ಕೆ.ಆರ್.ಪೇಟೆ : ಯುವಕನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಬಂಡಿಹೊಳೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಬಂಡಿಹೊಳೆ ಗ್ರಾಮದ ಎಳನೀರು ವ್ಯಾಪಾರಿ ಮಂಜುನಾಥ ಮೃತರು. ಸಾಲದ ಬಾಧೆ ತಾಳಲಾರದೇ ಗ್ರಾಮದ ಸಮೀಪದ ಆಲದ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆದರೆ, ಸಾವಿನ ಬಗ್ಗೆ ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.