ಮಂಡ್ಯ

ಕಾರ್ಗಿಲ್ ವಿಜಯ ದಿವಸ ಆಚರಣೆ

ಮದ್ದೂರು: ಬಿಜೆಪಿ ಮತ್ತು ಸಂಘ ಪರಿವಾರ ಹೊರತುಪಡಿಸಿ ಅನ್ಯ ರಾಜಕೀಯ ಪಕ್ಷಗಳಲ್ಲಿ ದೇಶಭಕ್ತಿ ಕೆಚ್ಚು ನಶಿಸಿಹೋಗಿದೆ ಎಂದು ಬಿಜೆಪಿ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ಚಲಪತಿ  ಹೇಳಿದರು.
ಪಟ್ಟಣದ ನರಸಿಂಹಸ್ವಾಮಿ ದೇವಾಲಯದ ಅವರಣದಲ್ಲಿ ಬಿಜೆಪಿ ಜಿಲ್ಲಾ ಯುವ ಮೋರ್ಚಾ ವತಿಯಿಂದ ನಡೆದ ಕಾರ್ಗಿಲ್ ವಿಜಯ ದಿವಸ ಹಾಗೂ ಗೊರಾಟ ನಿಧಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ದೇಶಭಕ್ತಿ ಎಂಬುದು ಕಾಂಗ್ರೆಸ್, ಜೆಡಿಎಸ್ ಹಾಗೂ ರೈತ ಸಂಘದಲ್ಲಿ ಇಲ್ಲವಾಗಿದೆ. ಈ ಎಲ್ಲಾ ರಾಜಕೀಯ ಪಕ್ಷಗಳು ಕೇವಲ ಅಧಿಕಾರ ವ್ಯಾಮೋಹದೊಂದಿಗೆ ಹಣ ಮಾಡುವ ಪ್ರವೃತ್ತಿಗಳನ್ನು ಹೊಂದಿವೆ. ಆದರೆ ಇಂತಹ ಅಪವಾದಕ್ಕೆ ಹೊರತಾಗಿರುವ ಬಿಜೆಪಿ ಹಾಗೂ ಸಂಘ ಪರಿವಾರದಲ್ಲಿ ಮಾತ್ರ ದೇಶ ಭಕ್ತಿ ಅಪಾರವಾಗಿದೆ ಎಂದರು.
ಎನ್‌ಡಿಎ ಸರ್ಕಾರದಲ್ಲಿ ಪ್ರಧಾನಿಯಾಗಿದ್ದ ವಾಜಪೇಯಿ ಅಧಿಕಾರವಧಿಯಲ್ಲಿ ನಡೆದ ಕಾರ್ಗಿಲ್ ಯುದ್ಧದಲ್ಲಿ ಭಾರತ ಜಯಗೊಳಿಸಲು ಸಾಧ್ಯವಾಯಿತು. ತದನಂತರ ಅಧಿಕಾರಕ್ಕೆ ಬಂದ ಯುಪಿಎ ಸರ್ಕಾರ ಕಾರ್ಗಿಲ್ ವಿಜಯದ ದಿನಕ್ಕೆ ಯಾವುದೇ ಪ್ರಾಮುಖ್ಯತೆ ನೀಡಿಲ್ಲ ಎಂದು ಆರೋಪಿಸಿದರು.
ಭಾರತದ 500 ಕ್ಕೂ ಮೀರಿ ಸೈನಿಕರು ಮತ್ತು ಸೇನಾಧಿಕಾರಿಗಳ ಬಲಿದಾನ, ಶೌರ್ಯ, ಸಾಹಸಗಳಿಂದ ಯುದ್ಧದಲ್ಲಿ ನಮ್ಮ ದೇಶಕ್ಕೆ ಜಯದೊರಕಲು ಸಾಧ್ಯವಾಗಿದೆ. ಇಂತಹ ಸಂದರ್ಭದಲ್ಲಿ ಕಾರ್ಗಿಲ್ ವಿಜಯ ದಿವಸವನ್ನು ರಾಜಕೀಯ ಪಕ್ಷಗಳು ನಿರ್ಲಕ್ಷ ಮಾಡುತ್ತಿರುವುದು ದೊಡ್ಡ ದುರಂತ ಎಂದರು.ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ರವಿ ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರೀಯ ಪರಿಷತ್ ಸದಸ್ಯರಾದ ಕೆ.ಬಲರಾಮು, ಕೆ.ಎಂ.ರಮೇಶ್, ಭಜರಂಗ ದಳದ ರಾಜ್ಯ ಸಂಚಾಲಕ್ ಮಂಜುನಾಥ್, ಬಿಜೆಪಿ ಜಿಲ್ಲಾಧ್ಯಕ್ಷ ಹೊನ್ನಪ್ಪ ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಶತ್ರುತ್ವ ತೀವ್ರ ಕಳವಳಕಾರಿ: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತ ಅಸಮಾಧಾನ..!

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

729 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ

ಕಬ್ಬು ಬೆಳೆಗಾರರೇ ತಾಳ್ಮೆಯಿಂದಿರಿ, ಸಮಸ್ಯೆ ಬಗೆಹರಿಸುವೆ: ಸಿಎಂ ಡಿಕೆ ಶಿವಕುಮಾರ್ ಭರವಸೆ

ಕರಾವಳಿಯಿಲ್ಲದೆ ಕರ್ನಾಟಕವಿಲ್ಲ, ಮಂಗಳೂರು ನಮ್ಮ ರಾಜ್ಯ ಹೆಮ್ಮೆ: ಸಿಎಂ ಡಿಕೆ ಶಿವಕುಮಾರ್