ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮಂಡ್ಯ

ಚಿದಂಬರ್ 'ಕೈ'ಗೆ ಟಿಕೆಟ್: ಮುಖಂಡರ ಕಸರತ್ತು

Parashurama
Updated On : 26 Mar 2013, 9:52 am

ಕನ್ನಡಪ್ರಭ ವಾರ್ತೆ ಮಂಡ್ಯ ಮಾ.26
ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್.ಚಿದಂಬರ್ ಅವರಿಗೆ ಟಿಕೆಟ್ ನೀಡುವಂತೆ ಯುವ ಕಾಂಗ್ರೆಸ್ ಮುಖಂಡರು, ಇದೀಗ ಚಿದಂಬರ್ ಪರವಾಗಿ ಬ್ಯಾಟಿಂಗ್ ಆರಂಭಿಸಿದ್ದಾರೆ.
ಮಂಡ್ಯ ಕ್ಷೇತ್ರದಿಂದ ಕೆಪಿಸಿಸಿ ಉಪಾಧ್ಯಕ್ಷ ಅಂಬರೀಷ್ ಸ್ಪರ್ಧಿಸಿದರೆ ನಮ್ಮೆಲ್ಲರ ಸ್ವಾಗತವಿದ್ದು, ಅವರ ಗೆಲವಿಗೂ ಒಮ್ಮತದಿಂದ ಶ್ರಮಿಸುತ್ತೇವೆ. ಹಾಗೊಂದು ವೇಳೆ ಅಂಬರೀಷ್ ಬೇರೆ ಕ್ಷೇತ್ರದಿಂದ ಸ್ಪರ್ಧಿಸಿದರೆ ಎಂ.ಎಸ್. ಚಿದಂಬರ್ ಅವರಿಗೆ ಅವಕಾಶ ಕಲ್ಪಿಸುವಂತೆ ಪಕ್ಷದ ಯುವ ಮುಖಂಡರು ವರಿಷ್ಠರ ಮೇಲೆ ಒತ್ತಡ ಹೇರುತ್ತಿದ್ದಾರೆ.
ಉತ್ತಮ ರಾಜಕೀಯ ಹಿನ್ನೆಲೆಯಿಂದ ಬಂದಿರುವ ಚಿದಂಬರ್, 5 ವರ್ಷಗಳಿಂದ ಯುವ ಕಾಂಗ್ರೆಸ್ ಅಧ್ಯಕ್ಷ ಹುದ್ದೆಯನ್ನು ಯಶಸ್ವಿಯಾಗಿ ನಿಭಾಯಿಸಿದ್ದಾರೆ. ಅವರಿಗೆ ಟಿಕೆಟ್ ನೀಡಿದರೆ ಗೆಲವು ಸುಲಭವಾಗಲಿದೆ ಎಂದು ಯುವ ಕಾಂಗ್ರೆಸ್ ಮುಖಂಡ ಅರವಿಂದ್ ಮಂಗಳವಾರ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು.
ಕಾಂಗ್ರೆಸ್ ಯುವ ಮುಖಂಡ ರಾಹುಲ್‌ಗಾಂಧಿ ಅವರು, ಯುವಕರಿಗೆ ಚುನಾವಣೆಯಲ್ಲಿ ಶೇ.30ರಷ್ಟು ಆದ್ಯತೆ ನೀಡಲು ಸೂಚಿಸಿದ್ದಾರೆ. ಅದರಂತೆ ಯುವಕರಾಗಿರುವ ಚಿದಂಬರ್ ಅವರಿಗೆ ಟಿಕೆಟ್ ನೀಡಿದ್ದಲ್ಲಿ ಗೆಲವಿಗೆ ಎಲ್ಲಾ ಮುಖಂಡರು ಕಂಕಣಬದ್ಧರಾಗಿ ದುಡಿಯುತ್ತಾರೆಂಬ ವಿಶ್ವಾಸವಿದೆ ಎಂದು ಹೇಳಿದರು.
ಚಿದಂಬರ್ ಅವರ ಕುಟುಂಬ ಹಿಂದಿನಿಂದಲೂ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದಿದೆ. ಅವರ ತಾತಾ ಜೆ.ದೇವಯ್ಯ 1965ರಲ್ಲಿ ಕೆರಗೋಡು-ಮಂಡ್ಯ ಕ್ಷೇತ್ರದಿಂದ ಅಂದಿನ ವರ್ಚಸ್ವಿ ನಾಯಕ ಕೆ.ವಿ.ಶಂಕರಗೌಡ ವಿರುದ್ಧ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಜಯಗಳಿಸಿದ್ದರು.
ತದನಂತರ ವಿಧಾನ ಪರಿಷತ್ ಸದಸ್ಯರಾಗಿಯೂ ಕೆಲಸ ಮಾಡಿದ ದೇವಯ್ಯ, ಪ್ರಥಮ ಬಾರಿಗೆ ಎಸ್.ಎಂ. ಕೃಷ್ಣ ಅವರಿಗೆ ರಾಜಕೀಯ ಕ್ಷೇತ್ರ ಪರಿಚಯಿಸಿ ಲೋಕಸಭೆಗೆ ಕಳುಹಿಸಿಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದವರು ಎಂದು ಹೇಳಿದರು.
ಇಂತಹ ವರ್ಚಸ್ಸಿನ ಕುಟುಂಬದಿಂದ ಬಂದಿರುವ ಚಿದಂಬರ್ ಅವರಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸಿಕೊಂಡಿದ್ದಾರೆ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಪಕ್ಷದ ಅಭ್ಯರ್ಥಿಗಳ ಗೆಲುವಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ  ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ನಗರಸಭೆ ಸದಸ್ಯರಾದ ಮಹೇಶ್, ಅನಂತಪದ್ಮನಾಭ, ಯುವ ಮುಖಂಡರಾದ ಚಂದ್ರಶೇಖರ್, ಶಶಿಕುಮಾರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments