ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಮೌಲ್ಯ, ಸಂಸ್ಕಾರ, ಸಂಸ್ಕೃತಿ ರಕ್ಷಿಸಿ: ನಿರ್ಮಲಾ ಮಠಪತಿ

Srinivasa Murthy VN
Updated On : 3 Aug 2013, 12:36 pm

ಕ.ಪ್ರ.ವಾರ್ತೆ ಮೈಸೂರು ಆ. 2
ಜನಮಾನಸದಲ್ಲಿ ಕಾಣೆಯಾಗಿರುವ ಮೌಲ್ಯ ಹಾಗೂ ಸಂಸ್ಕಾರ ಉಳಿಸಿ ಭಾರತೀಯ ಸಂಸ್ಕೃತಿ ರಕ್ಷಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ನಿರ್ಮಲಾ ಮಠಪತಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಜೆ.ಪಿ ನಗರದ ಜೆಎಸ್ಎಸ್ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಸಾಂಸ್ಕೃತಿಕ ವೇದಿಕೆ ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬರಲ್ಲಿಯೂ ಒಂದಲ್ಲ ಒಂದು ರೀತಿಯ ಪ್ರತಿಭೆ ಇರುತ್ತದೆ. ವಿದ್ಯಾರ್ಥಿಯಲ್ಲಿ ಅಡಗಿರುವ ಸುಪ್ತ ಪ್ರತಿಭೆ ಅನಾವರಣಗೊಳಿಸಲು ಸಾಂಸ್ಕೃತಿಕ ವೇದಿಕೆಯು ಒಂದು ಮಾರ್ಗವಾಗಿದ್ದು, ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಹೇಳಿದರು.
ಭಾರತೀಯ ಜೀವ ವಿಮಾ ನಿಗಮದ ಅಧಿಕಾರಿ ಹಾಗೂ ಕ್ರೀಡಾಪಟು ಮಹೇಂದ್ರರಾವ್ ಕ್ರೀಡಾ ಚಟುವಟಿಕೆ ಉದ್ಘಾಟಿಸಿ ಮಾತನಾಡಿದರು.
ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೆ.ಎಂ. ಪುಟ್ಟು ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲ ಉಮಾಮಹೇಶ್ವರಿ, ದೈಹಿಕ ಶಿಕ್ಷಣ ಉಪನ್ಯಾಸಕ ಎಚ್.ಎನ್. ನಾಗರಾಜ ಇದ್ದರು. ಸಾಂಸ್ಕೃತಿಕ ವೇದಿಕೆಯ ಸಂಚಾಲಕ ಎಚ್.ಎಂ. ಮಹದೇವಪ್ಪ ಸ್ವಾಗತಿಸಿದರು. ವಿದ್ಯಾರ್ಥಿ ಹರಪ್ರಸಾದ್ ವಂದಿಸಿದರು. ಕನ್ನಡ ಉಪನ್ಯಾಸಕ ಎಸ್. ನಂದೀಶ್ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement