ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಅಕ್ರಮ ನೇಮಕಾತಿ: ಸೂಕ್ತ ಕ್ರಮಕ್ಕೆ ಒತ್ತಾಯ

Rashmi Kasaragodu
Updated On : 6 Aug 2013, 12:44 pm

ಕ.ಪ್ರ.ವಾರ್ತೆ   ಮೈಸೂರು   ಆ. 5
ವಾಣಿ ವಿಲಾಸ ನೀರು ಸರಬರಾಜು ಮಂಡಳಿಯಲ್ಲಿನ ಅಕ್ರಮ ನೇಮಕಾತಿ ಸಂಬಂಧ ಕ್ರಮ ಕೈಗೊಳ್ಳದಿದ್ದರೆ ಲೋಕಾಯುಕ್ತರಿಗೆ ದೂರು ನೀಡುವುದಾಗಿ ಮೈಸೂರು ಮಹಾನಗರ ಪಾಲಿಕೆ ವಾಣಿವಿಲಾಸ ನೀರು ಸರಬರಾಜು ಮಂಡಳಿ ನೌಕರರ ಒಕ್ಕೂಟದ ಅಧ್ಯಕ್ಷ ಎಸ್. ಶಾಂತಪ್ಪ ಎಚ್ಚರಿಸಿದರು.
ಮಂಡಳಿಯ ಗುತ್ತಿಗೆದಾರರು ಕಳೆದ 2004ರ ಜನವರಿಯಲ್ಲಿ ವಿವಿಧ ಸ್ಥಾನದಲ್ಲಿ ಕೆಲಸ ನಿರ್ವಹಿಸಲು 213 ಮಂದಿಯನ್ನು ನೇಮಕ ಮಾಡಿಕೊಂಡು ಅವರ ಭವಿಷ್ಯ ನಿಧಿ ಹಣವನ್ನು ಕಡಿತಗೊಳಿಸಿಕೊಂಡಿದ್ದಾರೆ. ಅಲ್ಲದೆ ಸಮಾನ ಕೆಲಸಕ್ಕೆ ಸಮಾನ ವೇತನದಂತೆ 18 ವರ್ಷ ಮೀರದವರನ್ನು ಸಹ ಅಕ್ರಮವಾಗಿ ಕೆಲಸಕ್ಕೆ ಸೇರಿಸಿಕೊಂಡಿದ್ದಾರೆ. ಈ ಸಂಬಂಧ ಆ. 29ರಂದು ಪ.ಜಾತಿ ಆಯೋಗದ ಮುಂದೆ ವಿಚಾರಣೆ ಇದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ತಮಗೆ ನ್ಯಾಯ ದೊರಕದಿದ್ದರೆ ಈ ಸಂಬಂಧ ಲೋಕಾಯುಕ್ತರಿಗೆ ದೂರು ನೀಡಲಾಗುವುದು ಎಂದು ತಿಳಿಸಿದರು. ಅನ್ವರ್ ಅಹಮದ್, ರಾಜು, ರವಿಕುಮಾರ್, ರಾಜು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement