ಮಂಡ್ಯ

ಹೊರೆ ಇಳಿಸಲು ಕಲ್ಪನಾ ಸಿದ್ದರಾಜು ನಿರ್ಧಾರ

ಕ.ಪ್ರ.ವಾರ್ತೆ ್ಣ ಮಂಡ್ಯ ್ಣ ಮಾ.30
ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಟಿಕೆಟ್ ವಂಚಿತರಾಗಿರುವ ಶಾಸಕಿ ಕಲ್ಪನಾ ಸಿದ್ದರಾಜು ಜೆಡಿಎಸ್ ತೊರೆಯುವ ನಿರ್ಧಾರಕ್ಕೆ ಬಂದಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕ ಎಸ್.ಎಂ.ಕೃಷ್ಣ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬೆನ್ನ ಹಿಂದೆಯೇ ಶಾಸಕಿ ಕಲ್ಪನಾ ಸಿದ್ದರಾಜು, ಜೆಡಿಎಸ್ ಪಕ್ಷ ತೊರೆಯುವ ನಿರ್ಧಾರವನ್ನು 'ಕನ್ನಡಪ್ರಭ'ಕ್ಕೆ ಖಚಿತ ಪಡಿಸಿದರು.
ಚುನಾವಣೆಯಲ್ಲಿ ಮದ್ದೂರು ಕ್ಷೇತ್ರದಿಂದ ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಆದರೆ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಟಿಕೆಟ್ ನೀಡುವುದಿಲ್ಲವೆಂದು ಬಹಿರಂಗವಾಗಿ ಹೇಳಿದ್ದು, ನನಗೆ ಮತ್ತು ನನ್ನ ಬೆಂಬಲಿಗರಿಗೆ ತೀವ್ರ ನೋವುಂಟು ಮಾಡಿತು. ಟಿಕೆಟ್ ನಿರಾಕರಣೆಯೇ ಪಕ್ಷ ತೊರೆಯಲು ಕಾರಣ ಎಂದು ಹೇಳಿದರು.
ಜೆಡಿಎಸ್ ವರಿಷ್ಠರಾದ ದೇವೇಗೌಡರು ಮತ್ತು ಕುಮಾರಸ್ವಾಮಿ ಮೊದಲಿನಿಂದಲೂ ನನಗೇ ಟಿಕೆಟ್ ನೀಡುವ ಭರವಸೆ ನೀಡಿದ್ದರು. ಅಂತಿಮ ಗಳಿಗೆಯಲ್ಲಿ ತಮ್ಮಣ್ಣ ಅವರನ್ನು ಜೆಡಿಎಸ್ ಸೇರಿಸಿಕೊಂಡಿದ್ದು, ಅಲ್ಲದೆ ಅವರಿಗೆಯೇ ಟಿಕೆಟ್ ನೀಡುವ ನಿರ್ಧಾರ ಮಾಡಿದ್ದು ಮನಸ್ಸಿಗೆ ನೋವುಂಟು ಮಾಡಿತು ಎಂದರು.
ಚುನಾವಣೆಯಲ್ಲಿ ಜೆಡಿಎಸ್ ಟಿಕೆಟ್ ಕೈತಪ್ಪಿದರೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಬೆಂಬಲಿಗರು ಒತ್ತಾಯಿಸಿದ್ದರು. ಇದೀಗ ಕಾಂಗ್ರೆಸ್ ನಾಯಕ ಕೃಷ್ಣ ಅವರ ಭೇಟಿ ನಂತರ ಟಿಕೆಟ್ ಸಿಗುವ ಭರವಸೆ ಸಿಕ್ಕಿದೆ. ಅಲ್ಲದೆ ಸ್ಥಳೀಯ ಕಾಂಗ್ರೆಸ್ ಮುಖಂಡರು ಸಹಮತ ವ್ಯಕ್ತಪಡಿಸಿದ್ದಾರೆ. ಹೀಗಾಗಿಯೇ ಜೆಡಿಎಸ್‌ನಿಂದ ಹೊರ ಬರುತ್ತಿದ್ದೇನೆ ಎಂದು ತಿಳಿಸಿದರು.
ಟಿಕೆಟ್ ನೀಡುವ ಅಥವಾ ಪಕ್ಷದಲ್ಲಿ ಉಳಿಸಿಕೊಳ್ಳುವ ನಿಟ್ಟಿನಲ್ಲಿ ದೇವೇಗೌಡರಾಗಲಿ ಅಥವಾ ಕುಮಾರಸ್ವಾಮಿ ಅವರಾಗಲಿ ನನ್ನನ್ನು ಭೇಟಿ ಮಾಡಿಲ್ಲ. ನಾನೂ ಪಕ್ಷ ತೊರೆಯುವ ವಿಷಯವನ್ನು ತಿಳಿಸಿಲ್ಲ. ಬೆಂಬಲಿಗರೆಲ್ಲರೂ ಪಕ್ಷ ತೊರೆಯುವ ನಿರ್ಧಾರ ಮಾಡಿರುವುದರಿಂದ ನಾನೂ ಅವರೊಂದಿಗೆ ಹೋಗುತ್ತಿದ್ದೇನೆ ಎಂದು ಕಲ್ಪನಾ ಹೇಳಿದರು.
ಸ್ಪೀಕರ್‌ಗೆ ರಾಜಿನಾಮೆ: ಶಾಸಕ ಸ್ಥಾನಕ್ಕೆ ಸೋಮವಾರ ರಾಜಿನಾಮೆ ನೀಡುತ್ತಿದ್ದೇನೆ. ಸ್ಪೀಕರ್ ಬೋಪಯ್ಯ ಅವರು ಮಡಿಕೇರಿಯಲ್ಲಿ ಉಳಿದುಕೊಂಡಿರುವ ಕಾರಣ ಸ್ಪೀಕರ್ ಕಚೇರಿಗೆ ತೆರಳಿ ಸೋಮವಾರ ರಾಜಿನಾಮೆ ನೀಡುತ್ತಿದ್ದೇನೆ ಎಂದರು.
ಮುಂದಿನ ನಾಲ್ಕೈದು ದಿನಗಳಲ್ಲಿ ಮದ್ದೂರು ಪಟ್ಟಣದಲ್ಲಿ ಬೆಂಬಲಿಗರ ಸಭೆ ಕರೆದು ಜೆಡಿಎಸ್ ತೊರೆಯುವ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇನೆ. ಆನಂತರ ಮುಂದಿನ ರಾಜಕೀಯ ನಿರ್ಧಾರ ಪ್ರಕಟಿಸುತ್ತೇನೆ. ಜೆಡಿಎಸ್ ತೊರೆಯುವ ತಮ್ಮ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಕಲ್ಪನಾ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್