ಗ್ಯಾಸ್ ರೀಫಿಲ್ಲಿಂಗ್ ವೇಳೆ ಬೆಂಕಿ: ತಪ್ಪಿದ ಅನಾಹುತ
ಮಂಡ್ಯ: ಅಕ್ರಮ ಗ್ಯಾಸ್ ರೀ ಫಿಲ್ಲಿಂಗ್ ವೇಳೆ ಸಂಭವಿಸಿದ ಬೆಂಕಿ ಅವಘಡದಿಂದ ಉಂಟಾಗುತ್ತಿದ್ದ ಭಾರಿ ಅನಾಹುತವೊಂದು ಅಗ್ನಿಶಾಮಕ ದಳ ಸಿಬ್ಬಂದಿ ಸಮಯ ಪ್ರಜ್ಞೆಯಿಂದ ತಪ್ಪಿದ ಘಟನೆ ನಗರದ ಹಳೇನಗರ ಬಡಾವಣೆಯಲ್ಲಿ ನಡೆದಿದೆ. ಬಡಾವಣೆ ವಾಸಿ ರತ್ನಮ್ಮ ಅವರಿಗೆ ಸೇರಿದ ಮನೆಯನ್ನು ಲೇಬರ್ ಕಾಲೋನಿ ವಾಸಿ ಜಯಂತ್ ಬಾಡಿಗೆಗೆ ಪಡೆದಿದ್ದರು. ಇಲ್ಲಿ ಅನಿಲ ಸಿಲಿಂಡರ್ ಹಾಗೂ ವಾಣಿಜ್ಯ ಬಳಕೆ ಸಿಲಿಂಡರ್ಗಳಿಂದ ಆಟೋ ಮತ್ತು ಗ್ಯಾಸ್ಲೈಟ್ಗಳಿಗೆ ರೀ ಫಿಲ್ಲಿಂಗ್ ಮಾಡುತ್ತಿದ್ದರು. ಒಂದು ಸಿಲಿಂಡರ್ನಲ್ಲಿ ಉಂಟಾದ ಸೋರಿಕೆಯಿಂದ ಬೆಂಕಿಹೊತ್ತಿತ್ತು. ಇದನ್ನು ಕಂಡ ಬಾಲಕನೊಬ್ಬ ತಕ್ಷಣ ಅಗ್ನಿಶಾಮಕ ಠಾಣೆಗೆ ವಿಷಯ ತಿಳಿಸಿದ. ಇದರಿಂದ ಕೂಡಲೇ ಎಚ್ಚೆತ್ತು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಠಾಣಾಧಿಕಾರಿ ಮಂಜುನಾಥ್ ಮತ್ತು ಸಿಬ್ಬಂದಿ ಗೋದಾಮಿನಲ್ಲಿ ದಾಸ್ತಾನಾಗಿದ್ದ ಸಿಲಿಂಡರ್ಗಳಿಗೆ ಬೆಂಕಿ ಕಿಡಿ ತಗುಲದಂತೆ ಎಚ್ಚರ ವಹಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.