ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಸುತ್ತೂರಲ್ಲಿ ಕ್ಷೀರಭಾಗ್ಯ ಯೋಜನೆಗೆ ಚಾಲನೆ

Srinivasa Murthy VN
Updated On : 2 Aug 2013, 12:11 pm

ಸುತ್ತೂರು: ನಂಜನಗೂಡು ತಾಲೂಕಿನ ಸುತ್ತೂರಿನಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಸರ್ಕಾರ ಜಾರಿಗೆ ತಂದಿರುವ ಕ್ಷೀರಭಾಗ್ಯ ಯೋಜನೆಗೆ ಗುರುವಾರ ಚಾಲನೆ ನೀಡಲಾಯಿತು. ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ವಿ.ಎಂ ನಾಗೇಂದ್ರ ಅವರ ನೇತೃತ್ವದಲ್ಲಿ ಮಕ್ಕಳಿಗೆ ಹಾಲು ವಿತರಿಸಲಾಯಿತು. ಎಸ್‌ಡಿಎಂಸಿ ಅಧ್ಯಕ್ಷೆ ಇಂದ್ರಮ್ಮ, ಉಪಾಧ್ಯಕ್ಷ ಬಿ.ಎಸ್. ರಂಗಸ್ವಾಮಿ, ಸದಸ್ಯರು ಹಾಗೂ ಮುಖ್ಯ ಶಿಕ್ಷಕ ಎ. ಮಹದೇವ ಇದ್ದರು.

ಕ್ಷೀರ ಭಾಗ್ಯ ಯೋಜನೆ ಸಮರ್ಪಕವಾಗಿ ಜಾರಿಗೊಳಿಸಿ
ಹುಣಸೂರು: ಸರ್ಕಾರ ಜಾರಿಗೆ ತಂದಿರುವ ಕ್ಷೀರಭಾಗ್ಯ ಯೋಜನೆಯನ್ನು ಶಿಕ್ಷಕರು ಚಾಚು ತಪ್ಪದೆ ಅನುಷ್ಠಾನಗೊಳಿಸಬೇಕು ಹಾಗೂ ಮಕ್ಕಳ ಪೌಷ್ಟಿಕ ಆಹಾರದಲ್ಲಿ ದುರುಪಯೋಗವಾಗದಂತೆ ಎಚ್ಚರ ವಹಿಸಬೇಕೆಂದು ಉಪವಿಭಾಗಾಧಿಕಾರಿ ವಿನೂತಪ್ರಿಯಾ ತಾಕೀತು ಮಾಡಿದರು. ತಾಲೂಕಿನ ಕಲ್ಕುಣಿಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಕ್ಷೀರಭಾಗ್ಯ ಯೋಜನೆಯ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಜ್ಯ ಸರ್ಕಾರ ಶಾಲಾ ಮಕ್ಕಳಿಗೆ ಹಲವಾರು ಯೋಜನೆ ಜಾರಿಗೆ ತಂದಿದೆ. ಶಿಕ್ಷಕರು ಸಮರ್ಪಕವಾಗಿ ತಲುಪಿಸುವ ಜೊತೆಗೆ, ಗುಣಮಟ್ಟದ ಶಿಕ್ಷಣ ನೀಡಬೇಕೆಂದು ತಿಳಿಸಿದರು. ಶಿಕ್ಷಕರು ಪ್ರತಿನಿತ್ಯ ನಂದಿನಿ ಹಾಲಿನ ಪೌಡರ್‌ಅನ್ನು ಪರಿಶೀಲನೆ ಮಾಡಿ, ನಂತರ ಮಕ್ಕಳಿಗೆ ನೀಡಬೇಕು. ಯಾವುದೆ ಸಮಸ್ಯೆಗಳು ಉದ್ಭವಿಸದಂತೆ ಎಚ್ಚರವಹಿಸಬೇಕೆಂದರು. ಸಂಬಂಧಿಸಿದ ಅಧಿಕಾರಿಗಳು ಸಹ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಹೇಳಿದರು. ಕ್ಷೇತ್ರ ಶಿಕ್ಷಣಾಧಿಕಾರಿ ರಾಜಶೇಖರ್, ಸಿಡಿಪಿಒ ಜಯಶೀಲ್ ಮಾತನಾಡಿದರು. ಎಸಿಡಿಪಿಓ ವೆಂಕಟಪ್ಪ, ಡಿಡಿಪಿಐ ವಿಷಯ ತಜ್ಞ ಶಿವಕುಮಾರಸ್ವಾಮಿ, ಅಕ್ಷರ ದಾಸೋಹ ನಿರ್ದೇಶಕ ಮೊಗಣ್ಣ, ಸಿಆರ್‌ಪಿ ನರಸಿಂಹ ಮೂರ್ತಿ ಇದ್ದರು. ಮುಖ್ಯ ಶಿಕ್ಷಕ ಬಿ.ಸಿ. ಅಣ್ಣಯ್ಯ ಸ್ವಾಗತಿಸಿದರು. ಶಾಲಾ ಮಕ್ಕಳು ಪ್ರಾರ್ಥಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement