ಮಂಡ್ಯ: ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆ.9 ರಂದು ತಾಲೂಕು ಉಪನ್ಯಾಸಕರ ಸಂಘದ ಉದ್ಘಾಟನೆ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಲಿದೆ. ಕರ್ನಾಟಕ ರಾಜ್ಯ ಪದವಿಪೂರ್ರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಜಿಲ್ಲಾ ಘಟಕದ ವತಿಯಿಂದ ನಡೆಯುವ ಸಮಾರಂಭವನ್ನು ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಉದ್ಘಾಟಿಸುವರು. ಕಳೆದ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿವಿಧ ವಿಭಾಗಗಳ ವಿವಿಧ ತಾಲೂಕುಗಳ ವಿದ್ಯಾರ್ಥಿಗಳಿಗೆ ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ. ಶ್ರೀಕಂಠೇಗೌಡ ಪ್ರತಿಭಾ ಪುರಸ್ಕಾರ ನೀಡುವರು. ಸಮಾರಂಭದಲ್ಲಿ ಪ.ಪೂ.ಶಿಕ್ಷಣ ಇಲಾಖೆಯ ಪ್ರಭಾರಿ ಉಪನಿರ್ದೇಶಕ ಪುಟ್ಟಲಿಂಗಯ್ಯ ಅಧ್ಯಕ್ಷತೆ ವಹಿಸುವರು. ಉಪನ್ಯಾಸಕರ ರಾಜ್ಯ ಸಂಘದ ಅಧ್ಯಕ್ಷ ತಿಮ್ಮಯ್ಯ, ಕಾರ್ಯದರ್ಶಿ ಎ.ಎಚ್. ನಿಂಗೇಗೌಡ, ಖಜಾಂಚಿ ಜಯಣ್ಣ, ಮಂಡ್ಯ ಜಿಲ್ಲಾ ಪ.ಪೂ.ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಕೆ.ಜೆ. ಶಂಕರೇಗೌಡ, ಸಂಘದ ಗೌರವಾಧ್ಯಕ್ಷ ವಿ.ಕೆ.ಜಗದೀಶ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.