ಮಂಡ್ಯ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯ 2013-14ನೇ ಸಾಲಿನ ಆಧುನಿಕ ಹೈನುಗಾರಿಕೆ ಅನುಸರಿಸಲು ರೈತರಿಗೆ ಸಹಾಯ ಯೋಜನೆ ಅನುಷ್ಠಾನಗೊಳಿಸಲು ಇಬ್ಬರು ಅರ್ಹ ಫಲಾನುಭವಿಗಳ ಆಯ್ಕೆ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಫಲಾನುಭವಿಯು ಕನಿಷ್ಠ 5 ರಾಸು ಹೊಂದಿರಬೇಕು ಹಾಗೂ ಕೊಟ್ಟಿಗೆ ನಿರ್ಮಾಣಕ್ಕೆ ಸೂಕ್ತ ಜಾಗ ಲಭ್ಯತೆ ಇರಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮಹಿಳೆಯರಿಗೆ, ಅಂಗವಿಕಲರಿಗೆ ಇತರರಿಗೆ ನಿಯಮಾನುಸಾರ ಆದ್ಯತೆ ನೀಡಲಾಗುವುದು. ಮಾಹಿತಿಗೆ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.