ಮಂಡ್ಯ

ಎಸ್‌ಎಸ್‌ಎಲ್‌ಸಿಗೆ 3378 ಮಂದಿ

ಕೆ.ಆರ್.ಪೇಟೆ: ಏ.1ರಿಂದ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತಾಲೂಕಿನಿಂದ ಒಟ್ಟು 3378 ಮಕ್ಕಳು ಪರೀಕ್ಷೆ ಬರೆಯಲಿದ್ದಾರೆ ಎಂದು ಕ್ಷೇತ್ರ ಶಿಕ್ಷಾಣಾಧಿಕಾರಿ ಎ.ಬಿ. ಪುಟ್ಟಸ್ವಾಮಿಗೌಡ ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ಒಟ್ಟು 11ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಒಟ್ಟು ವಿದ್ಯಾರ್ಥಿಗಳ ಪೈಕಿ 1771 ಹೆಣ್ಣು ಮಕ್ಕಳು, 1667ಮಂದಿ ಗಂಡು ಮಕ್ಕಳು ಪರೀಕ್ಷೆ ಬರೆಯಲಿದ್ದಾರೆ ಎಂದರು. ಪಟ್ಟಣದಲ್ಲಿ ಮೂರು, ಕಿಕ್ಕೇರಿಲ್ಲಿ ಎರಡು, ಸಂತೇಬಾಚಹಳ್ಳಿ, ಬೂಕನಕೆರೆ, ಅಕ್ಕಿಹೆಬ್ಬಾಳು, ಶೀಳನೆರೆ, ಗಂಜಿಗೆರೆ, ಹೇಮಗಿರಿಗಳಲ್ಲಿ ತಲಾ ಒಂದೊಂದು ಪರೀಕ್ಷಾ ಕೇಂದ್ರಗಳಲ್ಲಿ ತೆರೆಯಲಾಗಿದೆ.  ನಕಲು ತಡೆಯಲು ಜಾಗೃತ ಮತ್ತು  ತಪಾಸಣಾ ದಳಗಳನ್ನು ರಚಿಸಲಾಗಿದೆ ಎಂದರು. ಪರೀಕ್ಷೆ ನಡೆಯುವ ಸಮೀಪದ ಎಲ್ಲಾ ಜೆರಾಕ್ಸ್ ಅಂಗಡಿಗಳನ್ನು ತೆರೆಯದಂತೆ ನಿರ್ಬಂಧಿಸಲಾಗಿದೆ. ಮುಕ್ತ ಸುವ್ಯವಸ್ಥಿತ ಪರೀಕ್ಷೆ ನಡೆಸುವ ದೃಷ್ಟಿಯಿಂದ ವಿಡಿಯೋ ಚಿತ್ರೀಕರಣ ಮಾಡಲಾಗುವುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!

SIR ವಿರುದ್ಧ ಪ್ರತಿಭಟನೆ ಮುಂದುವರೆಸುತ್ತೆವೆ: ರಾಜಕೀಯ, ಜನಸಾಮಾನ್ಯರ ಪ್ರತಿರೋಧಕ್ಕೇ ಜಯ': ರಾಹುಲ್ ಗಾಂಧಿ

‘ಸಿದ್ದರಾಮಯ್ಯಗೆ CD ತೋರಿಸಿ ರಾಜೀನಾಮೆ ಪಡೆದಿದ್ದಾರೆ’: ಯತ್ನಾಳ್​ ಸ್ಫೋಟಕ ಆರೋಪ

ಹನಿಟ್ರ್ಯಾಪ್ ಭೀತಿಯಲ್ಲಿದ್ದ ಸಿದ್ದರಾಮಯ್ಯಗೆ ಬಿಗ್ ರಿಲೀಫ್: ಮಾಧ್ಯಮಗಳಿಗೆ ವಿಡಿಯೋ ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸಿದ ಕೋರ್ಟ್

ಅವಧಿಗೂ ಮುನ್ನವೇ ಕೇಂದ್ರ ಸಚಿವ ಮತ್ತು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ BJP ನಾಯಕ ಮುರುಗನ್ ರಾಜಿನಾಮೆ: PM ಮೋದಿಗೆ 5 ಪುಟಗಳ ಪತ್ರ!