ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಇಂದು ಕೋಟೆ ತಾಲೂಕು ಶಾಲೆಗಳಿಗೆ ರಜೆ

Srinivasa Murthy VN
Updated On : 2 Aug 2013, 12:11 pm

ಎಚ್.ಡಿ. ಕೋಟೆ: ತಾಲೂಕಿನಲ್ಲಿ ಎರಡು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ತಹಸೀಲ್ದಾರ್ ತಾಲೂಕಿನ ಎಲ್ಲ ಶಾಲೆಗಳಿಗೆ ಶುಕ್ರವಾರ ರಜೆ ಘೋಷಿಸಿದ್ದಾರೆ. ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಗುರುವಾರ ಮಕ್ಕಳು ಶಾಲೆಗೆ ತೆರಳಲು ಪರದಾಡುವ ಸ್ಥಿತಿ ನಿರ್ಮಾಣವಾಯಿತು. ಸಂಜೆಯವರೆಗೆ ಮಳೆ ಇಳಿಕೆಯಾಗದ ಹಿನ್ನೆಲೆ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ತಾಲೂಕಿನ ಎಲ್ಲ ಶಾಲೆಗಳಿಗೆ ನಾಳೆ ರಜೆ ಘೋಷಿಸಿದರು.

ಪಪಂ ಮಾಜಿ ಉಪಾಧ್ಯಕ್ಷೆಗೆ ಎಚ್1ಎನ್1
ಎಚ್.ಡಿ. ಕೋಟೆ: ಇಲ್ಲಿನ ಪಪಂ ಮಾಜಿ ಉಪಾಧ್ಯಕ್ಷೆ ಇಂದಿರಾ ರಾಜು ಅವರಿಗೆ ಎಚ್1ಎನ್1 ಇರುವುದಾಗಿ ಜಿಲ್ಲಾ ಆರೋಗ್ಯಾಧಿಕಾರಿ ಮಾಲೇಗೌಡ ದೃಢಪಡಿಸಿದ್ದಾರೆ. ಇಲ್ಲಿನ ಮಂಜುನಾಥ ಚಿತ್ರಮಂದಿರದ ಹಿಂಭಾಗದ ರಸ್ತೆಯಲ್ಲಿ ವಾಸವಾಗಿರುವ ಮಾಜಿ ಉಪಾಧ್ಯಕ್ಷೆ ಇಂದಿರಾ ರಾಜುವಿಗೆ ಕಳೆದ ಒಂದು ವಾರದ ಹಿಂದೆ ಜ್ವರವು ಕಾಣಿಸಿಕೊಂಡಿದ್ದು, ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರೂ ಯಾವುದೆ ಬದಲಾವಣೆಯು ಕಾಣದ ಹಿನ್ನೆಲೆ ಮೈಸೂರಿನ ಅಪೊಲೋ ಆಸ್ಪತ್ರೆ ದಾಖಲಿಸಲಾಗಿದೆ. ವೈದ್ಯರು ಅವರ ರಕ್ತವನ್ನು ಪರೀಕ್ಷೆಗಾಗಿ ಬೆಂಗಳೂರಿಗೆ ಕಳುಹಿಸಿದ್ದು, ಅಲ್ಲಿ ಎಚ್1ಎನ್1 ಇರುವುದು ದೃಢಪಡಿಸಿದ್ದಾರೆ. ಇದಾದ ಬಳಿಕ ವೈದ್ಯೆ ಪುಷ್ಪರಾಣಿ ಹಾಗೂ ಸಿಬ್ಬಂದಿ ಅವರ ನಿವಾಸದ ಸುತ್ತಮುತ್ತಲಿನ ಮನೆಗಳಿಗೆ ತೆರಳಿ ಶುಚಿತ್ವ ಕಾಪಾಡಿಕೊಳ್ಳುವಂತೆ ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement