂ ಇನ್ನಿತರ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿರುವ ಜೆಡಿಎಸ್ ಕಾರ್ಯಕರ್ತರಾದ ಡಿ.ಟಿ.ಧರ್ಮ, ಡಿ.ಪಿ. ಧರ್ಮ, ಡಿ.ಎನ್. ರವಿ, ಹಾಗೂ ಡಿ.ಎನ್. ಚಂದ್ರಶೇಖರ್ ಇವರ ಮೇಲೆ ಕಾನೂನು ಕ್ರಮ ಜರುಗಿಸಬೇಕು. ಹಾಗೆಯೇ ನಮ್ಮ ರೈತ ನಾಯಕರಾದ ಕೆ.ಎಸ್. ಪುಟ್ಟಣ್ಣಯ್ಯರನ್ನು ಜೆಡಿಎಸ್ ಕಾರ್ಯಕರ್ತರು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿರುವುದು ಸರಿಯಲ್ಲ. ಇದಕ್ಕೆ ಮತದಾರರೇ ತಕ್ಕ ಉತ್ತರ ನೀಡಲಿದ್ದಾರೆ ಎಂದು ಎಚ್ಚರಿಸಿದರು.   ತಾಲೂಕು ರೈತ ಸಂಘದ ಅಧ್ಯಕ್ಷರಾದ ಹರವು ಪ್ರಕಾಶ್, ರೈತ ಸಂಘದ ಮುಖಂಡರಾದ ಕೋಟಿ ಶಂಕೇರೇಗೌಡ, ಎಲೆಕೆರೆ ಜಯರಾಂ, ಚಿಕ್ಕಾಡೆ ಹರೀಶ್ ಉಪಸ್ಥಿತರಿದ್ದರು.
ಮಹಿಳೆ ಶವ ಪತ್ತೆ
ಮೈಸೂರು: ಮಂಡ್ಯ ಜಿಲ್ಲೆ ಮದ್ದೂರು- ಶೆಟ್ಟಿಹಳ್ಳಿ ರೈಲು ನಿಲ್ದಾಣಗಳ ನಡುವೆ 50 ವರ್ಷದ ಅಪರಿಚಿತ ಮಹಿಳೆಯೊಬ್ಬರು ಸೋಮವಾರ ರೈಲಿಗೆ ಸಿಕ್ಕಿ ಮೃತಪಟ್ಟಿದ್ದಾರೆ. ಹಸಿರು ಮತ್ತು ಮೆರೂನ್ ಬಣ್ಣದ ಸಿಲ್ಕ್ ಮಾದರಿ ಸೀರೆ, ಹಸಿರು ಬಣ್ಣದ ರವಿಕೆ ಧರಿಸಿದ್ದಾರೆ. ಮೃತರ ದೇಹವನ್ನು ಮಂಡ್ಯ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ. ಇವರ ವಾರಸುದಾರರ ಇದ್ದಲ್ಲಿ ದೂ. 0821- 2516579 ಸಂಪರ್ಕಿಸಲು ಮೈಸೂರು ರೇಲ್ವೆ ಠಾಣೆ ಪೊಲೀಸರು ಕೋರಿದ್ದಾರೆ.
ಮಹಿಳೆ ನೇಣು: ಕೊಲೆ ಶಂಕೆ
ಭಾರತೀನಗರ:  ಮಹಿಳೆಯೊಬ್ಬರು ನೇಣುಬಿಗಿದ ಸ್ಥಿತಿಯಲ್ಲಿ ಸಾವನ್ನಪ್ಪಿರುವ ಘಟನೆ ಇಲ್ಲಿನ ಆಲಭುಜನಹಳ್ಳಿ ರಸ್ತೆಯ ವಠಾರದ ಮನೆಯೊಂದರಲ್ಲಿ ಕಳೆದ ರಾತ್ರಿ ನಡೆದಿದ್ದು, ಕೊಲೆ ಎಂದು ಶಂಕಿಸಲಾಗಿದೆ. ಭಾರತೀನಗರ ನಿವಾಸಿ ಶಂಕರನ ಪತ್ನಿ ಶೃತಿ(22) ಎಂಬವರೇ ಸಂಶಯಾಸ್ಪದವಾಗಿ ಸಾವನ್ನಪ್ಪಿರುವ ಮಹಿಳೆ. ಈಕೆ ಭಾರತೀ ಕಾಲೇಜಿನಲ್ಲಿ ಎಂಕಾಂ ವಿದ್ಯಾರ್ಥಿಯಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments