ಮಂಡ್ಯ

ಸವಿತಾ ಸಮಾಜದ ನಿರಂತರ ಶೋಷಣೆ

ನಾಗಮಂಗಲ: ಸವಿತಾ ಸಮಾಜದ ಮೇಲೆ ನಡೆಯುತ್ತಿರುವ ನಿರಂತರ ಶೋಷಣೆ, ಅಸ್ಪೃಶ್ಯತೆಯನ್ನು ತಪ್ಪಿಸಲು ವಿಶೇಷ ಕಾನೂನು ಜಾರಿಯಾಗಬೇಕಿದೆ ಎಂದು ಅಖಿಲ ಕರ್ನಾಟಕ ಸವಿತಾ ಮಹಾಮಂಡಲ ಉಪಾಧ್ಯಕ್ಷ ಸೋಮಶೇಖರ್ ಭಂಡಾರಿ ಅಭಿಪ್ರಾಯಟ್ಟರು.
ಪಟ್ಟಣದ ತ್ಯಾಗರಾಜ ವೃತ್ತದ ಸಮುದಾಯ ಭವನದಲ್ಲಿ ತಾಲೂಕು ಸವಿತಾ ಸಮಾಜ ಆಯೋಜಿಸಿದ್ದ ಸಂಘಟನಾ ಸಭೆಯಲ್ಲಿ ಮಾತನಾಡಿದ ಅವರು, ಸವಿತಾ ಸಮಾಜದ ವೃತ್ತಿಯನ್ನು ಕೆಲಬಂಡವಾಳ ಶಾಹಿಗಳು ಮಾಡುತ್ತಿರುವುದು ಸಮುದಾಯಕ್ಕೆ ಎಸಗುತ್ತಿರುವ ದ್ರೋಹವಾಗಿದೆ. ಸಮುದಾಯದಲ್ಲಿರುವ ಶಿಕ್ಷಣ ಮತ್ತು ಸಂಘಟನಾ ಶಕ್ತಿಯ ಕೊರತೆಯೇ ಇದಕ್ಕೆ ಮೂಲ ಕಾರಣವಾಗಿದೆ. ಸಮಾಜದ ಪ್ರತಿಯೊಬ್ಬರೂ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣದ ಶಕ್ತಿ ಕೊಡಿಸಿ, ಅವರಿಗೆ ಸೂಕ್ತ ತರಬೇತಿ ಕೊಡಿಸುವ ಮೂಲಕ ಶತಮಾನಗಳಿಂದ ಮಾಡಿಕೊಂಡು ಬರುತ್ತಿರುವ ವೃತ್ತಿಯನ್ನು ಮೇಲ್ದರ್ಜೆಗೇರಿಸಿಕೊಳ್ಳಬೇಕು ಎಂದರು.
ಪ್ರತಿಯೊಂದು ಸಮುದಾಯವನ್ನೂ ಅತ್ಯಂತ ಪ್ರೀತಿ ವಿಶ್ವಾಸದಿಂದ ಕಾಣುತ್ತಿರುವ ಸವಿತಾ ಸಮಾಜದವರು ನಿರಂತರ ದೌರ್ಜನ್ಯ, ಸಮಾಜಿಕ ಅಸ್ಪೃಶ್ಯತೆಯಂತಹ ಅಮಾನವೀಯತೆಯನ್ನು ಎದುರಿಸುವಂತಾಗಿದೆ. ಎಲ್ಲಾ ಕ್ಷೇತ್ರದಲ್ಲಿಯೂ ಸಮುದಾಯದ ಮೇಲೆ ಶೋಷಣೆ ನಡೆಯುತ್ತಿದೆ. ಜನಾಂಗದ ಪರವಾಗಿ ದನಿಎತ್ತುವ ಜನಪ್ರತಿನಿಧಿಗಳ ಕೊರತೆಯಿಂದ ಸರ್ಕಾರದ ಮೀಸಲು ಸೌಲಭ್ಯ ವಂಚನೆಯಾಗುತ್ತಿದೆ ಎಂದರು.
ತಕ್ಷಣ ಜಾರಿಗೆ ಬರಲಿ:  ಗ್ರಾಮೀಣ ಪ್ರದೇಶದಲ್ಲಿ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳ ಸಮೀಕ್ಷೆ ನಡೆಸಿ ಡಾ.ಸಿ.ಎಸ್. ದ್ವಾರಕಾನಾಥ್ ಸಲ್ಲಿಸಿರುವ ವರದಿಯನ್ನು ತಕ್ಷಣ ಜಾರಿಗೊಳಿಸಬೇಕು. ಸಮುದಾಯವನ್ನು ಆರ್ಥಿಕವಾಗಿ ಮೇಲೆತ್ತುವ ಸಲುವಾಗಿ ಕಡಿಮೆ ಬಡ್ಡಿದರದಲ್ಲಿ ರು. 5ಲಕ್ಷ ವರೆಗೆ ಸಾಲಸೌಲಭ್ಯ ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
ಜಾರಿಯಾಗಲಿ: ಕ್ಷೌರಿಕರನ್ನು ನಿಂದಿಸುವವರ ವಿರುದ್ಧ ಜಾತಿನಿಂದನೆ ಪ್ರಕರಣ ದಾಖಲಿಸುವಂತಹ ಕಠಿಣ ಕಾನೂನು ಜಾರಿಯಾಗಬೇಕು. ನಗರ ವ್ಯಾಪ್ತಿಯಲ್ಲಿ ಸ್ಥಳೀಯ ಸಂಸ್ಥೆಗಳು ನಿರ್ಮಿಸುವ ವಾಣಿಜ್ಯ ಕಟ್ಟಡಗಳಲ್ಲಿ ಕ್ಷೌರ ಮಾಡುವ ಸಮುದಾಯಕ್ಕೆ ಅಂಗಡಿಗಳನ್ನು ಮೀಸಲಿರಿಸಬೇಕು. ಸಮುದಾಯಕ್ಕೆ ಸಂಘಟನಾ ಶಕ್ತಿ ತುಂಬುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಜಾಗೃತಿ ಮೂಡಿಸಿ ಬೃಹತ್ ಸಮಾವೇಶ ಆಯೋಜಿಸಲಾಗುವುದು ಎಂದು ಹೇಳಿದರು.
ಮಹಾಮಂಡಲದ ರಾಜ್ಯಾಧ್ಯಕ್ಷ ಟಿ.ವೆಂಕಟೇಶ್, ಸಂಘಟನಾ ಕಾರ್ಯದರ್ಶಿ ಎ.ಆರ್. ರಾಮಯ್ಯ, ಗೌರವ ಅಧ್ಯಕ್ಷ ಕಂಚಿವರದರಾಜು, ಚಿಕ್ಕಮಗಳೂರು ಜಿಲ್ಲಾ ಘಟಕದ ಅಧ್ಯಕ್ಷ ವಿ.ಪಿ.ನಾರಾಯಣ್, ಕೃಷ್ಣಮೂರ್ತಿ, ತಾಲೂಕು ಘಟಕದ ಅಧ್ಯಕ್ಷ ರವಿಕುಮಾರ್, ಕಾರ್ಯದರ್ಶಿ ಮುಕುಂದರಾಜ್ ಹಾಜರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಶತ್ರುತ್ವ ತೀವ್ರ ಕಳವಳಕಾರಿ: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತ ಅಸಮಾಧಾನ..!

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

729 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ

ಕಬ್ಬು ಬೆಳೆಗಾರರೇ ತಾಳ್ಮೆಯಿಂದಿರಿ, ಸಮಸ್ಯೆ ಬಗೆಹರಿಸುವೆ: ಸಿಎಂ ಡಿಕೆ ಶಿವಕುಮಾರ್ ಭರವಸೆ

ಕರಾವಳಿಯಿಲ್ಲದೆ ಕರ್ನಾಟಕವಿಲ್ಲ, ಮಂಗಳೂರು ನಮ್ಮ ರಾಜ್ಯ ಹೆಮ್ಮೆ: ಸಿಎಂ ಡಿಕೆ ಶಿವಕುಮಾರ್