ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಕ್ರೀಡಾ, ಸಾಂಸ್ಕೃತಿಕ ಚಟುವಟಿಕೆಗೆ ಚಾಲನೆ

Srinivasa Murthy VN
Updated On : 5 Aug 2013, 12:38 pm

ಕ.ಪ್ರ.ವಾರ್ತೆ ಮೈಸೂರು ಆ. 4
2013- 14ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆ, ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಇಲ್ಲಿನ ರಂಗರಾವ್ ಪದವಿಪೂರ್ವ ಕಾಲೇಜಿನಲ್ಲಿ ಚಾಲನೆ ನೀಡಲಾಯಿತು.
ಕೆಆರ್‌ಎಸ್ ರಸ್ತೆಯಲ್ಲಿರುವ ಪೂಜಾ ಭಗವತ್ ಮೆಮೊರಿಯಲ್ ಮಹಾಜನ ಶಿಕ್ಷಣ ಕೇಂದ್ರದ ಸಭಾಂಗಣದಲ್ಲಿ ಏರ್ಪಡಿಸಿದ್ದ ಈ ಕಾರ್ಯಕ್ರಮವನ್ನು ಮೈಸೂರು ವಿವಿಯ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಸಂಯೋಜನಾಧಿಕಾರಿ ಪ್ರೊ. ಎಂ. ರುದ್ರಯ್ಯ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಕಳೆದ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳಿಗೆ 527 ಅಂಕ ಗಳಿಸಿ ಕಾಲೇಜಿಗೆ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿರುವ ರಮ್ಯಾ ಅವರನ್ನು ಸನ್ಮಾನಿಸಲಾಯಿತು.
ಮಹಾಜನ ಸ್ನಾತಕೋತ್ತರ ಕೇಂದ್ರದ ವ್ಯವಹಾರ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಶಿವಶಂಕರ್ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಟಿ.ಡಿ. ರಾಧಕೃಷ್ಣ ಹಾಗೂ ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ವಿಶ್ವನಾಥಯ್ಯ ಶೆಟ್ಟಿ ಇದ್ದರು.   

'ಕಸ ಹಾಕೋರಿಗೆ ದಂಡವೇ ಬ್ರಹ್ಮಾಸ್ತ್ರವಲ್ಲ'
ಮೈಸೂರು: ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು, ಕಸ ಹಾಕುವವರಿಗೆ ದಂಡ ವಿಧಿಸುವ ರಾಜ್ಯ ಸರ್ಕಾರದ ಕಟ್ಟಾಜ್ಞೆಯಿಂದ ಯಾವುದೇ ಪ್ರಯೋಜನವಿಲ್ಲ. ಬದಲಾಗಿ ಸ್ವಚ್ಛತೆ ಬಗ್ಗೆ ಪ್ರಾಥಮಿಕ ಶಿಕ್ಷಣದಿಂದ ಜಾಗೃತಿ ಮೂಡಿಸಿದರೆ ಅಂದುಕೊಂಡದ್ದು ಫಲಿಸುತ್ತದೆ ಎಂದು ಶಾರದಾದೇವಿ ಮಹಿಳಾ ಸಮಾಜದ ಮಾಜಿ ಅಧ್ಯಕ್ಷೆ ಮೀನಾಕ್ಷಿ ಶಾಸ್ತ್ರಿ ಅಭಿಪ್ರಾಯಪಟ್ಟಿದ್ದಾರೆ. ಸರ್ಕಾರವು ಪ್ರಾಥಮಿಕದಿಂದ ಉನ್ನತ ಶಿಕ್ಷಣದವರೆಗೂ ಶಾಲಾ- ಕಾಲೇಜುಗಳಲ್ಲಿ ತಿಳಿವಳಿಕೆ ನೀಡಿ ಒಳ್ಳೆಯ ಪರಿಸರ ನಿರ್ಮಿಸುವಂತೆ ಮಾಡುವುದು ಪ್ರಯೋಜನಕಾರಿಯೇ ಹೊರತು ಕೇವಲ ದಂಡ ಹೇರುವುದರಿಂದ ಉಪಯೋಗವಿಲ್ಲ ಎಂದಿದ್ದಾರೆ..

ಸಾರ್ವಜನಿಕರಿಂದ ಅಹವಾಲು ಸ್ವೀಕಾರ
ಕ.ಪ್ರ.ವಾರ್ತೆ ಮೈಸೂರು ಆ. 4
ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಹಾಗೂ ವಾರ್ಡ್ ನಂ. 59ರ ಪಾಲಿಕೆ ಸದಸ್ಯೆ ರೇಷ್ಮಾ ಜಬಿನ್ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ರೇಷ್ಮಾ ಜಬಿನ್ ಮಾತನಾಡಿ, ಪಾಲಿಕೆ ಚುನಾವಣೆ ನಡೆದ ಕೆಲವು ದಿನಗಳಲ್ಲೇ ವಾರ್ಡಿನಲ್ಲಿ ಕುಡಿಯುವ ನೀರು, ಸಮರ್ಪಕ ರಸ್ತೆ, ಚರಂಡಿ ಸೌಕರ್ಯ ಕಲ್ಪಿಸಲಾಗಿದೆ. ಹಲವು ಅಭಿವೃದ್ಧಿ ಕಾರ್ಯಕ್ರಮಗಳು ಪ್ರಗತಿಯಲ್ಲಿವೆ. ವಾರ್ಡ್ ನಂ. 59 ನಗರದಲ್ಲೇ ಅತಿ ದೊಡ್ಡ ಹಾಗೂ ಅತೀ ಹಿಂದುಳಿದ ವಾರ್ಡ್ ಆಗಿದೆ. ಇದರ ಅಭಿವೃದ್ಧಿ ಮತ್ತಷ್ಟು ಶ್ರಮಿಸುವುದಾಗಿ ತಿಳಿಸಿದರು. ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಪಿ.ಎಂ. ಹುಸೇನ್, ಸದಸ್ಯರಾದ ಅಕ್ರಂ ಪಾಷಾ, ಅಮ್ಜದ್ ಖಾನ್, ವಾರ್ಡ್ ನಂ. 59ರ ಅಧ್ಯಕ್ಷ ಜಮೀರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement