ಜಿಲ್ಲಾದ್ಯಂತ ಕ್ಷೀರಭಾಗ್ಯ ಯೋಜನೆಗೆ ಚಾಲನೆ
ಕ.ಪ್ರ.ವಾರ್ತೆ ಮೈಸೂರು ಆ. 1
ಅಪೌಷ್ಟಿಕತೆ ಹೋಗಲಾಡಿಸುವ ಸಲುವಾಗಿ ಶಾಲಾ ಮಕ್ಕಳಿಗೆ ಸರ್ಕಾರ ಜಾರಿಗೆ ತಂದಿರುವ ಕ್ಷೀರಭಾಗ್ಯ ಯೋಜನೆಗೆ ಜಿಲ್ಲಾಧಿಕಾರಿ ಸಿ. ಶಿಖಾ ಗುರುವಾರ ಚಾಲನೆ ನೀಡಿದರು. ಜಿಲ್ಲಾಡಳಿತ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಂಜನಗೂಡು ತಾಲೂಕಿನ ತಾಂಡವಪುರ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಮಕ್ಕಳಿಗೆ ಹಾಲು ನೀಡುವ ಮೂಲಕ ಅವರು ಉದ್ಘಾಟಿಸಿದರು. ಜಿಪಂ ಸಿಇಒ ಪಿ.ಎ. ಗೋಪಾಲ, ಡಿಡಿಪಿಐ ಬಿ.ಕೆ. ಬಸವರಾಜು, ಡಿಎಚ್ಒ ಡಾ.ಎಸ್.ಎಂ. ಮಾಲೇಗೌಡ, ಜಿಲ್ಲಾ ಅಕ್ಷರ ದಾಸೋಹ ಕಾರ್ಯಕ್ರಮ ಶಿಕ್ಷಣಾಧಿಕಾರಿಗಳಾದ ಲಿಂಗರಾಜು, ಡಾ. ಕಾಂತಾ ಇದ್ದರು.