ಮಂಡ್ಯ

ಅಕ್ರಮ ಮರಳು ತಡೆಗೆ ಆಗ್ರಹಿಸಿ ಪ್ರತಿಭಟನೆ

ಕ.ಪ್ರ.ವಾರ್ತೆ ್ಣ ಮಂಡ್ಯ ್ಣ ಮಾ.30
ಹೇಮಾವತಿ ನದಿಯಲ್ಲಿ ನಡೆಯುತ್ತಿರುವ ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿ ಕೆ.ಆರ್.ಪೇಟೆ ತಾಲೂಕಿನ ಸೋಮನಾಥಪುರ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಪ್ರತಿಭಟನಾ ಧರಣಿ ನಡೆಸಿದರು.
ಕೆ.ಆರ್.ಪೇಟೆ ತಾಲೂಕಿನ ಸೋಮನಹಳ್ಳಿ, ಬಸವನಹಳ್ಳಿ ಹಾಗೂ ಕೂಡಲಕುಪ್ಪೆ ಪ್ರದೇಶ ವ್ಯಾಪ್ತಿಯ ಹೇಮಾವತಿ ನದಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದ್ದರೂ ತಾಲೂಕು ಆಡಳಿತ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.
ಸೋಮನಾಥಪುರ ಗ್ರಾಮದ ದಿನೇಶ್, ಸುರೇಶ್, ನೇತ್ರಪಾಲ, ಬಸವನಹಳ್ಳಿಯ ಗೋಪಾಲ, ಅಭಿ ಎಂಬುವವರು ಮರಳು ದಂಧೆಯಲ್ಲಿ ತೊಡಗಿದ್ದಾರೆ. ಇದರಿಂದ ತೀವ್ರ ಸಮಸ್ಯೆ ಉಂಟಾಗಿದೆ.
ಈ ಬಗ್ಗೆ ಪ್ರಶ್ನಿಸಿದವರ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಿದರು.
ನಂತರ ಜಿಲ್ಲಾ ಎಸ್ಪಿ ಭೂಷಣ್ ಜಿ.ಬೊರಸೆ ಅವರಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು ದೂರವಾಣಿ ಮೂಲಕ ಕೆ.ಆರ್.ಪೇಟೆ ಅಧಿಕಾರಿಗಳನ್ನು ಭೇಟಿ ಮಾಡಿ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ ನಂತರ ಪ್ರತಿಭಟನಾಕಾರರು ಧರಣಿ ಕೈ ಬಿಟ್ಟರು.
ಎಸ್. ಪಿ. ನಂಜಪ್ಪ, ಎಸ್. ಬಿ. ಕುಮಾರ್, ಮಲ್ಲೇಶ್, ಮಹಾಲಿಂಗಪ್ಪ ಸೇರಿದಂತೆ ಹಲವರು ಪ್ರತಿಭಟನೆ  ನೇತೃತ್ವ ವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ; ನವನೇತಮ್ ನವಿ ಪಿಳ್ಳೈಗೆ ಒಲಿದ ನೊಬೆಲ್ ಶಾಂತಿ ಗರಿ

Ramayana: ಕೊನೆಗೂ 'ರಾಮಾಯಣ' ರಿಲೀಸ್ ಡೇಟ್ ಫಿಕ್ಸ್; ದೀಪಾವಳಿಗೂ ಮೊದಲೇ ಬಿಡುಗಡೆ

ಯಮನಿಗೇ ಚಳ್ಳೇಹಣ್ಣು: ಗುದ್ದಿದ ಲಾರಿಯನ್ನೇ ಹಿಡಿದು ಪ್ರಾಣ ಉಳಿಸಿಕೊಂಡ ಯುವತಿ!-ರೋಚಕ Video