ಮಂಡ್ಯ

ಏ.6ರವರೆಗೆ ವಿವಿಧ ಜಾಗೃತಿ ಕಾರ್ಯಕ್ರಮ: ಡಿಸಿ ವಿವರಣೆ

ಕನ್ನಡಪ್ರಭ ವಾರ್ತೆ ಮಂಡ್ಯ ಮಾ.29
ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಹಾಗೂ ಪರಿಷ್ಕರಣೆ ನಡೆಸಲು ಏ.7 ರವರೆಗೆ ಅವಕಾಶವಿದೆ. ಈ ಹಿನ್ನೆಲೆಯಲ್ಲಿ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಎಂ.ಎನ್.ಅಜಯ ನಾಗಭೂಷಣ ಶುಕ್ರವಾರ ತಿಳಿಸಿದರು.
ಮುಖ್ಯ ಚುನಾವಣಾಧಿಕಾರಿ ನಡೆಸಿದ ವೀಡೀಯೋ ಸಂವಾದ ಕಾರ್ಯಕ್ರಮದ ನಂತರ ಮತದಾರರಿಗೆ ವ್ಯವಸ್ಥಿತ ಶಿಕ್ಷಣ ಹಾಗೂ ಮತದಾರರ ಸಹಭಾಗಿತ್ವ (ಸ್ವೀಪ್) ಸಮಿತಿಯ ಸಭೆ ನಡೆಸಿದ ಅವರು, ಏ.6 ವರೆಗೆ ವಿವಿಧ ಜಾಗೃತಿ ಕಾರ್ಯಕ್ರಮಗಳು, ಜಾಥಾ, ಕಾರ್ಮಿಕರು ಹಾಗೂ ಮಹಿಳೆ ಸಂಘಗಳ ಸಭೆಯಗಳನ್ನು ವಿವಿಧ ಹಂತಗಳಲ್ಲಿ ಆಯೋಜಿಸಬೇಕು ಎಂದರು.
ತಾಲೂಕಿನ ತೂಬಿನಕೆರೆ, ಮದ್ದೂರಿನ ಸೋಮನಹಳ್ಳಿ ಮುಂತಾದ ಕೈಗಾರಿಕಾ ಪ್ರದೇಶಗಳಲ್ಲಿ ಉದ್ದಿಮೆಗಳ ಮಾನವ ಸಂಪನ್ಮೂಲ ಅಧಿಕಾರಿಗಳ ಸಭೆ ಕರೆದು, ಎಲ್ಲಾ ಕಾರ್ಮಿಕರು, ನೌಕರರು ಹೆಸರು ನೋಂದಾಯಿಸುವಂತೆ ಹಾಗೂ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ತಿಳಿಸಬೇಕು ಎಂದು ಜಿಲ್ಲಾ ಕೈಗಾರಿಕಾ ಜಂಟಿ ನಿರ್ದೇಶಕರಿಗೆ ತಿಳಿಸಿದರು.
ಮಹಿಳಾ ಸ್ವಸಹಾಯ ಗುಂಪುಗಳು ಸಾರ್ವಜನಿಕ ಚಟುವಟಿಕೆಯಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ ಹೋಬಳಿ ಮಟ್ಟದಲ್ಲಿ ಮಹಿಳಾ ಸಂಘಗಳ ಸಭೆ ನಡೆಸಿ ಜಾಗೃತಿ ಮೂಡಿಸಬೇಕು. ಮತದಾನದಿಂದ ಯಾರೂ ವಂಚಿತರಾಗಬಾರದು ಎಂದು ಹೇಳಿದರು.
ಮತದಾರರಿಗೆ ವ್ಯವಸ್ಥಿತ ಶಿಕ್ಷಣ ಹಾಗೂ ಮತದಾರರ ಸಹಭಾಗಿತ್ವ (ಎಸ್‌ವಿಇಇಪಿ) ಆಂದೋಲನದಲ್ಲಿ ಅಧಿಕಾರಿಗಳು ಸಕ್ರಿಯವಾಗಿ ಪಾಲ್ಗೊಂಡು 18 ವರ್ಷದ ಸಾರ್ವಜನಿಕರಿಗೆ ಮತದಾನದ ಮಹತ್ವದ ಬಗ್ಗೆ ಅರಿವು ಮೂಡಿಸಬೇಕು ಎಂದರು.
ಪ್ರಥಮ ದರ್ಜೆ ಕಾಲೇಜು, ತಾಂತ್ರಿಕ ಹಾಗೂ ವೈದ್ಯಕೀಯ ಮಹಾವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕು. ಮತದಾನ ಉತ್ತಮ ನಾಯಕರನ್ನು ಆಯ್ಕೆ ಮಾಡುವ ಪ್ರಕ್ರಿಯೆ ಇದರಲ್ಲಿ ಜಿಲ್ಲೆಯ ಎಲ್ಲಾ ಪ್ರಜೆಗಳು ಪಾಲ್ಗೊಳ್ಳಬೇಕು. ಸಾರ್ವಜನಿಕರಿಗೆ ಮಾಹಿತಿ ನೀಡಲು ವ್ಯವಸ್ಥಿತ ರೂಪದಲ್ಲಿ ಯೋಜನೆ ರೂಪಿಸಿಕೊಳ್ಳುವಂತೆ ತಿಳಿಸಿದರು.
ವೀಡಿಯೋ ಸಂವಾದ ನಡೆಸಿಕೊಟ್ಟ ಮುಖ್ಯ ಚುನಾವಣಾಧಿಕಾರಿ ಅನಿಲಕುಮಾರ್ ಹಾಗೂ ಜಂಟಿ ಚುನಾವಣಾಧಿಕಾರಿ ಪಂಕಜಕುಮಾರ್ ಪಾಂಡೆ ಅವರು ಮತದಾರರ ಪಟ್ಟಿ ಪರಿಷ್ಕರಣೆ, ಬಸ್ ನಿಲ್ದಾಣ, ರೇಲ್ವೆ ನಿಲ್ದಾಣ, ಮುಂತಾದ ಜನಸಂದಣಿ ಇರುವ ಪ್ರದೇಶಗಳಲ್ಲಿ ಪ್ರಚಾರಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ವಿವರಿಸಿದರು.
ವೀಡಿಯೋ ಸಂವಾದದಲ್ಲಿ ಜಿಲ್ಲಾಮಟ್ಟದ ಸ್ವೀಪ್ ಸಮಿತಿ ಅಧ್ಯಕ್ಷರೂ ಆದ ಜಿಪಂ ಸಿಇಓ ಪಿ.ಸಿ. ಜಯಣ್ಣ, ಸಮಿತಿ ನೋಡಲ್ ಅಧಿಕಾರಿ ಆರ್.ರಾಜು, ಐಎಎಸ್ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ, ಉಪ ವಿಭಾಗಾಧಿಕಾರಿಗಳಾದ ಆರ್.ಲತಾ, ಎಂ.ಎಸ್.ಎನ್. ಬಾಬು, ಸಮಿತಿ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್

ಶಕ್ತಿ, ಜ್ಞಾನ, ಸಂಸ್ಕೃತಿ, ಸಮಾನತೆಯ ಸಂಗಮ ಮೈಸೂರು ದಸರಾ: ಸಿಎಂ ಡಿಕೆ ಶಿವಕುಮಾರ್